ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

Legal awareness – assistance at MSV Public School, Doddaballapur

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘ, ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ತಾಲೂಕಿನ ಪ್ರತಿಷ್ಠಿತ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಮಂಗಳವಾರ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ಪೌಷ್ಠಿಕಾಂಶ ದಿನಾಚರಣೆಯನ್ನು ಆಚರಿಸಲಾಯಿತು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಡಿ. ಕ್ರಾಂತಿ ಕಿರಣ್ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ 18 ವರ್ಷದ ಕೆಳಗಿನ ವಯಸ್ಸಿನವರು ವಾಹನ ಚಾಲನೆ ಮಾಡುತ್ತಿರುವುದು ಸರ್ವೇಸಾಮಾನ್ಯ ಎಂಬಂತಾಗಿದೆ. ಆದರೆ, ನ್ಯಾಯಾಲಯದಲ್ಲಿ ಇದರಿಂದ ಉಂಟಾಗುತ್ತಿರುವ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದು ಮಕ್ಕಳ ಹಿತದೃಷ್ಟಿಯಿಂದ ಸ್ವೀಕಾರಾರ್ಹವಲ್ಲ.

ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಬಾಲ್ಯ ಎಷ್ಟು ಅತ್ಯಗತ್ಯ ಎಂಬುದು ದೊಡ್ಡವರಾದ ಬಳಿಕ ನಿಮಗೆ ಅರಿವಿಗೆ ಬರುತ್ತದೆ. ವಿದ್ಯಾರ್ಥಿಗಳು ಸಿನಿಮಾಗಳಲ್ಲಿ ಇರುವಂತೆ Part 1 ಹಾಗೂ Part 2 ಎಂಬುದು ನಿಜ ಜೀವನದಲ್ಲಿ ಇರುವುದಿಲ್ಲ ಎಂಬುದನ್ನು ಅರಿತು ಜವಬ್ದಾರಿಯುತವಾಗಿ ವರ್ತಿಸಬೇಕಿದೆ ಎಂದು ಸಲಹೆ ನೀಡಿದರು.

ಇದೇ ವೇಳೆ ಹೆಣ್ಣು ಮಕ್ಕಳಿಗೆ ಕಾನೂನುಗಳ ಕುರಿತು ವಿವರಿಸಿದ ನ್ಯಾಯಾಧೀಶರಾದ ಡಿ‌. ಕ್ರಾಂತಿ ಕಿರಣ್ ಅವರು, ವಿವಾಹ ಪೂರ್ವ, ವಿವಾಹ ನಂತರ ನಡೆಯುವ ಶೋಷಣೆಗಳ ಬಗ್ಗೆ ಹಾಗೂ ಅವುಗಳನ್ನು ತಡೆಯುವ ಕುರಿತು ಹೇಳಿದರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ರವಿ ಮಾವಿನಕುಂಟೆ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಮಕ್ಕಳಲ್ಲಿ ಕ್ಷೀಣಿಸುತ್ತಿರುವ ಮಾನವೀಯ ಮೌಲ್ಯಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪಲು ಮಾಡಬೇಕಾದ ಸುದೀರ್ಘ ತಪಸ್ಸಿನ ಬಗ್ಗೆ ತಿಳಿಸಿ, ಎಂ.ಎಸ್.ವಿ. ಶಾಲೆಯ ಶಿಸ್ತು ಸಂಯಮವನ್ನು ಪ್ರಶಂಸಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಶಾರದ ನಾಗನಾಥ್ ಮಾತನಾಡಿ, ನಾವು ಪ್ರತಿದಿನ ಸೇವಿಸುತ್ತಿರುವ ಆಹಾರ ಪದ್ಧತಿ ಎಷ್ಟು ಸೂಕ್ತವಾಗಿದೆ, ಅದು ನಿಜವಾಗಿಯೂ ಹೇಗಿರಬೇಕೆಂದು ವಿವರಿಸಿದರು. ಅಲ್ಲದೆ ಪ್ರತಿದಿನ ತಪ್ಪದೇ ಕಾಯಿಪಲ್ಲೆಗಳನ್ನು, ಪೌಷ್ಠಿಕಾಂಶ ಇರುವ ಆಹಾರಗಳನ್ನು ಸೇವಿಸಬೇಕು. ಸಾಧ್ಯವಾದಷ್ಟು ಜಂಕ್ – ಫಾಸ್ಟ್ ಫುಡ್ ಪದ್ಧತಿಯ ಆಹಾರ ಸೇವನೆಯನ್ನು ತ್ಯಜಿಸಬೇಕು ಎಂದು ಸಲಹೆ ನೀಡಿದರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಕಾನೂನು ಅರಿವು – ನೆರವು.. ನ್ಯಾಯಾಧೀಶರ ಮಾತಿಗೆ ಮಕ್ಕಳು ಫಿದಾ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ವಿನೋದ್ ರಾಜ್ ಮಾತನಾಡಿ, ಬಾಲ್ಯ ವಿವಾಹ ಕಾನೂನು ಬಾಹಿರವಾಗಿದ್ದು, ನಿಮ್ಮ ಸುತ್ತ ಮುತ್ತ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುತ್ತಿದ್ದರೆ ಕೂಡಲೇ ಮಕ್ಕಳ ಸಹಾಯವಾಣಿ 1098 ಕ್ಕೆ ತಿಳಿಸಿ ಬಾಲ್ಯವಿವಾಹವನ್ನು ತಡೆಗಟ್ಟಲು ಸಹಕರಿಸುವ ಮೂಲಕ ನಾವೆಲ್ಲರೂ ಪಣ ತೊಡೋಣ ಎಂದರು.

ಎಂಎಸ್‌ವಿ ಪಬ್ಲಿಕ್ ಶಾಲೆಯ ಅಧ್ಯಕ್ಷರಾದ ಸುಬ್ರಮಣ್ಯ.ಎ ಅವರು “ವಿದ್ಯಾರ್ಥಿಗಳು ಪಾಲಿಸಬೇಕಾದ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಹಾಗೂ ಪೋಷಕರ ಜವಾಬ್ದಾರಿಗಳ ಬಗ್ಗೆ, ವಿದ್ಯಾರ್ಥಿದೆಸೆಯಲ್ಲಿ ಏಕಾಗ್ರತೆ ವೃದ್ಧಿಯಾಗಲು ಪೂರಕವಾದ ಆಹಾರ ಪದ್ಧತಿಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೆಮ್ಯ ಬಿ.ವಿ., ಅನೇಕ ನ್ಯಾಯವಾದಿಗಳು ಸೇರಿದಂತೆ ಶಿಕ್ಷಕವೃಂದ, ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]