SSLC exam 125 marks out of 125 in Kannada.. Honored by Doddaballapur Kasapa

SSLC ಪರೀಕ್ಷೆ ಕನ್ನಡದಲ್ಲಿ 125ಕ್ಕೆ 125 ಅಂಕ: ದೊಡ್ಡಬಳ್ಳಾಪುರ ಕಸಾಪದಿಂದ ಸನ್ಮಾನ

ದೊಡ್ಡಬಳ್ಳಾಪುರ (Doddaballapura): ಕನ್ನಡ ಭಾಷೆ, ಸಾಹಿತ್ಯ ಮತ್ತು  ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಅರಿಯಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೋದಂದರಾಮ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳು ಪಡೆದ ವಿದ್ಯಾರ್ಥಿಗಳಿಗೆ  ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜಗತ್ತಿನ ಪ್ರಮುಖ‌ ಭಾಷೆಗಳಲ್ಲಿ ಕನ್ನಡ ಭಾಷೆ ಪ್ರಾಚೀನ ಮತ್ತು ಅನನ್ಯತೆಯಲ್ಲಿ ಮಹತ್ವದ ಸ್ಥಾನ ಪಡೆದಿದೆ. ಕನ್ನಡ ಸಾಹಿತ್ಯವು ಭಾಷಾ ವೈಭವದೊಂದಿಗೆ, ಕನ್ನಡ ನಾಡಿನ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಕಾವ್ಯ, ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಭಾವಗೀತೆ ಮುಂತಾದ ವಿವಿಧ ಪ್ರಕಾರಗಳಲ್ಲಿ ಕನ್ನಡ ಸಾಹಿತ್ಯ ಸಮೃದ್ಧವಾಗಿದೆ ಎಂದರು.

ಕನ್ನಡ ಭಾಷೆ ಮತ್ತು ಸಾಹಿತ್ಯದ ಓದು ಪಠ್ಯಪುಸ್ತಕಗಳಿಗಷ್ಟೇ ಸೀಮಿತವಾಗಬಾರದು. ವಿದ್ಯಾರ್ಥಿಗಳು  ಕನ್ನಡ ಕಾವ್ಯದ ರಸವನ್ನು ಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಾಹಿತ್ಯದ ಓದು ಜೀವನಕ್ಕೆ ಬಹಳ ಮುಖ್ಯ. ಸಾಹಿತ್ಯದಿಂದ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕೆಂದರು.

ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ  ಕನ್ನಡ ಭಾಷೆ ಮತ್ತು ಸಾಹಿತ್ಯದ ಅಭಿರುಚಿ ಬೆಳೆಸುವಲ್ಲಿ  ಶಿಕ್ಷಕರು, ಪೋಷಕರು  ಮಹತ್ವದ ಪಾತ್ರವಹಿಸಬೇಕಾಗಿದೆ. ಶಾಲಾ ಕಾಲೇಜುಗಳಲ್ಲಿ  ವಿದ್ಯಾರ್ಥಿಗಳಲ್ಲಿ  ಕನ್ನಡ ಭಾಷೆ ಮತ್ತು ಸಾಹಿತ್ಯ ಅಭಿಮಾನ  ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾಗಿದೆ. ಕನ್ನಡ ಬಳಸಿದಾಗ ಮಾತ್ರ  ಕನ್ನಡವನ್ನು ಉಳಿಸಿ, ಬೆಳೆಸಲು ಸಾಧ್ಯವೆಂದರು.

ಗಮನ ಸೆಳೆದ ಗರೀಮಾ ಕುಮಾರಿ

ವಿದ್ಯಾರ್ಥಿನಿ ಗರೀಮಾ ಕುಮಾರಿ    ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿದ್ದಾರೆ.

ಗರೀಮಾ ಕುಮಾರಿ ಪೋಷಕರು ಬಿಹಾರ ರಾಜ್ಯದ ಉದ್ಯೋಗಕ್ಕಾಗಿ  ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದಾರೆ. ಇವರ ಮಾತೃ ಭಾಷೆ ಹಿಂದಿಯಾದರೂ, ಗರೀಮಾ ಕುಮಾರಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವುದು ಗಮನ ಸೆಳೆದಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್,  ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ, ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು,  ರಂಗಭೂಮಿ ಕಲಾವಿದೆ ಪುಷ್ಪಮೋಹನ್,  ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಪ್ರತಿನಿಧಿಗಳಾದ ಮುನಿರಾಜು, ಸಫೀರ್, ಕಸಬಾ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ತೂಬಗೆರೆ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಉದಯರಾಧ್ಯ, ಲಾವಣ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್.

ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ, ಇಸ್ತೂರು ಕೋದಂಡರಾಮ ಭಜನಾ ಮಂಡಲಿಯ ರಂಗಸ್ವಾಯಯ್ಯ,  ಕಲಾವಿದ ದರ್ಗಾಜೋಹಳ್ಳಿ ಮಲ್ಲೇಶ್, ಹಾಡೋನಹಳ್ಳಿ ಗೋವಿಂದರಾಜು ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಮದ್ದೂರು ಗಲಭೆ ಪ್ರಕರಣ: ಮಂಡ್ಯ ಜಿಲ್ಲೆಗೆ ಬೆಂಕಿ ಹಾಕುವ ಕೆಲಸವನ್ನು ಕೆಲ ಶಕ್ತಿಗಳು ಮಾಡುತ್ತಿವೆ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಮದ್ದೂರು ಗಲಭೆ ಪ್ರಕರಣ: ಮಂಡ್ಯ ಜಿಲ್ಲೆಗೆ ಬೆಂಕಿ ಹಾಕುವ ಕೆಲಸವನ್ನು ಕೆಲ ಶಕ್ತಿಗಳು

ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ: ಹೆಚ್.ಡಿ. ಕುಮಾರಸ್ವಾಮಿ ( H.D. Kumaraswamy)

[ccc_my_favorite_select_button post_id="113691"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಯುವತಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದಕ್ಕೆ ಯುವಕ ಆತ್ಮಹತ್ಯೆ..!

ಯುವತಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದಕ್ಕೆ ಯುವಕ ಆತ್ಮಹತ್ಯೆ..!

'ಐ ಡಿಡ್ ನಾಟ್ ಸ್ಟಾಪ್ ಎನಿಥಿಂಗ್ ಅನ್‌ಟಿಲ್, ಐ ಆಲ್ ವೇಸ್ ಲವ್ ಫಾರ್‌ಎವೆರ್, *** ಯೂ ಆರ್‌ಮೈ ಫಸ್ಟ್ ಆ್ಯಂಡ್ ಯೂ ಆರ್‌ಮೈ ಲಾಸ್ಟ್ ' Suicide

[ccc_my_favorite_select_button post_id="113685"]
ಅಪಘಾತ: ಬಾಲಕಿ ದುರ್ಮರಣ

ಅಪಘಾತ: ಬಾಲಕಿ ದುರ್ಮರಣ

ಟಿಪ್ಪ‌ರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ (Accident) ಹೊಡೆದ ಹಿನ್ನೆಲೆಯಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪಿ, ಮತ್ತಿಬ್ಬರು ಬಾಲಕಿಯರು ಗಾಯಗೊಂಡಿರುವ ಘಟನೆ

[ccc_my_favorite_select_button post_id="113674"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!