ಚಂದ್ರಗ್ರಹಣ: ದೊಡ್ಡಬಳ್ಳಾಪುರ ತಾಲೂಕಿನಾಧ್ಯಂತ ಇಂದು ಸಂಜೆ ದೇಗುಲಗಳು ಬಂದ್.. ಈ ರಾಶಿಯವರು ಜಾಗ್ರತೆ

Temples will be closed in Doddaballapur taluka this evening

ದೊಡ್ಡಬಳ್ಳಾಪುರ (Doddaballapur): ಇಂದು (ಸೆ.7) ಭಾನುವಾರ ಸಂಭವಿಸಲಿರುವ ಚಂದ್ರಗ್ರಹಣದ ಅಂಗವಾಗಿ ತಾಲೂಕಿನ ಪ್ರಸಿದ್ದ ಶ್ರೀಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಕನಸವಾಡಿ ಪುಣ್ಯಕ್ಷೇತ್ರ (ಚಿಕ್ಕಮಧುರೆ) ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯಗಳು ಸೇರಿದಂತೆ ತಾಲೂಕಿನ ಎಲ್ಲಾ ದೇವಾಲಯಗಳನ್ನು ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ.

ನಂತರ ಮರುದಿನ ಬೆಳಗಿನ ಜಾವ ಸ್ವಾಮಿಗೆ ತೈಲಾಭಿಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿ, ಭಕ್ತಾದಿಗಳ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು.

ಹಿಂದೂ ಧರ್ಮದಲ್ಲಿ ಚಂದ್ರಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದು ಖಗೋಳ ಘಟನೆಯಾಗಿದ್ದು, ಇದು ಧಾರ್ಮಿಕ ಮಹತ್ವವನ್ನು ಸಹ ಹೊಂದಿದೆ.

ಚಂದ್ರ ಗ್ರಹಣ ಸ್ಪರ್ಶ ಕಾಲ: 09:56PM
ಮಧ್ಯ ಕಾಲ: 11:42PM
ಮೋಕ್ಷ ಕಾಲ: 01:27AM

ಗ್ರಹಣದ ಪ್ರಯುಕ್ತ ಇಂದು ಮಧ್ಯಾಹ್ನ 3:15 PM ರೊಳಗೆ ಊಟವನ್ನ ಮಾಡಬೇಕು, ಮಕ್ಕಳು, ಗರ್ಭಿಣಿಯರು, ಅಶಕ್ತರು, ವೃದ್ಧರು ಸಂಜೆ 6:30PM ರೊಳಗೆ ಅನ್ನವನ್ನು ತಿನ್ನದೇ ಏನಾದರೂ ಫಲಹಾರ ಸ್ವೀಕರಿಸಬಹುದು.

ಶತಭಿಷ ನಕ್ಷತ್ರ ಕುಂಭ ರಾಶಿ ಮತ್ತು ಪೂರ್ವಾಭಾದ್ರ ನಕ್ಷತ್ರ ಮೀನ ರಾಶಿಗೆ ಗ್ರಹಣದ ದೋಷ ಉಂಟು.

ಗ್ರಹಣ ದೋಷಕ್ಕೆ ಪರಿಹಾರ

ಅಕ್ಕಿ, ಉದ್ದಿನ ಬೇಳೆ, ಹುರಳಿಕಾಳು, ಬಿಳಿ ಹೂವು, ಬಿಳಿ ವಸ್ತ್ರ, ದಕ್ಷಿಣೆ ಸಮೇತ ವಿಳೆದೆಲೆ ಅಡಿಕೆ ಮತ್ತು “ಯೋ ಸೌ ವಜ್ರಧರೋದೇವಃ ಆದಿತ್ಯಾನಾಂ ಪ್ರಭುರ್ಮತಃ | ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || ಯೋ ಸೌ ದಂಡಧರೋದೇವಃ ಯಮೋ ಮಹಿಷವಾಹನಃ | ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು | ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ | ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು |” ಈ ಶ್ಲೋಕವನ್ನು ಒಂದು ಬಿಳಿ ಹಾಳೆಯಲ್ಲಿ ಬರೆದು ತಮ್ಮ ಬಳಿ ಇಂದು ರಾತ್ರಿ ಇಟ್ಟುಕೊಂಡು ನಾಳೆ ಬೆಳಿಗ್ಗೆ ದಾನ ಮಾಡಬಹುದು ಎಂದು ವಿದ್ವಾನ್ ಎಸ್.ನವೀನ್ ತಿಳಿಸಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]