ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

Canter ploughs into Ganesh idol immersion procession.. Death toll rises to 9..!

ಹಾಸನ: ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಕ್ಯಾಂಟ‌ರ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ರಸ್ತೆ ಡಿವೈಡರ್ ದಾಟಿದ ಕ್ಯಾಂಟರ್ ಲಾರಿ ಮೆರವಣಿಗೆ ಕಡೆಗೆ ನುಗ್ಗಿದೆ.

ಈ ವೇಳೆ ಸ್ಥಳದಲ್ಲಿದ್ದ 9 ಜನರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಸಂಸದ ಶ್ರೇಯಸ್‌ ಪಟೇಲ್, ಶಾಸಕ ಎಚ್‌.ಡಿ. ರೇವಣ್ಣ ಪರಿಶೀಲಿಸಿದ್ದಾರೆ.

ರೂ.5 ಲಕ್ಷ ಪರಿಹಾರ

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಕರೆ ನೀಡಿದ್ದಾರೆ.

ನಿಖಿಲ್ ಭೇಟಿ

ಗಣೇಶ ಮೆರವಣಿಗೆ ವೇಳೆ ಟ್ರಕ್​​ ನುಗ್ಗಿ ದುರಂತದಲ್ಲಿ ಸಂಕಷ್ಟಕ್ಕೆ ಒಳಗಾದ ಕುಟುಂಬಸ್ಥರನ್ನು ನಿಖಿಲ್ ಕುಮಾರಸ್ವಾಮಿ ಸಂತೈಸಿದ್ದಾರೆ.

ಹಾಸನದ ಹಿಮ್ಸ್ ಗೆ ಭೇಟಿ ನೀಡಿ ಗಾಯಾಳುಗಳ ಅರೋಗ್ಯ ವಿಚಾರಿಸಿದರು.

ಆರ್ ಅಶೋಕ್ ಆಗ್ರಹ

ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕ್ಯಾಂಟರ್ ಲಾರಿ ನುಗ್ಗಿ ಸಂಭವಿಸಿದ ದಾರುಣ ಅಪಘಾತದಲ್ಲಿ ಎಂಟು ಜನರು ಸಾವಿಗೀಡಾಗಿ 20ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ತೀವ್ರ ಆಘಾತ ಉಂಟುಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿದ್ದಾರೆ.

ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ರಾಜ್ಯ ಸರ್ಕಾರ, ಜಿಲ್ಲಾಡಳಿತ ಈ ಕೂಡಲೇ ಗಾಯಗೊಂಡವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಿಬೇಕು ಎಂದು ಆಗ್ರಹಿಸಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]