ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಲೋಕಾಯುಕ್ತ (Lokayukta) ಸಂಸ್ಥೆಯಿಂದ ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಸೆಪ್ಟೆಂಬರ್ 04 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಗುವುದು.
ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲ್ಲಿದ್ದಾರೆ. ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಳಾದ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಕೆ. ಬಾಬ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಕೆ. ವಂಶಿಕೃಷ್ಣ , ಕರ್ನಾಟಕ ಲೋಕಾಯುಕ್ತ ವಿಚಾರಣೆಗಳು-1 ಉಪ ನಿಬಂಧಕರಾದ ಅರವಿಂದ ಎನ್.ವಿ, ಹಿರಿಯ ಶ್ರೇಣಿ ದಿವಾಣಿ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲ್ ಭೀಮಸೇನ ಬಗಾಡಿ ಅವರು ಉಪಸ್ಥಿತರಿರುವರು.