ಗುಡ್ಮಾರ್ನಿಂಗ್ ನ್ಯೂಸ್: ನೇಕಾರರಿಗೆ ಕಿರುಕುಳದ ಆರೋಪ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

Protest in Doddaballapura against allegations of harassment of weavers

ದೊಡ್ಡಬಳ್ಳಾಪುರ: ರೇಷ್ಮೆ ಮತ್ತು ಕೃತಕ ರೇಷ್ಮೆಗೆ ಬಣ್ಣ ಹಚ್ಚುವ ಘಟಕ ಮತ್ತು ಮಾಲೀಕರ ಮೇಲೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯ ಅಧಿಕಾರಿಗಳು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬುಧವಾರ ಬಣ್ಣ ಘಟಕದ ಮಾಲೀಕರು, ನೂರಾರು ನೇಕಾರರು ನಗರದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಮುಂದೆ ಪ್ರತಿಭಟನೆ (Protest) ನಡೆಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯ ಅಧಿಕಾರಿಗಳು ನಾಲ್ಕು ವರ್ಷಗಳಿಂದ ಬಣ್ಣದ ಘಟಕಗಳ ಮೇಲೆ ಮತ್ತು ಮಾಲೀಕರಿಗೆ ಪದೇ ಪದೇ ನೋಟಿಸ್ ನೀಡಿ ಘಟಕಗಳನ್ನು ಮುಚ್ಚುವಂತೆ ಕಿರುಕುಳ ನೀಡಿದ್ದಾರೆ. ಮಾಲೀಕರಿಗೆ ಅನವಶ್ಯಕ ಭಯ ಹುಟ್ಟಿಸಿ ಬಣ್ಣ ಮಾಡುವ ಉಪಕರಣ ಮತ್ತು ಒಲೆಗಳನ್ನು ಜೆಸಿಬಿ ಮೂಲಕ ಧ್ವಂಸ ಮಾಡಿಸಿದ್ದಾರೆ ಎಂದು ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ. ಹೇಮಂತರಾಜು ದೂರಿದರು.

ಬಣ್ಣದ ಘಟಕದ ಮಾಲೀಕರು ನಿಯಮ ಪಾಲಿಸಿದರೂ ಸಹ ಮಾಲಿನ್ಯ ನಿಯಂತ್ರಣ ಮಂಡಲಿಯ ಅಧಿಕಾರಿಗಳು ಕೆಲವರ ಮಾತು ಕೇಳಿಕೊಂಡು ಘಟಕದ ಮಾಲೀಕರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 20 ಸಾವಿರ ಮಗ್ಗಗಳು ನಡೆಯುತ್ತಿವೆ. ಇಲ್ಲಿನ ಮಗ್ಗಗಳಿಗೆ ಬಣ್ಣ ಮಾಡುವ ಘಟಕಗಳು ಆಸರೆಯಾಗಿವೆ. ಈ ಘಟಕಗಳನ್ನು ಮುಚ್ಚಿದರೆ ದೊಡ್ಡಬಳ್ಳಾಪುರದ ಆರ್ಥಿಕ ಜೀವನಾಡಿಯಾಗಿರುವ ನೇಯ್ದೆ ಉದ್ಯಮಕ್ಕೆ ಪೆಟ್ಟು ಬೀಳಲಿದೆ. ಸ್ಥಗಿತವಾಗಲಿದೆ. ಸುಮಾರು 30ಸಾವಿರ ಜನರ ಉದ್ಯೋಗಕ್ಕೆ ಕುತ್ತು ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

‘ಪರಿಸರದ ಬಗ್ಗೆ ನಮಗೂ ಕಾಳಜಿ ಇದೆ. ಬಣ್ಣ ಹಚ್ಚುವ ಘಟಕವನ್ನು ಒಂದು ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಹಾಗೆ ಸರ್ಕಾರದಿಂದ ಜಾಗ ಮಂಜೂರು ಮಾಡಿಸಿಕೊಟ್ಟು ಮತ್ತು ಬಣ್ಣದ ನೀರು ಸಂಸ್ಕರಿಸುವ ಘಟಕ ನಿರ್ಮಿಸಿಕೊಟ್ಟರೆ ನಗರದಲ್ಲಿರುವ ಘಟಕಗಳನ್ನು ಸ್ಥಳಾಂತರಗೊಳ್ಳಲಾಗುವುದು.

ಒತ್ತಡಗಳಿಗೆ ಮಣಿದು ಬಣ್ಣದ ಘಟಕಗಳಿಗೆ ಕಿರುಕುಳ ನೀಡುವುದು, ದಬ್ಬಾಳಿಕೆ ನಡೆಸುವುದು ನಿಲ್ಲುವವರಿಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.

ನೇಕಾರರ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಕೆ.ಜಿ.ಗೋಪಾಲ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಎಸ್.ಎನ್.ಶಿವರಾಂ, ಸೂರ್ಯ ಪ್ರಕಾಶ್, ಸಂಜೀವಪ್ಪ, ಜೆ.ಎಸ್.ಮಂಜುನಾಥ್, ಖಜಾಂಚಿ ರಂಗಸ್ವಾಮಿ, ಕಾರ್ಯದರ್ಶಿ ರಮೇಶ್ ರೆಡ್ಡಿ, ರಂಗನಾಥ, ಮುಖಂಡರಾದ ರವಿಕುಮಾರ್, ದೊಡ್ಡಬಳ್ಳಾಪುರ ನೇಕಾರರ ವೇದಿಕೆ ಅಧ್ಯಕ್ಷ ಎಸ್.ವೇಣುಗೋಪಾಲ್‌ ಇದ್ದರು.

ತೊಂದರೆ ಕೊಡುವ ಉದ್ದೇಶ ಇಲ್ಲ

ನೇಕಾರರ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ ಪರಿಸರ ಅಧಿಕಾರಿ ಶಿವಕುಮಾರ್, ನೇಕಾರರಿಗೆ ತೊಂದರೆ ಕೊಡುವ ಉದ್ದೇಶ ನಮ್ಮಿಂದವಾಗಿಲ್ಲ. ಬಣ್ಣ ಘಟಕಗಳ ಮೇಲೆ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಹಾಗೂ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ದೂರು ನೀಡಿದ್ದರಿಂದ ನೋಟಿಸ್‌ ನೀಡಬೇಕಾಯಿತು. ಆದರೆ ಘಟಕವನ್ನು ನೆಲಸಮ ಮಾಡಿದ್ದುದರ ಬಗ್ಗೆ ಜಾಗದ ಮಾಲೀಕರಿಂದ ಸ್ಪಷ್ಟನೆ ಕೇಳಲಾಗಿದೆ ಎಂದು ತಿಳಿಸಿದರು.

‘ಬಣ್ಣ ಘಟಕಗಳು ಗುಡಿ ಕೈಗಾರಿಕೆಗಳಾಗಿದ್ದು, ಇದರಲ್ಲಿ ಹೆಚ್ಚಿನ ಲಾಭಇಲ್ಲವೆಂಬುದು ನಮ್ಮ ಅರಿವಿಗೂ ಇದೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕಾದ ಅಗತ್ಯ ಇದೆ. ಜವಳಿ ಸಚಿವರ ಗಮನಕ್ಕೆ ತಂದು, ಘಟಕಗಳಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗುವುದು. ಅಲ್ಲಿಯವರೆಗೆ ಘಟಕಗಳ ತ್ಯಾಜ್ಯ ನೀರನ್ನು ಡ್ರಮ್‌ಗಳಲ್ಲಿ ಸಂಗ್ರಹಿಸಿ, ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವ’ ಭರವಸೆ ನೀಡಿದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]