Don't allow vote rigging: CM Siddaramaiah appeals to the people of the state

ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜಾತಿವ್ಯವಸ್ಥೆಯಿಂದ ಅಸಮಾನತೆ

ದೇಶದಲ್ಲಿ ವಿವಿಧ ಜಾತಿಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಜಾರಿಗೊಂಡ ಸಂಧರ್ಭದಲ್ಲಿ- ವೈರುಧ್ಯತೆಯಿರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದು, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಅಸಮಾನತೆಗಳಿವೆ. ದೇಶದಲ್ಲಿ ಜನರಿಗೆ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಯಶಸ್ವಿಯಾಗುತ್ತದೆ.

12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಬಸವಣ್ಣನವರು ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಜೀವತುಂಬಿದ್ದರು. ಅತ್ಯಂತ ತಳಸಮುದಾಯದವರಾದ ಅಲ್ಲಮ ಪ್ರಭು ಅವರನ್ನು ಅನುಭವ ಮಂಟಪದ ಅಧ್ಯಕ್ಷರಾಗಿಸಿದ್ದರು. ಇದರಲ್ಲಿ ಮಹಿಳೆಯರೂ ಸೇರಿದಂತೆ ಸಮಾಜದ ಎಲ್ಲ ವರ್ಗದವರೂ ಪ್ರಾತಿನಿಧ್ಯವನ್ನು ಹೊಂದಿದ್ದರು. ಎಲ್ಲಿ ಎಲ್ಲ ವರ್ಗದವರ ಅಭಿಪ್ರಾಯಕ್ಕೆ ಬೆಲೆ ದೊರಕುವುದೇ, ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ ಎಂದು ಹೇಳಬಹುದು ಎಂದರು.

ಮತಗಳ್ಳತನದಿಂದ ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದೆ

ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ ‘ನನ್ನ ಮತ ನನ್ನ ಹಕ್ಕು’. ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ ಈಗ ಶ್ರೀಮಂತ ಬಡವ ಬಲ್ಲಿದ ಎಂಬ ಬೇಧವಿಲ್ಲದೇ, ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರು ‘’ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ ಎಂದರು.

ಸಹಿಷ್ಣುತೆ ಹಾಗೂ ಸಹಬಾಳ್ವೆ ಅವಶ್ಯ

ನಮ್ಮ ಜಾತಿ ವ್ಯವಸ್ಥೆಗೆ ಚಲನೆಯಿಲ್ಲದೇ, ಸಮಾಜದಲ್ಲಿ ಆಳವಾಗಿ ಬೇರೂರಿದೆ.ಆರ್ಥಿಕ, ಸಾಮಾಜಿಕ ಸಮಾನತೆ ತರದೇ ಜಾತಿ ವ್ಯವಸ್ಥೇ ನಿರ್ಮೂಲಗೊಳಿಸಲು ಸಾಧ್ಯವಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆತಾಗಮಾತ್ರ ಬದಲಾವಣೆ ಸಾಧ್ಯ. ಹಿಂದಿನಿಂದಿಲೂ ಮಹಿಳೆಯರು ಹಾಗೂ ಶೂದ್ರರು ಅಕ್ಷರ ಸಂಸ್ಕೃತಿ ಹಾಗೂ ಅವಕಾಶಗಳಿಂದ ವಂಚಿಕತರಾಗಿದ್ದ ಕಾರಣ, ಅಸಮಾನತೆ ತಲೆದೋರಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಅಂಬೇಡ್ಕರ್ ಅವರು ಬೋಧಿಸಿದರು. ಸಮಾಜದಲ್ಲಿ ಬಹುಸಂಖ್ಯಾತರು ಎಚ್ಚರದಿಂದಿರಬೇಕು ಎಂದರು.

ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿ, ಧರ್ಮವೂ ಸಮಾನ

ಅಧಿಕಾರವನ್ನು ಉಳಿಸಿಕೊಳ್ಳಲು ಮತಗಳ್ಳತನದ ಹಾದಿಯನ್ನು ಹಿಡಿದಿದ್ದಾರೆ. ಆದ್ದರಿಂದ ನನ್ನ ಮತ ನನ್ನ ಹಕ್ಕು ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದ್ದು, ಮತಗಳ ದುರುಪಯೋಗವಾಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬೇಡಿ.

ಪ್ರಜಾಪ್ರಭುತ್ವ ಉಳಿಸಿ, ಹಕ್ಕುಗಳನ್ನು ರಕ್ಷಿಸುವ ಪ್ರಮಾಣವನ್ನು ಸ್ವೀಕರಿಸಲಾಗಿದೆ. ಸಂವಿಧಾನ ನೀಡುವ ಹಕ್ಕು ಹಾಗೂ ಕರ್ತವ್ಯಗಳ ಪಾಲನೆಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲಾ ಜಾತಿ, ಧರ್ಮವೂ ಸಮಾನವಾಗಿದೆ. ಇಂತಹ ಸಂವಿಧಾನಕ್ಕೆ ಧಕ್ಕೆ ತರುವ ಕೆಲಸವನ್ನು ಮನುವಾದಿಗಳು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಸಂವಿಧಾನ ವಿರೋಧಿಗಳು ಇದ್ದಾರೆ. ಅಸಮಾನತೆ ನಿವಾರಣೆಯಾದರೆ ಶೋಷಣೆ ಸಾಧ್ಯವಿಲ್ಲ.

ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು

ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂದು , ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢೀಸಿಕೊಳ್ಳಬೇಕು. ಜಾತಿಧರ್ಮ, ವರ್ಗವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರಹಿತಾಸಕ್ತಿಗಳು, ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು. ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ಆರ್ಥಿಕ ಅಸಮಾನತೆ ನಿವಾರಣೆಗಾಗಿ ಗ್ಯಾರಂಟಿ ಯೋಜನೆಗಳ ಮೂಲಕ 98950 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಸಂವಿಧಾನ ಆಶಯಗಳ ಅರಿವು ಅಗತ್ಯ

ಸಂವಿಧಾನ ಆಶಯಗಳ ಅರಿವು ಎಲ್ಲರೂ ಹೊಂದಬೇಕೆಂಬ ದೃಷ್ಟಿಯಿಂದ ಸರ್ಕಾರ, ಎಲ್ಲ ಶಾಲೆಗಳಲ್ಲಿ ಸಂವಿಧಾನಪೀಠಿಕೆಯನ್ನು ಓದಲು ಕ್ರಮ ಕೈಗೊಳ್ಳಲಾಗಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥೈಸಿಕೊಳ್ಳಬೇಕು. ಸಂವಿಧಾನದ ಬಗ್ಗೆ ಅರಿವಿಲ್ಲದೇ, ಅದರ ದುರುಪಯೋಗಕ್ಕೆ ಬಲಿಯಾಗುತ್ತಿದ್ದಾರೆ ಎಂದರು.

ಮದ್ದುಗುಂಡುಗಳಿಗಿಂತ ಮತದಾನವೇ ಬಲಾಢ್ಯ: ಡಿ.ಕೆ. ಶಿವಕುಮಾರ್

ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಮಾತನಾಡಿ, ವಿದ್ಯಾರ್ಥಿ, ಯುವ ಜನರಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕಿದೆ. ಮತದಾನ, ಪ್ರಜಾಪ್ರಭುತ್ವದ ಮೌಲ್ಯವನ್ನು ಅರಿತುಕೊಳ್ಳಲು ‘ನನ್ನ ಮತ, ನನ್ನ ಹಕ್ಕು’ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.

“ಮತದಾನ ಮದ್ದುಗುಂಡಿಗಿಂತ ಬಲಾಢ್ಯ ಎನ್ನುವ ಮಾತಿದೆ. ಮಹಾರಾಜರು ಮನೆಯಲ್ಲಿ ಕುಳಿತಿದ್ದಾರೆ. ಮತದಾನದ ಹಕ್ಕಿನಿಂದ ಆಯ್ಕೆಯಾದವರು ಜನಸೇವೆ ಮಾಡುತ್ತಿದ್ದಾರೆ. ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಅನೇಕ ನಾಯಕರ ಉದಯವಾಗಿದ್ದೇ ಮತದಾನದ ಹಕ್ಕಿನಿಂದ.‌ ಜನರ ಮತಗಳಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ. ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿದ್ದೇವೆ” ಎಂದರು.

“ಅರ್ಜುನ ಕೃಷ್ಣನನ್ನು ಒಮ್ಮೆ ಕೇಳುತ್ತಾನೆ. ಎಲ್ಲರು ನಮ್ಮ ಮೇಲೆ ದಾಳಿ ಮಾಡುತ್ತಿದ್ದಾರೆ, ನಿಂದಿಸುತ್ತಿದ್ದಾರೆ, ಬಾಣಗಳನ್ನು ಪ್ರಯೋಗ ಮಾಡುತ್ತಿದ್ದಾರೆ. ಏನೂ ತೋಚದಾಗಿದೆ‌ ಎಂದು.‌ ಆಗ ಕೃಷ್ಣ ‌ಹೇಳುತ್ತಾನೆ, ನಿನ್ನ ಮೇಲೆ ಎಷ್ಟೇ ‌ದಾಳಿಯಾಗಬಹುದು, ಆದರೆ ಕಾಪಾಡುವುದಕ್ಕೆ ಯಾರಾದರೂ ಒಬ್ಬರು ಇದ್ದೇ ಇರುತ್ತಾರೆ ಎಂದು. ಅದೇ ರೀತಿ ಪ್ರಜಾಪ್ರಭುತ್ವ ‌ವ್ಯವಸ್ಥೆಯಲ್ಲಿ ಮತ ಹಾಗೂ ಮತದಾನದ ಹಕ್ಕೇ ನಮ್ಮನ್ನು ಕಾಪಾಡುವುದು. ವಿಚಾರ ಏನೇ ಇರಬಹುದು, ಆದರೆ ಜನರು ತೆಗೆದುಕೊಳ್ಳುವ ತೀರ್ಮಾನ ನಾಯಕರನ್ನು ತಯಾರು ಮಾಡುತ್ತದೆ” ಎಂದು ಹೇಳಿದರು.

“ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇಡೀ ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು. ಈ ಕಲ್ಪನೆ ಇದೇ ನೆಲದಲ್ಲಿ ಹುಟ್ಟಿತು. ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುವ ತತ್ವವನ್ನು ಸಾರಿ, ಜಾತಿ, ಧರ್ಮ, ಪಂಥಗಳ ಬೇಧವಿಲ್ಲದ ಸಮ ಸಮಾಜದ ಕನಸು 900 ವರ್ಷಗಳ ಹಿಂದೆ ಹುಟ್ಟಿತು” ಎಂದರು.

“ಸ್ಪರ್ಧಾತ್ಮಕ ಯುಗದಲ್ಲಿ ನಾಯಕತ್ವ ಗುಣವಿಲ್ಲದಿದ್ದರೆ ಬೆಳವಣಿಗೆ ಸಾಧ್ಯವಿಲ್ಲ. ಸಚಿವರಾದ ಎಚ್.ಸಿ.ಮಹಾದೇವಪ್ಪ ಅವರು ವಿಶ್ವವಿದ್ಯಾಲಯಗಳಿಗೆ ತೆರಳಿ ಪಾಠ ಮಾಡಬಹುದು, ಅಷ್ಟು ಜ್ಞಾನವನ್ನು ಹೊಂದಿದ್ದಾರೆ. ಹೊಸ ಪೀಳಿಗೆಗೆ ಪ್ರಜಾಪ್ರಭುತ್ವ, ಮತದಾನದ ಬಗ್ಗೆ ತಿಳಿಸಬೇಕಿದೆ. ವಿದ್ಯಾರ್ಥಿಗಳಿಗೆ 18 ವರ್ಷವಾದ ನಂತರ ಮತದಾನದ ಮಹತ್ವ ತಿಳಿಯುತ್ತದೆ. ರಾಜಕೀಯದ ವ್ಯಾಖ್ಯಾನದ ಪ್ರಕಾರ ನಲವತ್ತೊಂಬತ್ತು ಸೊನ್ನೆಯಾಗುತ್ತದೆ, ಐವತ್ತೊಂದು ನೂರಾಗುತ್ತದೆ. ನಾನು ಏಳನೇ ತರಗತಿಯಲ್ಲಿ ಇರುವಾಗಲೇ ಶಾಲಾ ಚುನಾವಣೆಯಲ್ಲಿ ಭಾಗವಹಿಸಿದ್ದೆ. ಅಂದು ನನ್ನ ಗುರುತು ನಕ್ಷತ್ರವಾಗಿತ್ತು. ಅಂದು ಸಾರ್ವಜನಿಕ ಜೀವನಕ್ಕೆ ಕಾಲಿಟ್ಟವನು ಇಂದು ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನರ ಸೇವೆ ಮಾಡುತ್ತಿದ್ದೇನೆ” ಎಂದು ಹೇಳಿದರು.

“ಚಾಮರಾಜನಗರದ ಸಂಸದರಾಗಿದ್ದ ದಿವಂಗತ ಧ್ರುವನಾರಾಯಣ ಅವರು ಒಂದು ಮತದ ಅಂತರದಿಂದ ಜಯಗಳಿಸಿದರು. ಅವರ ವಿರುದ್ದ ನಿಂತಿದ್ದ‌ ಪ್ರಸ್ತುತ ಕೊಳ್ಳೆಗಾಲದ ಶಾಸಕರಾಗಿರುವ ಕೃಷ್ಣಮೂರ್ತಿ ಅವರ ಚಾಲಕ ಸಮಯ ಮೀರಿ ಹೋಯಿತು ಎಂದು ಮತ ಹಾಕಲಿಲ್ಲ. ಇದರಿಂದ ಅವರು ಸೋಲಬೇಕಾಯಿತು. ರಾಜಸ್ಥಾನದ ಸಿ.ಪಿ.ಜೋಶಿಯವರು ಎರಡು ಅಥವಾ ಮೂರು ಮತಗಳಿಂದ ಸೋತರು.‌ ಇಲ್ಲದಿದ್ದರೆ ಅಂದು ಮುಖ್ಯಮಂತ್ರಿಗಳಾಗಬೇಕಾತ್ತು. ಆದ ಕಾರಣಕ್ಕೆ ಒಂದೊಂದು ಮತವೂ ಅಮೂಲ್ಯ” ಎಂದರು.

“ದೇಶದಲ್ಲಿ ಮತದಾನದ ವಯಸ್ಸನ್ನು 21 ರಿಂದ‌ 18 ಕ್ಕೆ ಇಳಿಸಿದ‌ ಸಂದರ್ಭ. ನಾನು ಇದೇ ಸಂದರ್ಭದಲ್ಲಿ ಪಾಸ್‌ ಪಡೆದು ಸಂಸತ್ತಿನಲ್ಲಿ ನಡೆಯುತ್ತಿದ್ದ ಚರ್ಚೆಯನ್ನು ವೀಕ್ಷಣೆ ಮಾಡಲು ತೆರಳಿದ್ದೆ. ಅಂದು ವಿರೋಧ ಪಕ್ಷದವರು ರಾಜೀವ್ ಗಾಂಧಿ ಅವರ ವಿರುದ್ದ ಮುಗಿಬಿದ್ದಿದ್ದರು. ಆಡುವ ಮಕ್ಕಳಿಗೆ ಮತದಾನದ ಹಕ್ಕು ನೀಡಲಾಗಿದೆ ಎಂದು ಟೀಕೆ ಮಾಡುತ್ತಿದ್ದರು. ಆಗ ರಾಜೀವ್ ಗಾಂಧಿ ಅವರು ‘ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗೆ ಗಡಿ ಕಾಯಲು ಬಂದೂಕು ನೀಡುತ್ತೇವೆ. ಮತದಾನದ ಹಕ್ಕು ನೀಡುವುದು ತಪ್ಪೇ?’ ಎಂದಿದ್ದರು. ನಾನು ಈ ದೇಶದ ಯುವ ಶಕ್ತಿಯ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದರು” ಎಂದು ನೆನಪನ್ನು ಮೆಲುಕು ಹಾಕಿದರು.

“18 ನೇ ವಯಸ್ಸಿಗೆ ಮಾನಸಿಕ ದೃಢತೆ‌ ಬರುತ್ತದೆ, ಸ್ವಂತವಾಗಿ ಆಲೋಚನೆ ‌ಮಾಡುವ ಶಕ್ತಿ ಬರುತ್ತದೆ. ಮತಗಳಿಗೆ ಯಾರನ್ನು ಬೇಕಾದರೂ ಹೇಗೆ ನಿರೂಪಿಸುವ ಶಕ್ತಿಯಿದೆ” ಎಂದರು.

“ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ, ಪತ್ರಿಕಾಂಗ ಇವು ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ನಾವು ತಪ್ಪು ಮಾಡಿದರೆ ಕಾಯಲು ನ್ಯಾಯಾಂಗವಿದೆ. ಪತ್ರಿಕಾಂಗ ಎಲ್ಲರ ತಪ್ಪನ್ನು ಸಮಾಜಕ್ಕೆ ತೋರಿಸುತ್ತದೆ. ಆದರೆ ಇಂದು ಮತಗಳ್ಳತನಕ್ಕೆ ಕೆಲವರು ಕೈ ಹಾಕಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಾಕಷ್ಟು ಹೆಚ್ಚು-ಕಡಿಮೆಯಾಗಿದೆ. ಇದರ ವಿರುದ್ದ ರಾಹುಲ್ ಗಾಂಧಿಯವರು ಹೋರಾಟ ರೂಪಿಸಿದ್ದಾರೆ” ಎಂದರು.

“ಇಡೀ ದೇಶಕ್ಕೆ ಮಾದರಿಯಾಗುವಂತಹ ಸರ್ಕಾರವನ್ನು ಕರ್ನಾಟಕದ ಜನರು ಅಧಿಕಾರಕ್ಕೆ ‌ತಂದಿದ್ದಾರೆ. ಬಲಿಷ್ಠವಾದ ಸಮಾಜದ ಬಗ್ಗೆ ಕಳಕಳಿ ಇರುವ ಸರ್ಕಾರವನ್ನು ಜನರು ಆರಿಸಲು ಮತದಾನದ ಹಕ್ಕೇ ಕಾರಣ. ಇದಕ್ಕಾಗಿ ಪ್ರಜಾಪ್ರಭುತ್ವ ಉಳಿಯಬೇಕು. ಮತದಾನದ ಹಕ್ಕು ಉಳಿಯಬೇಕು‌. ಯುವ ಪೀಳಿಗೆ ಈ ದೇಶದ ಆಸ್ತಿಯಾಗಬೇಕು” ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!