Guarantee schemes bring light to the lives of poor people: DCM D.K. Shivakumar

ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕಿನಲ್ಲಿ ಬೆಳಕು: ಡಿಸಿಎಂ ಡಿ.ಕೆ. ಶಿವಕುಮಾರ್

ಮಳವಳ್ಳಿ (ಮಂಡ್ಯ): “ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು ಮಾತನಾಡಿದರು.

“ಅನುದಾನದ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಜಿಲ್ಲೆಯ ರೈತರ ಬದುಕಿನ ಉನ್ನತಿ ಸೇರಿದಂತೆ‌ ಎಲ್ಲರ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಸಿದ್ದರಾಮಯ್ಯ ಅವರ ಸರ್ಕಾರ ಪಣತೊಟ್ಟಿದೆ” ಎಂದರು.

“ಮಳವಳ್ಳಿಯ ಜನಪ್ರಿಯ ಶಾಸಕರಾದ ನರೇಂದ್ರ ಸ್ವಾಮಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ₹300 ಕೋಟಿ ರೂ. ಅನುದಾನ ತಂದಿದ್ದಾರೆ. ಮಂಡ್ಯ ಜನತೆಯ ಸೇವೆಗೆ ಕಾಂಗ್ರೆಸ್ ‌ಸರ್ಕಾರ ಬದ್ಧವಾಗಿದೆ. ನಾವು ನಿಮ್ಮ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಬ್ಬರು ಜಿಲ್ಲೆಯಲ್ಲಿ ಶಾಂತಿಭಂಗ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದರು.

“ನಗುವು ಸಹಜದ ಧರ್ಮ, ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ ಎಂದು ಡಿವಿಜಿ ಹೇಳಿದ್ದಾರೆ. ಏನೇ ಬಂದರೂ ಎಲ್ಲರೂ ನಗುತಾ ಒಟ್ಟಾಗಿ ಬಾಳಬೇಕು” ಎಂದು ಕರೆ ನೀಡಿದರು‌.

ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿ ಗುರಿ

“ನಮ್ಮ‌ ಕರ್ನಾಟಕ ಸಾಹಿತ್ಯ, ಸಂಗೀತ, ಚಿತ್ರಕಲೆ, ಶಿಲ್ಪಕಲೆ,‌ ಧಾರ್ಮಿಕ, ಶೈಕ್ಷಣಿಕ ಹೀಗೆ ಅನೇಕ ರಂಗಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ರಾಜ್ಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಿ ನಾವು ಇತರರಿಗೆ ಮಾದರಿಯಾಗಿದ್ದೇವೆ. ಇದರಿಂದ 1.5 ಲಕ್ಷ ಉದ್ಯೋಗ ಸೃಷ್ಟಿಗೆ ನಾವು ಮುಂದಡಿಯಿಟ್ಟಿದ್ದೇವೆ” ಎಂದರು.

“ಕಾವೇರಿ ಆರತಿ ಮೂಲಕ ತಾಯಿಗೆ ನಮನ ಸಲ್ಲಿಸಲು ಹೊರಟಿದ್ದೆವು. ಕೋರ್ಟ್ ನಿರ್ಬಂಧ ‌ಹಾಗೂ ರೈತ ಸಂಘದವರ ಅಡಚಣೆಯಿಂದ‌ ನಿಧಾನವಾಗುತ್ತಿದೆ. ಪ್ರಾರ್ಥನೆ ಸಲ್ಲಿಸಲು, ಆರತಿ ಮಾಡಲು ಯಾರೂ ಸಹ ನಿರ್ಬಂಧ ಮಾಡಲು ಸಾಧ್ಯವಿಲ್ಲ” ಎಂದರು.

“ಈ ಭಾಗದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಪಟ್ಟ ಸಚಿವರು, ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಲಾಗುವುದು. ಪ್ರವಾಸೋದ್ಯಮದಿಂದ ಯುವಕರ ಬದುಕಿನಲ್ಲಿ ಬದಲಾವಣೆಯಾಗಲಿದೆ. ಉದ್ಯೋಗ ಸೃಷ್ಟಿಯಾಗಲಿದೆ. ಕಬಿನಿ ಭಾಗದಲ್ಲಿನ ಪ್ರಾಕೃತಿಕ ಸಂಪತ್ತು ದೇಶದಲ್ಲಿಯೇ ಅಪರೂಪ. ಕರ್ನಾಟಕ ಜಲಪಾತಗಳ ತವರೂರು. ನಮ್ಮ ರಾಜ್ಯದಲ್ಲಿ ಸುಮಾರು 544 ಕ್ಕೂ ಹೆಚ್ಚು ಜಲಪಾತಗಳಿವೆ” ಎಂದರು.

“ಪ್ರವಾಸೋದ್ಯಮದಿಂದ ಸಾಕಷ್ಟು ಅಭಿವೃದ್ಧಿ ಸಾಧ್ಯ. ಕಳೆದ ವರ್ಷ ಸುಮಾರು 10 ಲಕ್ಷ‌ ಜನರು ದಸರಾ ವೀಕ್ಷಣೆ ಮಾಡಿದರು. ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದಸರಾದಲ್ಲಿ ಭಾಗವಹಿಸಿದರು” ಎಂದರು.

“ಹೆಚ್ಚುವರಿ ಕಾವೇರಿ ನೀರಿನ ಸಂಗ್ರಹಕ್ಕಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ನಾನು ಹೋರಾಟ ಪ್ರಾರಂಭ ಮಾಡಿದೆ. ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಲಾಯಿತು. ಪ್ರಕೃತಿಯನ್ನು ಪೂಜಿಸುವುದು ನಮ್ಮ ಸಂಸ್ಕೃತಿ. ಜೂನ್ ತಿಂಗಳಿನಲ್ಲಿಯೇ ಕನ್ನಂಬಾಡಿ ಅಣೆಕಟ್ಟು ತುಂಬಿ ಇತಿಹಾಸ ನಿರ್ಮಾಣವಾಗಿದೆ. ಈ ವರ್ಷ 125 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ತೀರ್ಪಿನ ಪ್ರಕಾರ 177 ಟಿಎಂಸಿ ನೀರು ಹರಿಸಬೇಕಿತ್ತು” ಎಂದರು.

“ಕಾವೇರಿ ತಾಯಿ ನಮಗೆ ಬದುಕು, ಅನ್ನ, ಜನ್ಮ ನೀಡಿದ್ದಾಳೆ.‌‌ ಈಕೆ ಪುಣ್ಯದಾತೆ. ಕೊಡಗಿನಲ್ಲಿ ಜನಿಸಿ ಅರಬ್ಬಿ ಸಮುದ್ರ ಸೇರುವ ತನಕ ಲಕ್ಷಾಂತರ ಜನರಿಗೆ ಜೀವನ ನೀಡಿದ್ದಾಳೆ. ಕಾವೇರಿ ಹರಿಯುವ ಭೂಮಿ ಪವಿತ್ರ ಭೂಮಿ. ಕುಡಿಯುವ ನೀರಿಗೆ, ಕೈಗಾರಿಕೆಗೆ, ವಿದ್ಯುತ್ ಉತ್ಪಾದನೆಗೆ, ಪ್ರಮುಖವಾಗಿ ಕೃಷಿಗೆ, ಮೀನುಗಾರಿಕೆಗೆ ಹೀಗೆ ಪ್ರತಿ ಹಂತದಲ್ಲಿಯೂ ತಾಯಿ ಜೊತೆಯಾಗಿ ನಿಂತಿದ್ದಾಳೆ” ಎಂದರು.

“ಗಗನಚುಕ್ಕಿ ಜಲಪಾತವಿರುವ ಜಾಗ ಐತಿಹಾಸಿಕ ಸ್ಥಳ. ಏಷ್ಯಾದಲ್ಲಿಯೇ ಮೊಟ್ಟಮೊದಲು ಜಲವಿದ್ಯುತ್ ಉತ್ಪಾದನೆ ಮಾಡಿದ ಸ್ಥಳವಿದು. ಶಾಲಾ ದಿನಗಳಲ್ಲಿ ಇಲ್ಲಿಗೆ ಪ್ರವಾಸ ಬಂದಿದ್ದೆ. ಆನಂತರ ವಿದ್ಯುತ್ ಸಚಿವನಾಗಿದ್ದಾಗ ಭೇಟಿ ನೀಡಿದ್ದೆ. ಇಂದು ಮತ್ತೊಮ್ಮೆ ನೋಡುವ ಸೌಭಾಗ್ಯ ದೊರೆತಿದೆ. ಕೆಜಿಎಫ್ ಗೆ ವಿದ್ಯುತ್ ನೀಡಲು 1904 ರಲ್ಲಿ ಇಲ್ಲಿಂದ ವಿದ್ಯುತ್ ಉತ್ಪಾದನೆ ಮಾಡಿ ನೀಡಲಾಯಿತು. ಇಲ್ಲಿಂದ ವಿದ್ಯುತ್ ನೀಡದೇ‌ ಇದ್ದಿದ್ದರೆ ಅಭಿವೃದ್ಧಿಯೇ ಇಲ್ಲವಾಗುತ್ತಿತ್ತು. ಇದರಿಂದ ನಮ್ಮೆಲ್ಲರ ಬದುಕಿಗೆ ಬೆಳಕು ಬಂದಿದೆ” ಎಂದರು.

“ನಮ್ಮ‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿನಲ್ಲಿ ಬೆಳಕು ಬಂದಿದೆ. ಈ ಹಸ್ತ ರೈತರ, ಬಡವರ, ಕೂಲಿಕಾರ್ಮಿಕರ, ಮಹಿಳೆಯರ ಬದುಕನ್ನು ಭದ್ರ‌ ಮಾಡಿದೆ” ಎಂದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!