Some forces are trying to set Mandya district on fire; H.D. Kumaraswamy

ಮದ್ದೂರು ಗಲಭೆ ಪ್ರಕರಣ: ಮಂಡ್ಯ ಜಿಲ್ಲೆಗೆ ಬೆಂಕಿ ಹಾಕುವ ಕೆಲಸವನ್ನು ಕೆಲ ಶಕ್ತಿಗಳು ಮಾಡುತ್ತಿವೆ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಆರೋಪಿಸಿದರು.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೂರಿದರು.

ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಅವರು ಆಪಾದಿಸಿದರು.

ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್‌ ಪಕ್ಷದ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಶಾಂತಿ ನೆಲೆಸುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಾನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೋಲೀಸ್‌ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗೆ ಕಾರಣ. ಹಿಂದೂಗಳು ಅಸಮಾಧಾನವಾಗುವ ರೀತಿಯಲ್ಲಿ ‌ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಇದನ್ನು ನಾನು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ನಡೆಯಲು ಕಾಂಗ್ರೆಸ್ ಪಕ್ಷವೇ ಕಾರಣ. ಈ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಅವನತಿಯನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಇಂಥ ಘಟನೆಗಳು ಒಂದೆರಡು ಜಿಲ್ಲೆಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದವು. ಕಾಂಗ್ರೆಸ್‌ ಸರಕಾರ ಬಂದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತೀ ಭಾಗದಲ್ಲಿಯೂ ಅವ್ಯಾಹತವಾಗಿ ನಡೆಯುತ್ತಿವೆ. ಆ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕೇವಲ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ನಡೆಯುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.

ಇಂಥ ಗಳಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸುಸೈಡ್ (ಆತ್ಮಹತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!