
ಬೆಂಗಳೂರು: ಭಾರತೀಯ ಸೇನೆ (Indian Army) ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗ ಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯ್ಕೆ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳಿಗೆ ಅ.03 ರೊಳಗಾಗಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ 2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ 1 ಲಕ್ಷ ರು. ಒಳಗೊಂಡಿರಬೇಕು.
ಅಭ್ಯರ್ಥಿಯು 10ನೇ ತರಗತಿಯನ್ನು ಉತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.
ಜನ್ಮ ದಿನಾಂಕ ಮತ್ತು ವಯಸ್ಸು 3/10/2025ಕ್ಕೆ ಅನ್ವಯಿಸುವಂತೆ 3/10/2005 0 3/10/2008 ರ ನಡುವಿನ ಅವಧಿಯಲ್ಲಿ ಅಭ್ಯರ್ಥಿಯು ಜನಿಸಿರಬೇಕು.
ಅಭ್ಯರ್ಥಿಗಳಿಗೆ ತರಬೇತಿಯನ್ನು ಕಾರವಾರ ವೀರ ಬಹದ್ದೂರ್ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


