ದೊಡ್ಡಬಳ್ಳಾಪುರ: ಸೆ.15 ರಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿಜಿ (Dr. Nirmalanandanath Swamiji) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದಾರೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Munegowda) ಹೇಳಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರು ಅವರು,ರಾಜ್ಯ ಸರ್ಕಾರದಿಂದ ಸೆ. 22ರಿಂದ 15 ದಿನಗಳ ಕಾಲ ನಡೆಯುವ ಹಿಂದುಳಿದ ವರ್ಗಗಳ ಆಯೋಗದ ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆ ಕುರಿತು ಒಕ್ಕಲಿಗ ಸಮುದಾಯದಲ್ಲಿ ಅರಿವು ಮೂಡಿಸಲು ಅರಿವು ಕಾರ್ಯಾಗಾರ ನಡೆಸಲಾಗುತ್ತಿದೆ.
ಸೆ.15 ರಂದು ಬೆಳಗ್ಗೆ 10.30ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಅರಿವು ಕಾರ್ಯಾಗಾರದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿಜಿ, ಶ್ರೀ ಮಂಗಳನಾಥ ಸ್ವಾಮೀಜಿ ಸೇರಿದಂತೆ ಸಮುದಾಯದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ.
ಈ ಅರಿವು ಕಾರ್ಯಾಗಾರದಲ್ಲಿ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲೂಕುಗಳ ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿ.ಮುನೇಗೌಡ ಅವರು ಕೋರಿದ್ದಾರೆ.