Will not yield to threats and intimidation: Deputy Lokayukta B. Veerappa

ಬೆದರಿಕೆ, ಹೆದರಿಕೆಗಳಿಗೆ ಬಗ್ಗಲ್ಲ: ಉಪ ಲೋಕಾಯುಕ್ತ ಬಿ.ವೀರಪ್ಪ

ಬೆಂ.ಗ್ರಾ.ಜಿಲ್ಲೆ; ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತರಾದ ನ್ಯಾ. ಬಿ.ವೀರಪ್ಪ (B. Veerappa) ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೇವನಹಳ್ಳಿ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಲೋಕಾಯುಕ್ತದಲ್ಲಿ 25 ಸಾವಿರ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳ ಇತ್ಯರ್ಥ ಮಾಡಲು ಕ್ರಮವಹಿಸಲಾಗಿದೆ. ಇದರಲ್ಲಿ ಸುಮಾರು 10 ಸಾವಿರ ಸುಳ್ಳು ಕೇಸ್‌ಗಳು ಇವೆ. ಯಾವುದೇ ಕೇಸ್ ಬಂದರೂ ಅದನ್ನು ಕ್ರಮ ಬದ್ದವಾಗಿ ವಿಲೇವಾರಿ ಮಾಡಬೇಕು. ಸುಳ್ಳು ಪ್ರಕರಣಗಳಿಂದ ಉಳಿದ ಪ್ರಕರಣಗಳನ್ನು ಕೂಡ ಇತ್ಯರ್ಥ ಮಾಡುವುದು ಸವಾಲಿನ ಕೆಲಸವಾಗುತ್ತಿದೆ. ಇದರಿಂದ ಯಾವ ಪ್ರಕರಣಗಳಲ್ಲಿ ಸತ್ಯತೆ ಇದೆಯೋ ಅಂತಹ ಪ್ರಕರಣಗಳನ್ನು ಮಾತ್ರ ದಾಖಲಿಸಬೇಕು. ಇಲ್ಲವಾದಲ್ಲಿ ಸುಳ್ಳು ಕೇಸ್ ಹಾಕಿದ ಅರ್ಜಿದಾರರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಬಹುದು ಎಂದರು.

ಅಧಿಕಾರಿಗಳಿಗೆ ಸರ್ಕಾರಿ ಸೇವೆ ಸಿಗುವುದು ಸಾರ್ವಜನಿಕರ ಸೇವೆಗೆ ಒಂದು ಉತ್ತಮ ವೇದಿಕೆ, ಸಾರ್ವಜನಿಕರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ ತ್ವರಿತವಾಗಿ ಮುಗಿಸಬೇಕು. ಅಧಿಕಾರಿವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದರು.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮರಂಗ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬ ಮಾತುಗಳು ಜನರಿಂದ ಕೇಳಿಬರುತ್ತಿದೆ. ಅಧಿಕಾರಿಗಳು ಇದನ್ನು ಸರಿಪಡಿಸಬೇಕು. ಅಧಿಕಾರದ ಜತೆಗೆ ಸಂಸ್ಕಾರ ಕೂಡ ಇರಬೇಕು. ಅನ್ಯಾಯ, ಆಕ್ರಮದಿಂದ ಮಾಡಿದ ಆಸ್ತಿಯಿಂದ ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದರು.

ಬೆದರಿಕೆ, ಹೆದರಿಕೆಗಳಿಗೆ ಬಗ್ಗಲ್ಲ

ಕೆಲವೆಡೆ ಲೋಕಾಯುಕ್ತ ದಾಳಿ ನಡೆಸಿದ ಸಂದರ್ಭದಲ್ಲಿ ಬೆದರಿಕೆ ಹಾಕುವ ಕೆಲಸವಾಗುತ್ತದೆ. ಆದರೆ ಯಾರ ಬೆದರಿಕೆಗೂ ಬಗ್ಗಲ್ಲ. ನ್ಯಾಯಯುತವಾಗಿ ಎಲ್ಲವನ್ನೂ ವಿಚಾರಣೆ ನಡೆಸಲಾಗುತ್ತದೆ ಎಂದರು.

ವಿಐ, ಆರ್‌ಐ ಗಳ ಮಾಹಿತಿ ನೀಡಲು ಸೂಚನೆ

ಕೆಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುವ ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರ ಕುಟುಂಬ ವಿವರ, ಆಸ್ತಿ ವಿವರ, ಅವಲಂಬಿತ ಸದಸ್ಯರ ವಿವರವನ್ನು ಒಳಗೊಂಡ ಸಂಪೂರ್ಣ ಮಾಹಿತಿಯನ್ನು ಒಂದು ತಿಂಗಳ ಒಳಗಾಗಿ ವರದಿ ನೀಡಿ ಎಂದು ಉಪವಿಭಾಗಾಧಿಕಾರಿಗೆ ಸೂಚಿಸಿದರು.

ಮಾಜಿ ಸೈನಿಕನಿಗೆ ಸೂಕ್ತ ನ್ಯಾಯ ಒದಗಿಸಲು ಸೂಚನೆ

ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದ ಮಾಜಿ ಸೈನಿಕನ ಎರಡು ಎಕರೆ ಜಮೀನಿಗೆ ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸಲು ವಿಳಂಬವಾಗುತ್ತಿದೆ. ಈ ಪ್ರಕರಣದಲ್ಲಿ ಆ ಜಮೀನಿನ ಮೇಲೆ ಮಾಲಿಕರು ಪೋಸಿಶನ್ ಲಿ ಇದಾರ ಇಲ್ಲವಾ ಎಂಬುದರ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಒತ್ತುವರಿ, ಜಮೀನು ಸರ್ವೇ ಕಾರ್ಯ, ಸರ್ಕಾರಿ ರಸ್ತೆ, ಸ್ಮಶಾನ ಒತ್ತುವರಿ ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ, ವಿಲೇವಾರಿ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಶ್ರೀ ಶೈಲ್ ಭೀಮಸೇನ ಬಗಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ

[ccc_my_favorite_select_button post_id="113637"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!