CM Siddaramaiah is an ambassador of conversion: Opposition leader R. Ashoka attacks

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Cmsiddaramaiah) ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka)

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್‌ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ ಎಂದರು.

ಸಿಎಂ ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಂ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಅಂದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್‌ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಮಾತಾಡಲಿ ಎಂದರು.

ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಂ ಹಬ್ಬಗಳನ್ನು ಕೂಡ ನಾಡಹಬ್ಬ ಎನ್ನಲಿ ಮತ್ತು ಮುಸ್ಲಿಂ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ. ದಸರಾ ಉದ್ಘಾಟನೆಯನ್ನು ಹಿಂದೂಗಳ ಕೈಯಲ್ಲಿ ಮಾಡಿಸಬೇಕಿತ್ತು. ಈ ಹಬ್ಬವನ್ನು ಮೈಸೂರು ಅರಸರು ಮಾಡಿಕೊಂಡು ಬಂದಿದ್ದಾರೆ. ಇದು ಪರಂಪರೆಯೇ ಹೊರತು ಕಾನೂನಲ್ಲ. ಆದ್ದರಿಂದ ಇದಕ್ಕಾಗಿ ಪ್ರತ್ಯೇಕ ಕಾನೂನು ತರುವ ಅಗತ್ಯವಿದೆ. ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದು ಎಂಬಂತೆ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರದಿಂದ ಹಿಂದೂ-ಮುಸ್ಲಿಂ ನಡುವೆ ಒಡಕು ಮೂಡಿದೆ ಎಂದರು.

ಬೆಂಗಳೂರಿನಲ್ಲಿ 5,000 ಕೋಟಿ ರೂ. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದ 20 ಲೀಟರ್‌ ನೀರಿನ ದರವನ್ನು 5 ರಿಂದ 10 ರೂ. ಗೆ ಏರಿಸಲಾಗಿದೆ. ತೈಲ ದರ, ಹಾಲಿನ ದರ ಏರಿಕೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಇನ್ನು ಗಾಳಿಗೂ ಶುಲ್ಕ ತಂದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K. Shivakumar) ಅವರ ಬ್ರ್ಯಾಂಡ್‌ ಬೆಂಗಳೂರು ಸಾಕಾರವಾಗಲಿದೆ. 65-70,000 ಕೋಟಿ ರೂ.ನಷ್ಟು ಹೆಚ್ಚುವರಿ ತೆರಿಗೆಯನ್ನು ಹೇರಲಾಗಿದೆ ಎಂದರು.

ಕಾಂಗ್ರೆಸ್‌ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‌ಗೆ 90% ನಷ್ಟು ಇಂಜಿನಿಯರ್‌ ಇಲ್ಲ. ಪಾಲಿಕೆಯೇ ಪಾಪರ್‌ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ ಕಡೆ ಶಂಕುಸ್ಥಾಪನೆಯಾಗಿ, ಕಾಮಗಾರಿ ಸ್ಥಗಿತವಾಗಿದೆ. ಇಂತಹ ಸ್ಥಿತಿಯಲ್ಲಿ ಆಡಳಿತ ನಡೆಯುವುದಿಲ್ಲ ಎಂದರು.

ವಯನಾಡಿನಲ್ಲಾದ ಆನೆಯಿಂದ ಸತ್ತವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹಾಸನದಲ್ಲಿ ನಡೆದ ಘಟನೆಯಲ್ಲಿ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಹೆಚ್ಚು ಪರಿಹಾರ ನೀಡಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ರಾಜ್ಯದ ಜನರ ಮೇಲೆ ಮಾನವೀಯತೆ ಇಲ್ಲ ಎಂದರು.

ಆನೇಕಲ್‌ನಲ್ಲಿ ಫಲವತ್ತಾದ ಸಾವಿರಾರು ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ. ಬಿಡದಿ ನೀರಾವರಿ ಪ್ರದೇಶವಾಗಿದ್ದು, ಇಲ್ಲಿನ ಸ್ವಾಧೀನವನ್ನು ಹಿಂದಿನ ಸರ್ಕಾರ ರದ್ದು ಮಾಡಿದೆ. ಆದರೆ ಈಗ ಮತ್ತೆ ಸ್ವಾಧೀನ ಮಾಡಲಾಗುತ್ತಿದೆ. ಕೆಂಗೇರಿ, ಯಲಹಂಕ ಸೇರಿದಂತೆ ರೈತರ 50,000 ಎಕರೆ ಜಮೀನನ್ನು ಸ್ವಾಧೀನ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು.

ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ವೇಗವಾಗಿ ಗುಂಡಿ ಅಗೆದಿದೆ. ಆದರೆ ತನಿಖೆ ನಿಧಾನವಾಗಿದೆ. ತನಿಖೆಗೆ ಒಳಪಟ್ಟವರು ಹೊರಗೆ ಬಂದು ಮಾಧ್ಯಮಗಳ ಜೊತೆ ಮಾತಾಡಿದ್ದಾರೆ. ಈ ವಿಚಾರದಲ್ಲಿ ನಾವು ಹೋರಾಟ ಮಾಡುತ್ತೇವೆ. ಇದು ಸರಿಯಾಗಿ ತನಿಖೆಯಾಗಬೇಕು. ಇದಕ್ಕಾಗಿ ಕೋರ್ಟ್‌ ಮೊರೆ ಕೂಡ ಹೋಗುತ್ತೇವೆ. ಧರ್ಮಸ್ಥಳವನ್ನು ಹಾಳು ಮಾಡಲು ಕಮ್ಯುನಿಸ್ಟ್‌ಗಳು ಪ್ರಯತ್ನ ಮಾಡಿದ್ದಾರೆ ಎಂದರು.

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಸುಪ್ರೀಂ ಕೋಟ್‌ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದಾಗಿ ಲಕ್ಷಾಂತರ ರೈತರ, ದೇವಾಲಯಗಳ ಜಮೀನು ಉಳಿದಿದೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!