ಚಿಕ್ಕಬಳ್ಳಾಪುರ: ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಕೇಶವಪ್ಪ (45 ವರ್ಷ) ಎಂದು ಗುರುತಿಸಲಾಗಿದೆ.
ಬ್ರಿಡ್ಜ್ ನ ಅವೈಜ್ಞಾನಿಕ ಕಾಮಗಾರಿಯಿಂದ ದುರ್ಘಟನೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಎರಡು ವರ್ಷಗಳಿಂದ ನಡೆಯುತ್ತಿರುವ ಬ್ರಿಡ್ಜ್ ಕಾಮಗಾರಿ ಇದಾಗಿದ್ದು, ಬ್ರಿಡ್ಜ್ ಕಾಮಗಾರಿ ಹಿನ್ನೆಲೆ ಸರ್ವೀಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ.
ಈ ಹಿಂದೆ ಇದೇ ರೀತಿ ಲಾರಿಗಳ ಕೆಳಗೆ ಬಿದ್ದು ಹಲವರು ಸಾವನ್ನಪ್ಪಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ