ಬೆಂ. ಗ್ರಾ. ಜಿಲ್ಲೆ: ಭಾರತರತ್ನ ಡಾ॥ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು (Teacher’s Day) ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್, ಡಾ॥ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ದೇವನಹಳ್ಳಿ, ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೆರಿಸಲ್ಲಿದ್ದಾರೆ.
ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಮತ್ತು ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತರಾಯಪ್ಪ ಕೆ, ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರಾದ ಕೋಡಿ ರಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ವಿವರ
ಕಿರಿಯ ಪ್ರಾಥಮಿಕ ಶಾಲಾ ವಿಭಾಗ
- ಪ್ರಕಾಶಮೂರ್ತಿ, ಎಂ.ಸಿ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕತತ್ತಮಂಗಲ, ದೇವನಹಳ್ಳಿ ತಾಲ್ಲೂಕು
- ಮೊಹಸಿನ್ ತಾಜ್, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಾಲ್ ಪಾಲ್ ದಿನ್ನೆ, ದೊಡ್ಡಬಳ್ಳಾಪುರ ತಾಲ್ಲೂಕು
- ವೆಂಕಟೇಶ ಎಸ್. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ,ಬಾಲೇನಹಳ್ಳಿ, ಹೊಸಕೋಟೆ ತಾಲ್ಲೂಕು
- ಜಯಶ್ರೀ ಕೆ.ಎಂ. ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಂದಿಗುಟ್ಟಿ, ನೆಲಮಂಗಲ ತಾಲ್ಲೂಕು
ಹಿರಿಯ ಪ್ರಾಥಮಿಕ ಶಾಲಾ ವಿಭಾಗ
- ಶಶಿಕಲಾ. ಆರ್. ಸಹ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಗನವಾಡಿ, ದೇವನಹಳ್ಳಿ ತಾಲ್ಲೂಕು
- ಆರ್. ರಾಜೇಶ್ವರಿ, ಹಿರಿಯ ಮುಖ್ಯ ಶಿಕ್ಷಕರು, ಎಜಾಕ್ಸ್ ಸರ್ಕಾರಿ ಪ್ರಬ್ಲಿಕ್ ಶಾಲೆ, ಬಾಶೆಟ್ಟಿಹಳ್ಳಿ ದೊಡ್ಡಬಳ್ಳಾಪುರ ತಾಲ್ಲೂಕು
- ಎಂ. ಮುನಿರಾಜು, ಸಹ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಲು. ಹೊಸಕೋಟೆ ತಾಲ್ಲೂಕು
- ರಂಗಶಾಮಯ್ಯ ಸಿ.ಎಂ. ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಮಾರಗೊಂಡನಹಳ್ಳಿ, ನೆಲಮಂಗಲ ತಾಲ್ಲೂಕು
ಪ್ರೌಢ ಶಾಲಾ ವಿಭಾಗ
- ಅನುಸೂಯ. ಕೆ. ಸಹ ಶಿಕ್ಷಕರು, ಸ.ಪ.ಪೂ.ಕಾಲೇಜು, (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ ಟೌನ್, ದೇವನಹಳ್ಳಿ ತಾಲ್ಲೂಕು
- ಕೋದಂಡರಾಮ, ಸಹ ಶಿಕ್ಷಕರು, ಜ್ಞಾನಗಂಗಾ ಅನುದಾನಿತ ಪ್ರೌಢ ಶಾಲೆ, ಕೊಡಿಗೇಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು
- ವೀಣಾ ಎಸ್. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ತಾವರೆಕೆರೆ, ಹೊಸಕೋಟೆ ತಾಲ್ಲೂಕು.
- ಲಿಂಗದೇವರು. ಟಿ. ಸಹ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಬರದಿ ಮಂಡಿಗೆರೆ,ನೆಲಮಂಗಲ ತಾಲ್ಲೂಕು.