Congress government is getting 80 percent commission, CM Siddaramaiah should resign: R. Ashoka

ರಾಹುಲ್‌ ಗಾಂಧಿ ಅವರಿಗೆ ಕಾಮನ್‌ಸೆನ್ಸ್‌ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (R.Ashoka) ಅವರಿಗೆ ಕಾಮನ್‌ಸೆನ್ಸ್‌ ಇಲ್ಲ. ಅವರ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ ಅಳಂದ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂದು ಸಾಬೀತಾಗಿದ್ದು, ಕಾಂಗ್ರೆಸ್‌ ಶಾಸಕರ ಸದಸ್ಯತ್ವವೇ ರದ್ದಾಗಿದೆ. ಇಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಅಫಿಡವಿಟ್‌ ನೀಡಿದ್ದರು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ಬಿಹಾರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಕಾಂಗ್ರೆಸ್‌ ನಾಯಕರಿಗೆ ಭ್ರಮನಿರಸನವಾಗಿದೆ. ಅದಕ್ಕಾಗಿ ಮೊದಲೇ ಆರೋಪ ಮಾಡಿ ಕೇವಿಯಟ್‌ ರೀತಿಯಲ್ಲಿ ಮಾಡಿದ್ದಾರೆ. ಆದರೆ ಇವರು ಹಾಕುವ ಪಟಾಕಿಗಳು ಠುಸ್‌ ಆಗಿದೆ. ಚುನಾವಣಾ ಆಯೋಗದ 45 ದಿನ ಗಡುವು ನೀಡಿದೆ. ಆ ಸಮಯದಲ್ಲಿ ಇವರು ಮಣ್ಣು ತಿನ್ನುತ್ತಿದ್ದರು. ದಾಖಲೆ ಇದ್ದರೆ ಆಗಲೇ ಕೋರ್ಟ್‌ಗೆ ಹೋಗಬೇಕಿತ್ತು. ಇದಕ್ಕೆ ಕಾಂಗ್ರೆಸ್‌ ಪಕ್ಷ ಉತ್ತರ ನೀಡಲಿ ಎಂದರು.

ಹಿಟ್‌ ಆಂಡ್‌ ರನ್‌ ರೀತಿಯಲ್ಲಿ ಆರೋಪ ಮಾಡುವುದು ಕಾಂಗ್ರೆಸ್‌ ಜಾಯಮಾನ. ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲೇ ಈ ಬಗ್ಗೆ ಮಾತನಾಡಬೇಕಿತ್ತು. ದಾಖಲೆ ಇಲ್ಲವಾದಾಗ ಮಾಧ್ಯಮಗಳ ಮುಂದೆ ಆರೋಪ ಮಾಡುತ್ತಾರೆ. ಚುನಾವಣಾ ಆಯೋಗದ ಮುಂದೆ ಹೋಗಿ ದಾಖಲೆ ನೀಡಬೇಕಿತ್ತು. ಚುನಾವಣಾ ಆಯೋಗವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಈ ರೀತಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್‌ ಸರಿಯಾಗಿ ಉಳಿದಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯೇ ಪಾಪರ್‌ ಆಗಿದ್ದೇವೆಂದು ಹೇಳಿದ್ದಾರೆ. ತಮಿಳುನಾಡಲ್ಲೂ ಸಮೀಕರಣ ಬದಲಾಗಿದೆ. ಇಂಡಿ ಕೂಟ ಮುಳುಗುತ್ತಿರುವ ಹಡಗಾಗಿದೆ ಎಂದರು.

ಮುಸ್ಲಿಮ್‌ ಸಮುದಾಯದವರು ಅಕ್ರಮ ಮಾಡುತ್ತಿದ್ದಾರೆ. ಬಾಂಗ್ಲಾ ದೇಶದವರು ಇಲ್ಲಿಗೆ ಬಂದು ಮತದಾನ ಮಾಡುತ್ತಾರೆ. ಅಂಥವರಿಗೆ ವೋಟರ್‌ ಐಡಿ ನೀಡುವುದು ಯಾರು? ದೇಶದ ಭದ್ರತೆಯ ದೃಷ್ಟಿಯಿಂದ ಅಂಥವರನ್ನು ವಾಪಸ್‌ ಕಳಿಸಬೇಕು. ಆದರೆ ಕಾಂಗ್ರೆಸ್‌ ದೇಶದ ಭದ್ರತೆಗಿಂತ ಹೆಚ್ಚಾಗಿ ಮತಬ್ಯಾಂಕ್‌ ಮುಖ್ಯ. ಪಾಕಿಸ್ತಾನ, ಬಾಂಗ್ಲಾದವರು ಆ ದೇಶದಲ್ಲೂ ಮತ ಹಾಕಿ, ಇಲ್ಲೂ ಬಂದು ಮತ ಚಲಾಯಿಸುತ್ತಾರೆ. ಒಬ್ಬರಿಗೆ ಒಂದೇ ಓಟು ಎಂಬ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಜಾರಿ ಮಾಡುತ್ತಿದ್ದಾರೆ ಎಂದರು.

ರೇರಾ ಈಗ ಕಲೆಕ್ಷನ್‌ ಸೆಂಟರ್‌ ಆಗಿದೆ. ಒಂದು ಅಡುಗೆಮನೆಗೆ 15,000 ರೂ. ನಿಗದಿ ಮಾಡಲಾಗಿದೆ. ಅದಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲ. ನಿಯಮ ತಂದರೆ ಅದನ್ನು ವಸೂಲಿಗೆ ಬಳಸಿದ್ದಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ 6 ಪ್ರೆಸ್‌ಮೀಟ್‌ ಮಾಡಿ ರಸ್ತೆ ಗುಂಡಿ ಮುಚ್ಚುತ್ತೇವೆ ಎಂದಿದ್ದಾರೆ. ಹಣ ಇಲ್ಲದೆ ಗುಂಡಿ ಮುಚ್ಚಿ ಎಂದರೆ ಯಾರೂ ಮುಚ್ಚುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರ 8,000 ಕೋಟಿ ರೂ. ಬಿಬಿಎಂಪಿಗೆ ನೀಡಿತ್ತು. ಬಿಡಿಎಯಿಂದ ವಿಶೇಷವಾಗಿ 6,000 ಕೋಟಿ ರೂ. ನೀಡಲಾಗಿತ್ತು. ಎರಡೂವರೆ ವರ್ಷದಲ್ಲಿ ಅನುದಾನ ಬಿಡುಗಡೆ ಮಾಡದೆ ರಸ್ತೆಗಳು ಗುಂಡಿ ಬಿದ್ದಿವೆ. ಅಷ್ಟು ಗುಂಡಿಗಳನ್ನು ನವೆಂಬರ್‌ ಒಳಗೆ ಮುಚ್ಚುತ್ತೇವೆ ಎನ್ನುತ್ತಿದ್ದಾರೆ. ಅಷ್ಟು ದೊಡ್ಡ ಕಾಮಗಾರಿಯನ್ನು ಇಷ್ಟು ಬೇಗ ಮಾಡಲು ಸಾಧ್ಯವೇ ಇಲ್ಲ. ಇದು ಸಿಲಿಕಾನ್‌ ವ್ಯಾಲಿ ಅಲ್ಲ, ಗುಂಡಿಗಳ ವ್ಯಾಲಿ ಆಗಿದೆ ಎಂದು ದೂರಿದರು.

ಇಂದಿರಾಗಾಂಧಿಯವರ ಗರೀಬಿ ಹಟಾವೋ ಏನಾಗಿದೆ? ಕಾಂಗ್ರೆಸ್‌ನಿಂದಾಗಿ ಬಡತನ ನಿರ್ಮೂಲನೆ ಆಗಿಲ್ಲ. ಕೇಂದ್ರ ಸರ್ಕಾರದ ಕ್ರಮಗಳಿಂದಾಗಿ ನಮ್ಮಲ್ಲೇ ಉತ್ಪಾದನೆಯಾಗಿ ಬೇರೆ ದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಈಗ ಅಮೆರಿಕ ಕೂಡ ಭಾರತದ ಸ್ನೇಹ ಬಯಸುತ್ತಿದೆ. ಇದೇ ಪ್ರಧಾನಿ ಮೋದಿಯವರ ಶಕ್ತಿ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!