Video games blind children's creativity: K.V. Prabhakar concerned

ವಿಡಿಯೊಗೇಮ್ ಗಳು ಮಕ್ಕಳ ಕ್ರಿಯಾಶೀಲತೆಯನ್ನು ಕುರುಡಾಗಿಸುತ್ತವೆ: ಕೆ.ವಿ.ಪ್ರಭಾಕರ್ ಕಳವಳ

ಬೆಂಗಳೂರು: ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ (K.V. Prabhakar) ನುಡಿದರು.

ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.

ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿ, ಪ್ಲಾಸ್ಟಿಕ್ ಆಟದ ಸಾಮಾನುಗಳು, ಬ್ಯಾಟರಿ ಚಾಲಿತ ಆಟದ ಸಾಮಾನುಗಳ ಸಹವಾಸದಲ್ಲಿ ಮಕ್ಕಳ ಮನೋಲೋಕ ಹಿಗ್ಗುವ ಬದಲಿಗೆ ಕುರುಡಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಕ್ಕಳ ತಲೆಗಳೊಳಗೆ ರಾಗಿರೊಟ್ಟಿ ಬದಲಿಗೆ ಬರ್ಗರ್, ಜೋಳದ ರೊಟ್ಟಿ ಬದಲಿಗೆ ಪಿಜ್ಜಾ, ಮುದ್ದೆ ಬದಲಿಗೆ ಪಾಸ್ತಾ, ಡೋನಟ್ ತುಂಬಿದ್ದು ಕೂಡ ಕೆಟ್ಟ ಸಾಂಸ್ಕೃತಿಕ ರಾಜಕಾರಣ. ಇದನ್ನು ಬಹಳ ಆಳವಾಗಿ ಮತ್ತು ಗಂಭೀರವಾಗಿ ಯೋಚಿಸುವ ಅಗತ್ಯವಿದೆ.

ಇದನ್ನು ಜವಾಹರಲಾಲ್ ನೆಹರೂ ಅವರು ಮನಗಂಡಿದ್ದರು. ಮಕ್ಕಳ ದೃಷ್ಟಿಕೋನದಲ್ಲಿ ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ನೀಲನಕ್ಷೆ ನೆಹರೂ ಅವರು ಸಿದ್ದಪಡಿಸಿದ್ದರು. ಈ ನೀಲನಕ್ಷೆಯ ಭಾಗವೇ ಜವಾಹರ ಬಾಲ ಭವನ.‌

ಕುಟುಂಬ, ಸಮಾಜ, ಸ್ನೇಹಿತರಿಂದ ಬೇರ್ಪಡಿಸುವ ವಿಡಿಯೊಗೇಮ್ ಗಳು ಹಿಂಸಾತ್ಮಕ ಮನೋಭಾವ, ಕೋಪ, ಅಸಹನೆ, ಆಕ್ರಮಣಶೀಲತೆಯನ್ನು ತುರುಕುತ್ತವೆ. ಇಂಥಾ ಮನಸ್ಥಿತಿಯ ಮಕ್ಕಳು ಭವಿಷ್ಯದಲ್ಲಿ ಹೇಗೆ ರೂಪುಗೊಳ್ಳಲು ಸಾಧ್ಯ? ಹೈಸ್ಕೂಲು ಮಟ್ಟದಲ್ಲೇ Ragging ಪಿಡುಗು ಹೆಚ್ಚಾಗುತ್ತಿರುವುದಕ್ಕೆ ಏನು ಕಾರಣ ಎನ್ನುವುದನ್ನು ನಾವು ಆಲೋಚಿಸಬೇಕಿದೆ ಎಂದರು.

ನೆಹರೂ ಅವರು, “ಮಕ್ಕಳು ತೋಟದಲ್ಲಿರುವ ಮೊಗ್ಗುಗಳಂತೆ, ಈ ಮೊಗ್ಗುಗಳನ್ನು ಎಚ್ಚರಿಕೆಯಿಂದ ಪ್ರೀತಿಯಿಂದ ಪೋಷಿಸಬೇಕು, ಆಗಷ್ಟೆ ಜವಾಬ್ದಾರಿಯುತ ನಾಗರಿಕರು ರೂಪುಗೊಳ್ಳುತ್ತಾರೆ” ಎನ್ನುವ ಸ್ಪಷ್ಟವಾದ ವೈಜ್ಞಾನಿಕ ತಿಳಿವಳಿಕೆ ಮತ್ತು ದೂರ ದೃಷ್ಟಿ ಹೊಂದಿದ್ದರು.

ಈ ದೂರದೃಷ್ಟಿಯಿಂದ ಬಾಲಭವನ‌ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಬಿ.ಆರ್.ನಾಯ್ಡು ಅವರು ಬಾಲಭವನದ ಅಧ್ಯಕ್ಷರಾಗುವುದಕ್ಕೂ ಮೊದಲು ನನಗೂ ಬಾಲಭವನದ ಸಾಧ್ಯತೆಗಳು ಮತ್ತು ಅವಕಾಶಗಳ ಬಗ್ಗೆ ಹೆಚ್ಚು ತಿಳಿದಿರಲಿಲ್ಲ. ಈಗ ಬಾಲ ಭವನದ ಜೊತೆಗೆ ಪ್ರೆಸ್ ಕ್ಲಬ್ ಕೂಡ ಕೈ ಜೋಡಿಸಿ ಪತ್ರಕರ್ತರ ಮಕ್ಕಳಿಗೆ ಅವರೊಳಗಿನ ಕ್ರಿಯಾಶೀಲತೆ ಅರಳಲು, ಮನೋಲೋಕ ವಿಸ್ತಾರಗೊಳ್ಳಲು ಮುಂದಾಗಿರುವುದು ಆರೋಗ್ಯಕಾರಿ ಬೆಳವಣಿಗೆ ಎಂದು ಶ್ಲಾಘಿಸಿದರು.

ನಟರೂ, ಕಲಾವಿದರಾಲೂ ಆದ ಅರುಣ್ ಸಾಗರ್ ಮತ್ತು ಮೀರಾ ದಂಪತಿ, ಬಾಲ ಭವನ ಅಧ್ಯಕ್ಷರಾದ ಬಿ.ಆರ್.ನಾಯ್ಡು, ಕಾರ್ಯದರ್ಶಿ ನಿಶ್ಚಲ್, ಪತ್ರಕರ್ತರಾದ ಚಿದಾನಂದ ಪಟೇಲ್, ಅಲೀಮ್, ಮೋಹನ್, ಶಿವಣ್ಣ ಶರಣು ಸೇರಿ ಹಲವರು ಉಪಸ್ಥಿತರಿದ್ದರು.

ರಾಜಕೀಯ

ಮಲೇಷ್ಯಾದಲ್ಲಿ ರಾಹುಲ್ ಗಾಂಧಿ..ಫೋಟೋ ವೈರಲ್; ಬಿಜೆಪಿಗರ ಟೀಕೆ.. ಕಾಂಗ್ರೆಸಿಗರ ಸಮರ್ಥನೆ

ಮಲೇಷ್ಯಾದಲ್ಲಿ ರಾಹುಲ್ ಗಾಂಧಿ..ಫೋಟೋ ವೈರಲ್; ಬಿಜೆಪಿಗರ ಟೀಕೆ.. ಕಾಂಗ್ರೆಸಿಗರ ಸಮರ್ಥನೆ

ನವದೆಹಲಿ: ವೋಟ್ ಚೋರಿ ಕುರಿತು ಗಂಭೀರ ಆರೋಪ ಮಾಡಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು, ಮತದಾರರ ಅಧಿಕಾರ ಯಾತ್ರೆಯ ನಂತರ ಮಲೇಷ್ಯಾದ ಲಂಗ್ಕಾವಿಗೆ ವಿಶ್ರಾಂತಿಗೆಂದು ತೆರಳಿದ್ದಾರೆ. ಲಂಗ್ಕಾವಿ ಮಾರುಕಟ್ಟೆಯಲ್ಲಿ

[ccc_my_favorite_select_button post_id="113655"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ

[ccc_my_favorite_select_button post_id="113637"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!