Bumper gift from Modi government to farmers; R. Ashoka

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಹಿಂದಿನ ಯುಪಿಎ ಸರ್ಕಾರ ಕುಟುಂಬ ರಾಜಕಾರಣ ಮಾಡಿಕೊಂಡು ಭ್ರಷ್ಟ ಆಡಳಿತ ನೀಡಿತ್ತು. ನರೇಂದ್ರ ಮೋದಿ (Narendra Modi) ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಸ್ವಯಂಸೇವಕನಿಂದ ಆರಂಭವಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಬೆಳೆದಿದ್ದಾರೆ. ಕಾಂಗ್ರೆಸ್‌ನಲ್ಲಿ ಕುಟುಂಬದಲ್ಲಿ ಹುಟ್ಟಿದರೆ ನೇರವಾಗಿ ಪಕ್ಷದ ಅಧ್ಯಕ್ಷ ಆಗಬಹುದು. ದೇಶವನ್ನು ಲೂಟಿ ಮಾಡಿದ ಕುಟುಂಬದಲ್ಲಿ ಹೀಗೆಯೇ ನಡೆಯುತ್ತದೆ. ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಎಲ್ಲ ಬಗೆಯ ಭ್ರಷ್ಟಾಚಾರ ಮಾಡಲಾಗಿತ್ತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದರು.

ಈಗ ಕಾಂಗ್ರೆಸ್‌ನವರು ಪ್ರಧಾನಿ ಮೇಲೆ ಇವಿಎಂ ಕುರಿತು ಆಪಾದನೆ ಮಾಡಿದ್ದಾರೆ. ಗೆದ್ದಾಗ ಮಾತಾಡದೇ ಸೋತಾಗ ಮಾತಾಡುತ್ತಾರೆ. ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕನೇ ಅಕ್ರಮ ಮಾಡಿ ಗೆದ್ದಿದ್ದಾನೆ ಎಂದು ಕೋರ್ಟ್‌ ಹೇಳಿದೆ. ಬಿಹಾರದಲ್ಲಿ ಸೋಲುವ ಭಯದಿಂದ ಭ್ರಮನಿರಸನಾಗಿ ಇಂತಹ ಆರೋಪ ಮಾಡಿದ್ದಾರೆ. ಆದರೆ ಪ್ರಧಾನಿ ಮೋದಿ ಈ ಬಗ್ಗೆ ತಲೆ ಕೆಡಿಸಿಕೊಳ್ಳದೆ ದೇಶಸೇವೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮುಂದೆಯೂ ಅಧಿಕಾರಕ್ಕೆ ಬಂದು ದೇಶವನ್ನು ನಂ.1 ಸ್ಥಾನಕ್ಕೆ ಏರಿಸಲಿದ್ದಾರೆ ಎಂದರು.

ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನ, ಸೇನಾಬಲದಲ್ಲಿ ಐದನೇ ಸ್ಥಾನದಲ್ಲಿ ಭಾರತ ಇದೆ. ಪ್ರಪಂಚಕ್ಕೆ ಸವಾಲು ಹಾಕುವ ಚೀನಾ, ಅಮೆರಿಕ ಕೂಡ ಭಾರತದ ಸ್ನೇಹ ಬಯಸಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ. ವಯಸ್ಸಿನ ಆಧಾರದಲ್ಲಿ ಬಿಜೆಪಿಯಲ್ಲಿ ಯಾರನ್ನೂ ಮನೆಗೆ ಕಳುಹಿಸಿಲ್ಲ. ನಮ್ಮಲ್ಲಿ ಅನೇಕ ನಾಯಕರು ವಯಸ್ಸಾದರೂ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಮೋದಿಯವರು ಮುಂದೆಯೂ ಪ್ರಧಾನಿಯಾಗಲಿ ಎಂದರು.

ರೇಷನ್‌ ಕಾರ್ಡ್‌ ರದ್ದು

ಕಾಂಗ್ರೆಸ್‌ ಸರ್ಕಾರ 13 ಲಕ್ಷ ರೇಷನ್‌ ಕಾರ್ಡ್‌ ರದ್ದು ಎಂದು ಹೇಳಿ ಒಳಗೊಳಗೆ 25 ಲಕ್ಷ ಕಾರ್ಡ್‌ ರದ್ದು ಮಾಡಲಿದೆ. ಇದರಿಂದಾಗಿ ಬಡವರಿಗೆ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್‌ ಕಾರ್ಡ್‌ ಇದ್ದವರಿಗೆ ಔಷಧಿ, ಚಿಕಿತ್ಸೆ ಉಚಿತವಿದೆ. ಇಂತಹ ಚಿಕಿತ್ಸೆಗಳಲ್ಲಿ ಹಣ ಉಳಿತಾಯ ಮಾಡಬಹುದು. ಬಡವರಿಗೆ ಎಲ್ಲ ಸೌಲಭ್ಯಗಳು ಸ್ಥಗಿತಗೊಳ್ಳಲಿದೆ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದೆ ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ರಿಂಗ್‌ ರಸ್ತೆಯಲ್ಲೂ ವಾಹನ ಚಲಾಯಿಸಲು ಆಗುವುದಿಲ್ಲ. ಬಿಎಂಟಿಸಿ ಬಸ್ಸುಗಳು ಬಹಳ ನಿಧಾನವಾಗಿ ಚಲಿಸುವಂತಾಗಿದೆ. ಅನೇಕ ಐಟಿ ಕಂಪನಿಗಳು ಹೈದರಾಬಾದ್‌, ಚೆನ್ನೈಗೆ ಹೋಗಲು ಯತ್ನಿಸುತ್ತಿವೆ. ಬಿಜೆಪಿ ಸರ್ಕಾರ ಇದ್ದಾಗ, ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೂ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗ ಅನುದಾನವೇ ಇಲ್ಲ ಎಂದರು.

ಸರ್ಕಾರ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ಸಮೀಕ್ಷೆಗೆ ಹಣ ಹಾಳು ಮಾಡದೆ ಮುಂದೂಡುವುದು ಉತ್ತಮ. ಹಬ್ಬ ಇರುವುದರಿಂದ ಸಮೀಕ್ಷೆಯನ್ನು ಮುಂದೂಡಬೇಕು. ಬೇರೆ ಯಾವುದೇ ಕೆಲಸ ನಡೆಯುತ್ತಿದೆ. ಆರ್ಥಿಕ ಸ್ಥಿತಿ ಹಾಳಾಗಿಹೋಗಿದೆ. ಬೆಳೆ ಹಾನಿ ಪರಿಹಾರಕ್ಕೆ ಹಣ ಕೊಡಲು ಗತಿ ಇಲ್ಲ. ಅನುದಾನ ನೀಡುವುದರಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಪ್ರತಿ ಕ್ಷೇತ್ರವನ್ನೂ ಪ್ರತ್ಯೇಕವಾಗಿ ನೋಡಿ ಅನುದಾನ ನೀಡಬೇಕಾಗುತ್ತದೆ. ಹಾಗಾದರೆ ಮಾತ್ರ ಅದನ್ನು ಅಭಿವೃದ್ಧಿಯ ಪಥ ಎನ್ನಬಹುದು ಎಂದರು.

ಮುಡಾ ಹಗರಣ ಸಂಬಂಧ ಮಾಜಿ ಆಯುಕ್ತರನ್ನು ಇಡಿ ಬಂಧಿಸಿದೆ. ಮುಡಾ ಹಗರಣದಲ್ಲಿ ನಷ್ಟವಾದ ಎಲ್ಲ ಹಣ ವಾಪಸ್‌ ಬರಬೇಕು. ಎಲ್ಲ ರೀತಿಯ ತನಿಖೆಯಾಗಿ ತಪ್ಪಿತಸ್ಥರು ಬಂಧನವಾಗಬೇಕೆಂಬುದು ಬಿಜೆಪಿಯ ಆಗ್ರಹ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಕುಲಗಳನ್ನು ರೂಪಿಸಿದ್ದಾರೆ. ಕುಲವೆಂದು ಹೊಡೆದಾಡಬೇಡಿ ಎಂದು ಕನಕದಾಸರು ಹೇಳಿದರೆ, ಸಿಎಂ ಸಿದ್ದರಾಮಯ್ಯ ಕುಲಗಳು ಹೊಡೆದಾಡಿ ಎನ್ನುವಂತೆ ಮಾಡಿದ್ದಾರೆ. ಕ್ರೈಸ್ತರಲ್ಲೂ ಹಿಂದೂ ಜಾತಿಗಳು ಬಂದಿವೆ. ಹಿಂದೆ ವೀರಶೈವ ಲಿಂಗಾಯತರನ್ನು ಒಡೆದಿದ್ದರು. ಈಗ ಅದನ್ನೇ ಮಾಡಲು ಹೋದರೆ ಕಾಂಗ್ರೆಸ್‌ ಪಕ್ಷವೇ ಒಡೆದುಹೋಗುತ್ತದೆ ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!