ದೊಡ್ಡಬಳ್ಳಾಪುರ: ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.
ಸ್ಪೀಡ್ ರಿಲೇ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಯದುನಂದನ್ 500 ಮೀಟರ್ ಮತ್ತು 1000 ಮೀಟರ್ ಪ್ರೊಫ಼ೆಷನಲ್ ಇನ್‍ಲೈನ್ ವಿಭಾಗದಲ್ಲಿ ಪ್ರಥಮ ಬಹುಮಾನ ಹಾಗೂ ಟ್ರೋಪಿಯನ್ನು ತನ್ನದಾಗಿಸಿಕೊಂಡಿದ್ದಾನೆ.
2ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಮ್ರುಲ್ಲಾ ಶಾ 500 ಮೀಟರ್ ವಿಭಾಗದಲ್ಲಿ ದ್ವಿತೀಯ ಮತ್ತು 1000 ಮೀಟರ್ ಪ್ರೊಫ಼ೆಷನಲ್ ಇನ್‍ಲೈನ್ ವಿಭಾಗದಲ್ಲಿ ಪ್ರಥಮ ಬಹುಮಾನ ಹಾಗೂ ರಿಕ್ರಿಯೇಶನ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದಿದ್ದಾನೆ.
ಶೈಕ್ಷಣಿಕ ಪ್ರಗತಿಯ ಜೊತೆಗೆ ಕ್ರೀಡೆಯಲ್ಲಿಯೂ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ತರಬೇತುದಾರರನ್ನು ಶಾಲೆಯ ಅಧ್ಯಕ್ಷರಾದ ಸುಬ್ರಮಣ್ಯ ಎ., ಪ್ರಾಂಶುಪಾಲರಾದ ರೆಮ್ಯ ಬಿ ವಿ ಮತ್ತು ಶಿಕ್ಷಕವೃಂದ ಅಭಿನಂದಿಸಿದ್ದಾರೆ.