ಕಾರ್ಮಿಕರ ಕಲ್ಯಾಣಕ್ಕಾಗಿ ಸ್ಪ್ರೀ- 2025 ವಿಶೇಷ ಯೋಜನೆ

SPREE-2025 Special Scheme for the Welfare of Workers

ಬೆಂಗಳೂರು: ಸ್ಪ್ರೀ- 2025 (SPREE-2025) (ಉದ್ಯೋಗದಾತರು ಮತ್ತು ಉದ್ಯೋಗಿಗಳನ್ನು ನೋಂದಾವಣೆ ಉತ್ತೇಜಿಸುವ ಯೋಜನೆ 2025) ಎಂಬ ಯೋಜನೆಯನ್ನು ಕಾರ್ಮಿಕರ ವಿಮಾ ನಿಗಮವು ಜಾರಿಗೆ ತಂದಿದ್ದು, ಈ ಯೋಜನೆಯು 2025ನೇ ಜುಲೈ 01 ರಿಂದ ಡಿಸೆಂಬರ್ 31 ವರೆಗೆ ಜಾರಿಯಲ್ಲಿರುತ್ತದೆ.

ಕಾರ್ಮಿಕ ಇಲಾಖೆಯು ಈ ಯೋಜನೆಯಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ನೋಂದಾವಣಿ ಮಾಡಲು ಒಂದು ಬಾರಿಯ ಅವಕಾಶವನ್ನು ನೀಡಿದೆ. ಈ ಅವಧಿಯಲ್ಲಿ ಉದ್ಯೋಗದಾತರು ನೋಂದಾವಣೆಯಾದಲ್ಲಿ ಹಿಂದಿನ ಅವಧಿಗೆ ಯಾವುದೇ ದಂಡ ಅಥವಾ ಬಾಕಿ ಪಾವತಿಯ ಅವಶ್ಯಕತೆ ಇರುವುದಿಲ್ಲ ಮತ್ತು ಯಾವುದೇ ತಪಾಸಣೆ ಇರುವುದಿಲ್ಲ.

ಉದ್ಯೋಗದಾತರು ತಮ್ಮಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಉದ್ಯೋಗಿಗಳನ್ನು ಒಳಗೊಂಡಂತೆ ಎಲ್ಲಾ ಉದ್ಯೋಗಿಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿದಲ್ಲಿ ನೋಂದಾವಣೆ ದಿನದಿಂದಲೇ ಕಾರ್ಮಿಕರ ವಿಮಾ ಕಾಯ್ದೆಯಡಿ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಹರಾಗುತ್ತಾರೆ.

ಈ ಯೋಜನೆಯ ಅನುಷ್ಠಾ್ನದಂತೆ ಮತ್ತು ಮುಖ್ಯ ಕಛೇರಿಯ ಸೂಚನೆಯಂತೆ ಉಪಪ್ರಾದೇಶಿಕ ಕಛೇರಿ, ಬೊಮ್ಮಸಂದ್ರ ಕಛೇರಿಯು ಫಲಾನುಭವಿಗಳ ಸಹಕಾರದಲ್ಲಿ ಮತ್ತು ರಾಜ್ಯ ಸರ್ಕಾರದ ವಿವಿಧ ಕಛೇರಿಗಳ ಸಹಯೋಗದೊಡನೆ ಹಲವಾರು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವಧಿಯಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾವಣೆಯಾದಲ್ಲಿ ಅವರಿಗೆ ದೊರಕುವ ಅನುಕೂಲತೆಗಳ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ.

ಈ ಅವಧಿಯಲ್ಲಿ ಸಾವಿರಾರು ಉದ್ಯೋಗಿಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಲಾಗಿದೆ ಮತ್ತು ಅವರ ಅಗತ್ಯತೆಗಳಿಗೆ ಅನುಸಾರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದುವರವಗೂ ಈ ಕಛೇರಿಯು ವಿವಿಧ 23 ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಕೈಗಾರಿಕಾ ಸಂಘಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ ಮತ್ತು ಉದ್ಯೋಗಿಗಳನ್ನು ಸಾಮಾಜಿಕ ಸುರಕ್ಷತೆಯ ವ್ಯಾಪ್ತಿಗೆ ತರಲಾಗಿದೆ.

ಈ ಯೋಜನೆಯು ಒಂದು ಮೈಲಿಗಲ್ಲಾಗಿದ್ದು ಅರ್ಧ ಅವಧಿಯನ್ನು ಕ್ರಮಿಸಿ ಸಫಲತೆಯತ್ತ ಸಾಗುತ್ತಿದ್ದು, ಎಲ್ಲಾ ಉದ್ಯೋಗದಾತರು ಈ ಅವಧಿಯಲ್ಲಿ ತಮ್ಮ ಸಂಸ್ಥೆಗಳು, ಘಟಕಗಳನ್ನು ಹಾಗೂ ಉದ್ಯೋಗಿಗಳನ್ನು ನೋಂದಾವಣೆ ಮಾಡುವುದರ ಮೂಲಕ ಕಾರ್ಮಿಕರ ರಾಜ್ಯ ನಿಗಮದಿಂದ ದೊರೆಯುವ ಹಲವಾರು ರೀತಿಯ ವಿಮಾ ಸೌಲಭ್ಯಗಳನ್ನು ಪಡೆಯುವಂತೆ ಇಎಸ್ಐಸಿಯು ತಿಳಿಸಿದೆ.

ಇಎಸ್ಐಸಿಯ ಈ ಉಪಕ್ರಮವು ಸರಳ ಹಾಗೂ ತಡೆಹರಿತ ವ್ಯವಹಾರವನ್ನು ಪ್ರೋತ್ಸಾಹಿಸುತ್ತಾ ಉದ್ಯೋಗದಾತರು ಯಾವುದೇ ದಂಡಶುಲ್ಕವಿಲ್ಲದೆ ತಮ್ಮ ಸಂಸ್ಥೆಯನ್ನು ನೋಂದಾವಣೆ ಮಾಡಿಕೊಂಡು ಮತ್ತು ಉದ್ಯೋಗಿಗಳನ್ನು ನೋಂದಾವಣೆ ಮಾಡಿ ಆರೋಗ್ಯ ಸೌಲಭ್ಯ ಹಾಗೂ ಸಾಮಾಜಿಕ ಸುರಕ್ಷೆಯ ವ್ಯಾಪ್ತಿಯನ್ನು ವಿಸ್ತರಿಸುವುದರ ಜೊತೆಗೆ ಈ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದಾಗಿದೆ.

ಸ್ಪ್ರೀ ಯೋಜನೆ ಕುರಿತು ಮಾಹಿತಿಗಾಗಿ ಇ-ಮೇಲ್ sro-bommasandra@esic.nic.in ಅಥವಾ ದೂರವಾಣಿ ಸಂಖ್ಯೆ 080-26786391 ಸಂಪರ್ಕಿಸಬಹುದು ಎಂದು ಭಾರತ ಸರ್ಕಾರದ ಇ.ಎಸ್.ಐ.ಸಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!