ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿದ ಭಾರಿ ಮಳೆ, ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದ ಸ್ಥಗಿತಗೊಂಡಿದ್ದ ವೈಷ್ಟೋದೇವಿ ಯಾತ್ರೆಯನ್ನು (Vaishtodevi Yatra) ಸೆಪ್ಟೆಂಬರ್ 14ರಂದು ಮತ್ತೆ ಆರಂಭಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭೂಕುಸಿತ, ಮೇಘಸ್ಪೋಟ ಸೇರಿದಂತೆ ಪ್ರತಿಕೂಲ ಹವಾಮಾನದ ಕಾರಣದಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಟೋದೇವಿ ದೇವಾಲಯದ ಯಾತ್ರೆ ಕಳೆದ 19 ದಿನಗಳಿಂದ ದಿನಾಂಕ ಸ್ಥಗಿತಗೊಂಡಿತ್ತು.
ಭಾರಿ ಮಳೆಯ ಕಾರಣದಿಂದ ತ್ರಿಕೂಟ ಬೆಟ್ಟದಲ್ಲಿ ಭೂಕುಸಿತ ಉಂಟಾಗಿತ್ತು. ಈ ವೇಳೆ ಸುಮಾರು 34 ಯಾತ್ರಿಕರು ಜೀವ ಕಳೆದುಕೊಂಡು ಹಲವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯಾಡಳಿತ ವೈಷ್ಟೋ ದೇವಿ ಯಾತ್ರೆಯನ್ನು ಸ್ಥಗಿತಗೊಳಿಸಿತ್ತು.
ಅದಾದ ಬಳಿಕ ಈ ದಾರಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಹೀಗಾಗಿ ನೂರಾರು ಮಂದಿ ಕತ್ರಾದಲ್ಲಿ ವಾಸ್ತ ಹೂಡಿ ಯಾತ್ರೆ ಪುನರಾರಂಭಕ್ಕಾಗಿ ಕಾಯುತ್ತಿದ್ದರು.