BJP's aim is to disturb peace in society: Chief Minister Siddaramaiah

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ನಿನ್ನೆ ಸಂಜೆ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋ ಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದರು.

ಎಂಎಲ್ ಸಿ ಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ

ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. .ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!