Social and Educational Survey-2025 from Sep. 22 to Oct. 07

ಸೆ.22 ರಿಂದ ಅ.07 ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Social and Educational Survey-2025) ಸೆಪ್ಟೆಂಬರ್‌ 22, 2025 ರಿಂದ ಅಕ್ಟೋಬರ್‌ 7, 2025 ರವರೆಗೆ ಕೈಗೊಳ್ಳುತ್ತಿದ್ದು ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ.

ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ.

ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಮೀಕ್ಷೆಯು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಮಾಹಿತಿಯನ್ನು ನಿಖರವಾಗಿ ಒದಗಿಸಬೇಕಾಗುತ್ತದೆ.

ಸಮೀಕ್ಷೆ ಕಾರ್ಯಕ್ಕೆ ಪೂರ್ವಭಾವಿಯಾಗಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಜೊತೆಗೆ ಆಯೋಗದ ಸಿಬ್ಬಂದಿಗಳು ಜಿಲ್ಲೆಯ ಪ್ರತಿ ಮನೆಗೆ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸುತ್ತಿದ್ದಾರೆ.

ಜಿಲ್ಲಾಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾಲಕಾಲಕ್ಕೆ ಸಭೆ ನಡೆಸಿ ಸಮೀಕ್ಷೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತಿದೆ.

ಜಿಲ್ಲೆಯಲ್ಲಿ 3.34.785 ಕುಟುಂಬಗಳು

ದೇವನಹಳ್ಳಿಯಲ್ಲಿ 67,547 ಕುಟುಂಬಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 1,03,903 ಕುಟುಂಬಗಳು. ಹೊಸಕೋಟೆ ತಾಲ್ಲೂಕಿನಲ್ಲಿ 88,392 ಕುಟುಂಬಗಳು ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 79,943 ಕುಟುಂಬಗಳಿದೆ. ಒಟ್ಟಾರೆ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ 3,34,785 ಕುಟುಂಬಗಳ ಸಮೀಕ್ಷೆ ನಡೆಯಲಿದೆ.

ಸಮೀಕ್ಷೆಗೆ 2339 ಗಣತೀದಾರರ ಬಳಕೆ

ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲು 2339 ಗಣತೀದಾರರನ್ನು ನೇಮಿಸಲಾಗಿದೆ. ಜೊತೆಗೆ 55 ಮಾಸ್ಟರ್ ಟ್ರೈನರ್‌ಗಳು,194 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ‘ಮಾಸ್ಟರ್ ಟ್ರೈನಿಂಗ್ ಪಡೆದವರು ಗಣತಿದಾರರಿಗೆ ತರಬೇತಿ ನೀಡಲಿದ್ದಾರೆ.

150 ಮನೆಗಳ ಬ್ಲಾಕ್ ರಚನೆ

‘ಸಮೀಕ್ಷೆ ಸಲುವಾಗಿ ತಲಾ 150 ಮನೆಗಳನ್ನು ಒಂದು ಬ್ಲಾಕ್ ಆಗಿ ರಚಿಸಲಾಗಿದೆ. ಈ ಬ್ಲಾಕ್ ಗಳಲ್ಲಿ ಒಬ್ಬ ಗಣತಿದಾರನನ್ನು (ಎನ್ಯೂಮರೇಟರ್) ನಿಯೋಜಿಸಲಾಗುವುದು. ಅವರು ಸಮೀಕ್ಷೆ ಬಗ್ಗೆ ಪ್ರತಿ ಮನೆಗೆ ತೆರಳಿ 60 ಪ್ರಶ್ನೆಗಳನ್ನು ಆ್ಯಪ್ ಮೂಲಕ ಕೇಳುವರು. ಗಣತಿದಾರರ ಮೇಲೆ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಾರೆ.

ಸಹಾಯವಾಣಿ ಸಂಪರ್ಕ

ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ, ಗೊಂದಲಗಳಿದ್ದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ರಾಜ್ಯ ಸಹಾಯವಾಣಿ ಸಂಖ್ಯೆ 8050770007 ಗೆ ಕರೆ ಮಾಡಬಹುದು.

ಜಿಲ್ಲೆಯ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಗಣತಿದಾರರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮನವಿ ಮಾಡಿದ್ದಾರೆ.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!