I am also Hindu. I have the names of both Gods Ishwar and Rama in my name: Cmsiddaramaiah

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.

ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ

ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಎಂದರು.

ವಿರೋಧಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ

ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಆಯ್ಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿಲ್ಲ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ

ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೋಲಿಸಿನವರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ

ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು. ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.

ರಾಜಕಾರಣಕ್ಕಾಗಿ ಆಕ್ಷೇಪ

ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.

ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು

ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.

ಜಾತಿ ಗಣತಿ: ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು

ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!