PM Modi visits Manipur after 2 years

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ ಬ್ಯಾಕ್ ಆಕ್ರೋಶ| Video

ಮಣಿಪುರ; 2023ರ ಮೇ ನಲ್ಲಿ ಮಣಿಪುರದಲ್ಲಿ ಭಾರೀ ಹಿಂಸಾಚಾರ ಸಂಭವಿಸಿದ ನಂತರ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ.

ಶನಿವಾರ ಇಂಫಾಲಕ್ಕೆ ತೆರಳಿದ ಅವರು, ಭಾರೀ ಮಳೆಯ ಕಾರಣದಿಂದ ಅಲ್ಲಿಂದ ಚುರಾಚಂದ ಪುರಕ್ಕೆ ರಸ್ತೆ ಮಾರ್ಗದಲ್ಲಿ 1.5 ಗಂಟೆ ಕಾಲ ಪ್ರಯಾಣಿಸಿದರು.

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ ಬ್ಯಾಕ್ ಆಕ್ರೋಶ| Video

ಎರಡೂ ಪ್ರದೇಶಗಳಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಅವರು ನಾನು ನಿಮ್ಮೊಂದಿಗಿದ್ದೇನೆ, ಸರಕಾರ ನಿಮ್ಮೊಂದಿಗಿದೆ. ಹೊಸ ಬೆಳಗು ಶುರುವಾಗಿದೆ ಎಂದು ಮಣಿಪುರ ಜನತೆಗೆ ಭರವಸೆ ನೀಡಿದರು.

ಶಾಲಾ ಮಕ್ಕಳು ರಸ್ತೆಯಲ್ಲಿ ನಿಂತು ಮೋದಿ ಅವರಿಗೆ ಅದ್ಧೂರಿ ಸ್ವಾಗತಕೋರಿದರೆ. ಈ ಪ್ರವಾಸಕ್ಕೆ ಹಲವೆಡೆ ಗೋ ಬ್ಯಾಕ್ ಮೋದಿ ಪ್ರತಿಭಟನೆ ನಡೆದಿವೆ‌.

ಚುರಾಚಂದಪುರದಲ್ಲಿ ಮೋದಿ ಒಟ್ಟು 7300 ಕೋಟಿ ರೂ. ಮೊತ್ತದ 14 ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಒಳಚರಂಡಿ, ಮಹಿಳಾ ಹಾಸ್ಟೆಲ್‌ ನಿರ್ಮಾಣ, ಶಾಲೆಗಳು, ಅತ್ಯಾಧು ನಿಕ ಸೌಲಭ್ಯಗಳಿರುವ ಆರೋಗ್ಯ ಕೇಂದ್ರಗಳ ನಿರ್ಮಾಣಕ್ಕೆ ಚಾಲನೆ ನೀಡಿದರು. ಅನಂತರ ಇಂಫಾಲದಲ್ಲಿ 1200 ಕೋಟಿ ರೂ. ಮೊತ್ತದ 17 ಯೋಜನೆಗಳನ್ನು ಆರಂಭಿಸಿದರು.

ನೆಲೆ ಕಳೆದುಕೊಂಡ ಸಂತ್ರಸ್ತರೊಂದಿಗೆ ಸಂವಾದ: 2023ರ ಗಲಭೆಯ ಕೇಂದ್ರ ಸ್ಥಾನ ಮಣಿಪುರದ ಚುರಾಚಂದಪುರ. ಅಲ್ಲಿ ಕುಕಿ-ಮೈತೇಯಿ ನಡುವೆ ಭಾರೀ ಹೊಡೆದಾಟವಾಗಿ 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಆ ವೇಳೆ ಚುರಾಚಂದಪುರದಲ್ಲಿ 60000 ಮಂದಿ ಮನೆ ಕಳೆದುಕೊಂಡಿದ್ದರು.

ಅವರನ್ನು ಮೋದಿ ಭೇಟಿಯಾಗಿ ಮಾತುಕತೆ ನಡೆಸಿದರು. ನೆಲೆ ಕಳೆದುಕೊಂಡಿರುವ ವ್ಯಕ್ತಿಗಳ ಗೋಳುಗಳಿಗೆ ಮೋದಿ ಎರಡು ವರ್ಷಗಳ ಬಳಿಕ ಕಿವಿಯಾದರು. ವೃದ್ಧರು, ಮಕ್ಕಳನ್ನು ಭೇಟಿಯಾಗಿ ಧೈರ್ಯ ತುಂಬಿದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!