H.D. Kumaraswamy appeals to companies not to leave Bengaluru

ಬೆಂಗಳೂರು ಬಿಡದಂತೆ ಕಂಪನಿಗಳಿಗೆ ಹೆಚ್.ಡಿ. ಕುಮಾರಸ್ವಾಮಿ ಮನವಿ

ನವದೆಹಲಿ: ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು; “ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ. We will Make Bengaluru Great Again ಎಂದು ಕಂಪನಿಗಳಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಮತ್ತು ಕರ್ನಾಟಕ ಭ್ರಷ್ಟರ ಕೈಯ್ಯಲ್ಲಿ ಸಿಲುಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಎಂದು ಕೇಂದ್ರ ಸಚಿವರಾದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುವುದು ಬೇಡ. ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಕಂಡೆಲ್ಲೆಲ್ಲ ಕಸದ ರಾಶಿ. ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಆಡಳಿತ ವೈಫಲ್ಯ; ಉದ್ಯಮಿಗಳ ದೂರು ಸರಿ ಇದೆ

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ.ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ಇದಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು ಎಂದು ಲೇವಡಿ ಮಾಡಿದರು.

ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಎಂದು ಅವರು ಕಿಡಿ ಕಾರಿದ್ದಾರೆ

ತೆರಿಗೆ ಹಣ ಏನಾಗುತ್ತಿದೆ?

ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕೆಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!