ಬೆಂ.ಗ್ರಾ.ಜಿಲ್ಲೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಿರುದ್ಯೋಗ ಭತ್ಯೆಯನ್ನು ಪಡೆದಿರುವ ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿಯಲ್ಲಿ ನೀಡಲಾಗುತ್ತಿರುವ ಕೌಶಲ್ಯ ತರಬೇತಿ (Skills training) ಮತ್ತು ಉದ್ಯಮಶೀಲತಾ ತರಬೇತಿಗಳಿಗೆ https://www.kaushalkar.com ಪೋರ್ಟಲ್ ನಲ್ಲಿ ನೋಂದಾಯಿಸಬಹುದಾಗಿದೆ.
ಜಿಲ್ಲೆಯ ಕೆಲ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಉದ್ದೇಶೀಸಲಾಗಿದ್ದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ದೇವನಹಳ್ಳಿ ತಾಲ್ಲೂಕು, ದೂ.ಸಂಖ್ಯೆ:- 8660722524. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ದೊಡ್ಡಬಳ್ಳಾಪುರ ತಾಲ್ಲೂಕು, ದೂ.ಸಂಖ್ಯೆ:-9880846789.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ದೊಡ್ಡದುನ್ನಸಂದ್ರ. ಹೊಸಕೋಟೆ ತಾಲ್ಲೂಕು, ದೂ.ಸಂಖ್ಯೆ:-9449786146, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ನೆಲಮಂಗಲ ತಾಲ್ಲೂಕು, ದೂ.ಸಂಖ್ಯೆ:-9481778220,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹೊಸಕೋಟೆ ತಾಲ್ಲೂಕು, ದೂ.ಸಂಖ್ಯೆ:-9505894247, ರುಡ್ ಸೇಟ್, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು ದೂ.ಸಂ:-9113880324 ಈ ಸಂಸ್ಥೆಗಳಿಗೆ ಭೇಟಿ ನೀಡಿ ಸಂರ್ಪಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಕೊಠಡಿ ಸಂಖ್ಯೆ:132. ಜಿಲ್ಲಾಡಳಿತ ಭವನ. ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ಸಹಾಯವಾಣಿ ಸಂಖ್ಯೆ: 1800-599-7154 ಯಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.