ದೊಡ್ಡಬಳ್ಳಾಪುರ: 22ವರ್ಷದ ಯುವಕ ನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ನಾರಸಿಂಹನಹಳ್ಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು ಎನ್.ವಿ.ಮಹೇಂದ್ರ (22 ವರ್ಷ) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ 11 ರಿಂದ 12 ಗಂಟೆ ಸುಮಾರಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ ನಂತರ ಮನೆಗೆ ಅಳವಡಿಸಿದ್ದ ಕಬ್ಬಿಣದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.