CM, DCM offer prayers to Krishna River

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah) ಮನವಿ ಮಾಡಿದರು.

ಅವರು ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ಪ್ರಶಸ್ತಿ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.

ಗೆಜೆಟ್ ಅಧಿಸೂಚನೆಯಾದರೆ ಅಣೆಕಟ್ಟು ಎತ್ತರಿಸಲು ಅನುಕೂಲ

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. . ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದರು.

ನೀರಾವರಿ ನಮ್ಮ ಆದ್ಯತಾ ವಲಯ

ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿ ವಿಜಯಪುರ ಮತ್ತು ಬೆಂಗಳೂರಿನಲ್ಲಿದ್ದರೂ, ರೈತರ ಬದುಕನ್ನು ಹಸನುಗೊಳಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ರೈತರ ಬವಣೆಯನ್ನು ನಿವಾರಿಸಿ, ಸಮುದ್ರಕ್ಕೆ ವ್ಯರ್ಥವಾಗಿ ಸೇರುವ ಕೃಷ್ಣೆಯ ನೀರನ್ನು ಉಳಿಸಿ, ರೈತರ ಕೃಷಿ ಚಟುವಟಿಕೆಗೆ ಬಳಸುವಂತಾಗಬೇಕೆಂಬ ಆಶಯವನ್ನು ಮುಖ್ಯಮಂತ್ರಿಗಳು ಹಾಗೂ ನಾನು ಹೊಂದಿದ್ದು, ಈ ದಿಸೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಂತಹಂತವಾಗಿ ಸ್ಥಾಪನೆ

ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು,. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ , ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಾನುಮುಷ್ತಾಕ್ ರಿಂದ ದಸರಾ ಉದ್ಘಾಟನೆ- ಬಿಜೆಪಿಯಿಂದ ರಾಜಕೀಯಪ್ರೇರಿತ ವಿರೋಧ

ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯವನ್ನು ಕೋರ್ಟ್ ತೀರ್ಮಾನಿಸಲಿ, ಆದರೆ ಈ ಹಿಂದೆ ಸಾಹಿತಿ ನಿಸ್ಸಾರ್ ಅಹ್ಮದ್ ಅವರು ಉದ್ಘಾಟಿಸುವುದನ್ನು ಯಾರು ವಿರೋಧಿಸಿರಲಿಲ್ಲ. ಟಿಪ್ಪು ಸುಲ್ತಾನ್ , ಮಿರ್ಜಾ ಇಸ್ಮಾಯಿಲ್ ಮೆರವಣಿಗೆಗಳನ್ನು ಏಕೆ ವಿರೋಧಿಸಲಿಲ್ಲ. ಬಿಜೆಪಿಯವರು ಬಾನು ಮುಷ್ತಾಕ್ ರವರು ರಾಜಕೀಯ ದುರುದ್ದೇಶದಿಂದ ನಾಡಹಬ್ಬ ಉದ್ಘಾಟಿಸುವುದನ್ನು ವಿರೋಧಿಸುತ್ತಿದ್ದು, ಸರ್ಕಾರ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ. ಬಾನು ಮುಷ್ತಾಕ್ ರವರು ಕನ್ನಡಾಂಬೆಯ ಬಗ್ಗೆ ಹೀಗಳೆದು ಮಾತನಾಡಿರುವ ಬಗ್ಗೆ ಯಾವ ಪುರಾವೆಯಿಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್ ಪ್ರಶಸ್ತಿ ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರ ಸಾಹಿತಿಗಳಾದ ಬಾನು ಮುಷ್ತಾಕ್ ಹಾಗು ಅನುವಾದಿಸಿದ ದೀಪಾ ಬಸ್ತಿಯವರಿಗೆ ಸನ್ಮಾನಿಸಲಾಗಿದೆ. ಬಾನು ಮುಷ್ತಾಕ್ ರವರು ಕನ್ನಡ ಸಾಹಿತಿಯಾಗಿರುವ ಕಾರಣ ಅವರಿಂದ ದಸರಾವನ್ನು ಉದ್ಘಾಟಿಸಲಾಗುತ್ತಿದೆ ಎಂದರು.

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ

ಬಾಗಲಕೋಟೆಯ ಮಲ್ಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹಕ್ಕೀಡಾಗಿ ರೈತರಿಗೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯ

ಯುಕೆಪಿ ಹಂತ 3 ಕ್ಕೆ ಸಂಬಂಧಿಸಿದಂತೆ ಕೇಂದ್ರದ ಅಧಿಸೂಚನೆಗೆ ಸಂಬಂಧಪಟ್ಟ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅಧಿಸೂಚನೆಯನ್ನು ಆದಷ್ಟು ಜಾಗೃತೆಯಾಗಿ ಹೊರಡಿಸಲು ಕೇಂದ್ರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಶಿಫಾರಸ್ಸು

ಇವಿಎಂ ನ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮತದಾನವನ್ನು ತಿರುಚಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಇವಿಎಂ ನ ಗೊಂದಲ ಹಾಗೂ ತಕರಾರುಗಳಿಗೆ ಆಸ್ಪದ ನೀಡದಿರಲು,ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು. ಪ್ರಪಂಚದ ವಿವಿಧ ದೇಶಗಳಲ್ಲಿ ಇವಿಎಂ ವ್ಯವಸ್ಥೆಯನ್ನು ತೊರೆದು, ಪುನ: ಮತಪತ್ರಗಳಿಗೆ ಮೊರೆ ಹೋಗಿವೆ ಎಂದು ತಿಳಿಸಿದರು.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!