ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ (Thefts) ಪ್ರಕರಣಗಳು ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ತೋಡಲಬಂಡೆ, ಅಪಕಾರನಹಳ್ಳಿ, ಚಿಕ್ಕಬೆಳವಂಗಲ, ಉದಿಚಿಕ್ಕನಹಳ್ಳಿ ಗ್ರಾಮಗಳಲ್ಲಿ ಕೆಲವೇ ದಿನಗಳ ಅಂತರದಲ್ಲಿ ಮನೆ ಕಳ್ಳತನ ನಡೆದಿರುವ ಕುರಿತು ದೂರು ದಾಖಲಾಗಿದೆ.
ಹಗಲಿನಲ್ಲಿಯೇ ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಬೀಗ ಮುರಿಯುತ್ತಿರುವ ಚಾಲಾಕಿ ಕಳ್ಳರು, ಚಿನ್ನಾಭರಣ, ನಗದನ್ನು ದೋಚಿ ಪರಾರಿಯಾಗುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್ ಕರಾತ, ಸಬ್ ಇನ್ಸ್ಪೆಕ್ಟರ್ಗಳಾದ ವರಲಕ್ಷಿ, ರಾಜಶ್ರೀ ಜಾಲವಾದಿ ನೇತೃತ್ವದ ತಂಡ ಕಳ್ಳರ ಪತ್ತೆಗೆ ಬಲೆ ಬೀಸಿದೆ.
ಅಲ್ಲದೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಜನರಿಗೆ ಅರಿವು ಮೂಡಿಸುತ್ತಿದ್ದಾರೆ.