ಬೆಂ.ಗ್ರಾಂ.ಜಿಲ್ಲೆ: 2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ (Dasara Games) ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 08 ರಂದು ಬೆಳಿಗ್ಗೆ 10:30ಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.
ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೇರಿಸಲಿದ್ದಾರೆ.
ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರು ವಹಿಸಿಕೊಳ್ಳಲಿದ್ದಾರೆ.
5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಉದ್ಘಾಟನಾ ಸಮಾರಂಭದಲ್ಲಿ ಘನ ಉಪಸ್ಥಿತರಿರುವರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜ್, ರಾಮೋಜಿಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವಿಶ್ವನಾಥರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರು ಸುಮಿತ್ರ ಆನಂದ್, ಉಪಾಧ್ಯಕ್ಷರು ಮಲ್ಲೇಶ್ ಬಾಬು, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ ಜಾಫರ್ ಇವರು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ ಬಾಬಾ, ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಟಿ.ಜಯಲಕ್ಷ್ಮೀ ಇವರುಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರುವರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲೆಯ ನಗರಸಭೆ ಮತ್ತು ಪುರಸಭೆಯ ಸದಸ್ಯರು, ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲ ನಾಮ ನಿರ್ದೇಶಿತ ಸದಸ್ಯರು, ಜಿಲ್ಲೆಯ ಮುಖಂಡರುಗಳು, ಹಿರಿಯ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.