CKR 45 with Ambassador car Fellowship of BJP leaders: Video shared by B.Y. Vijayendra

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

ಬೆಂಗಳೂರು: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದೆ. ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, 1988ರಲ್ಲಿ ಖರೀದಿಸಿದ ಅಂಬಾಸಿಡರ್ ಕಾರು ಅದಾಗಿದೆ. ಆ ಕಾರಿನ ಸಂಖ್ಯೆ ಸಿಕೆಆರ್ 45 ಆಗಿದ್ದು, ಇವತ್ತೂ ಅದು ನಮ್ಮ ಮನೆಯಲ್ಲಿದೆ ಎಂದು ತಿಳಿಸಿದರು.

ನಿನ್ನೆ ಶಿಕಾರಿಪುರದಲ್ಲಿ ಆ ಕಾರನ್ನು ಬಳಸಿದೆ. ರಾಜ್ಯದಲ್ಲಿ ಬಿಜೆಪಿ ಇಷ್ಟು ಎತ್ತರಕ್ಕೆ ಬೆಳೆದಿದ್ದರೆ, ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಸಿಕ್ಕಿದ್ದರೆ, ತಂದೆಯವರು ಬಳಸುತ್ತಿದ್ದ ಈ ಕಾರು ಪ್ರಮುಖ ಪಾತ್ರ ವಹಿಸಿದೆ. ಯಡಿಯೂರಪ್ಪಜೀ, ಅನಂತಕುಮಾರ್ ಜೀ, ಅನೇಕ ಹಿರಿಯರು ಅದೇ ಅಂಬಾಸಿಡರ್ ಕಾರಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಹಳ್ಳಿ ಹಳ್ಳಿಗೆ ತೆರಳಿದ್ದರು.

ರಾಯಚೂರು, ಗುಲ್ಬರ್ಗ, ಬಳ್ಳಾರಿ, ಯಾದಗಿರಿ ಸೇರಿ ಯಾವ ಜಿಲ್ಲೆಯನ್ನೂ ಬಿಟ್ಟಿಲ್ಲ ಎಂದು ನೆನಪಿಸಿದರು.
ಅದೇ ಅಂಬಾಸಿಡರ್ ಕಾರಿನಲ್ಲಿ ಲಕ್ಷಾಂತರ ಕಿಮೀ ಪ್ರವಾಸ ಮಾಡಿದ್ದಾರೆ. ಸಿಕೆಆರ್ 45 ಕಾರಿನ ಜೊತೆ ಬಹಳಷ್ಟು ಹಿರಿಯ ನಾಯಕರ ಒಡನಾಟ ಇದೆ. ಒಂದು ಆತ್ಮೀಯತೆ ಇದೆ.

ನಿನ್ನೆ ನಾನು ವಿಡಿಯೋ ಹಂಚಿಕೊಂಡಾಗ ಸಾಕಷ್ಟು ಹಿರಿಯ ಕಾರ್ಯಕರ್ತರು ನಾನು ನೆನಪು ಮಾಡಿಕೊಂಡಿದ್ದಕ್ಕೆ ನನಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ನುಡಿದರು.

ಆ ಕಾರಿನ ಜೊತೆ ಭಾವನಾತ್ಮಕ ಸಂಬಂಧವಿದೆ. ಅದೊಂದು ರೀತಿ ಕಮಲ ರಥ ಎಂದರೆ ತಪ್ಪಾಗಲಾರದು ಎಂದು ವಿಶ್ಲೇಷಿಸಿದರು. ಹಿಂದೆ ಯಡಿಯೂರಪ್ಪನವರು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರವಾಸ ಹೊರಟಿದ್ದರು. ನಾಯಕ್ ಎಂಬವರು ಚಾಲಕರಾಗಿದ್ದರು. ತರೀಕೆರೆಯಲ್ಲಿ ಬೆಳಿಗ್ಗೆ ಇದೇ ಕಾರು ಪಲ್ಟಿಯಾಗಿ ಅಪಘಾತ ಆಗಿತ್ತು. ಆದರೆ, ಯಾರಿಗೂ ಸಣ್ಣ ಗಾಯವೂ ಆಗಿರಲಿಲ್ಲ ಎಂದು ನೆನಪು ಮಾಡಿದರು. ಯಡಿಯೂರಪ್ಪನವರು ದಿನಪತ್ರಿಕೆ ಓದುತ್ತಿದ್ದರು. ಯಾರಿಗೂ ಸಣ್ಣ ಗಾಯವೂ ಆಗಿರಲಿಲ್ಲ ಎಂದು ವಿವರಿಸಿದರು.

ಆ ಕಾರು ಅಷ್ಟೇ ಗಟ್ಟಿಮುಟ್ಟಾಗಿತ್ತು ಎಂದ ಅವರು, ಸ್ನೇಹಿತರ ಜೊತೆ ಪ್ರವಾಸ ಹೋಗಬೇಕಿತ್ತು. ಆ ಕಾಲದಲ್ಲಿ ಯಾವುದೇ ವ್ಯವಸ್ಥೆ ಇರಲಿಲ್ಲ. ಕಾರಿಗಾಗಿ ತಂದೆಯವರ ಜೊತೆ ಗಲಾಟೆ ಮಾಡಿದ್ದೆ; ಆಗ ಸಾಹೇಬರು ಅದು ಪಕ್ಷದ ಕಾರು; ಹಾಗೆಲ್ಲ ಬಳಸಲು ಬರುವುದಿಲ್ಲ ಎಂದು ತಿಳಿಸಿದ್ದರು.

ಶಿಕಾರಿಪುರದಲ್ಲಿ ಕೆಲವು ಬಡವರು ಆಸ್ಪತ್ರೆಗೆ ಶಿವಮೊಗ್ಗಕ್ಕೆ ಹೋಗಬೇಕಿತ್ತು. ಆ ಕಾರನ್ನು ಕಳಿಸಿಕೊಡುತ್ತಿದ್ದರು. ಅದನ್ನು ತಂದೆಯವರಿಗೆ ನೆನಪಿಸಿದ್ದೆ. ಮಕ್ಕಳು ಕೇಳಿದರೆ ಕೊಡುವುದಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ನನಗೆರಡು ತಟ್ಟಿದ್ದರು ಎಂದು ನಗುತ್ತ ಮನದಾಳದ ನೆನಪುಗಳನ್ನು ಮಾಧ್ಯಮಗಳ ಮುಂದಿಟ್ಟರು.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!