Caste Census: B.Y. Vijayendra calls for listing as Hindu

ಜಾತಿ ಗಣತಿ: ಹಿಂದೂ ಎಂದೇ ನಮೂದಿಸುವಂತೆ ಬಿ.ವೈ.ವಿಜಯೇಂದ್ರ ಕರೆ

ಬೆಂಗಳೂರು: ಧರ್ಮ ಒಡೆಯುವ ಕೆಲಸಕ್ಕೆ ರಾಜ್ಯ ಸರಕಾರ ಕೈ ಹಾಕಿದೆ. ಇದೊಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ಆಕ್ಷೇಪಿಸಿದ್ದಾರೆ. ಯಾವುದೇ ಜಾತಿ, ಸಮಾಜದವರು ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಬೇಕು ಎಂದು ಬಿಜೆಪಿಯ ರಾಜಕೀಯ ಚಿಂತನಾ ಶಿಬಿರದಲ್ಲಿ ನಿರ್ಣಯಿಸಿದ್ದೇವೆ ಎಂದು ತಿಳಿಸಿದರು.

ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‍ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಜಕೀಯ ಚಿಂತನಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ವಿವರಿಸಿದರು. ಜಾತಿ, ಉಪ ಜಾತಿಯನ್ನು ಆಯಾ ಸಮುದಾಯಕ್ಕೆ ಬಿಟ್ಟ ವಿಚಾರ; ಅದನ್ನು ಅವರು ತೀರ್ಮಾನಿಸಬೇಕು ಎಂದರು. ದೇಶ, ರಾಜ್ಯದ ಹಿತದೃಷ್ಟಿಯಿಂದ ಧರ್ಮದ ಕಾಲಂನಡಿ ಹಿಂದೂ ಎಂದು ಬರೆಸಲು ವಿನಂತಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾತಿ ಜನಗಣತಿ ಮಾಡಲು ಮುಂದಾಗಿದೆ. ರಾಜ್ಯಗಳಿಗೆ ಜಾತಿ ಜನಗಣತಿ ಅಧಿಕಾರ ಇಲ್ಲದೇ ಇದ್ದರೂ 47 ಹೊಸ ಜಾತಿಗಳನ್ನು ಸೃಷ್ಟಿಸಿದೆ. ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ನೇಕಾರ, ಕ್ರಿಶ್ಚಿಯನ್ ಪರಿಶಿಷ್ಟ ಜಾತಿ, ಪಂಗಡ ಎಂದು ಗೊಂದಲ ಸೃಷ್ಟಿ ಮಾಡಿದ್ದಾಗಿ ಆರೋಪಿಸಿದರು.

ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂತರಾಜು ವರದಿ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಈ ವರದಿ ಅವೈಜ್ಞಾನಿಕ ಎಂದು ನಾವು ವಿರೋಧಿಸಿದ್ದೆವು. ರಾಹುಲ್ ಗಾಂಧಿಯವರು ಹೇಳಿದ್ದಾರೆಂಬ ಕಾರಣಕ್ಕೆ ಕಾಂತರಾಜು ವರದಿಯನ್ನು ಸಿದ್ದರಾಮಯ್ಯನವರ ಸರಕಾರ ಕಸದ ಬುಟ್ಟಿಗೆ ಹಾಕಿತ್ತು ಎಂದು ಆಕ್ಷೇಪಿಸಿದರು. ಹಿಂದೆಯೂ ಸಿದ್ದರಾಮಯ್ಯರ ಸರಕಾರವು ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಗೊಂದಲ ಸೃಷ್ಟಿಸಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದರು ಎಂದು ಟೀಕಿಸಿದರು.

ಈ ಶಿಬಿರದಲ್ಲಿ ಎರಡು ಮಹತ್ವದ ನಿರ್ಣಯ ಮಾಡಲಾಗಿದೆ. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಎನ್‍ಡಿಎ ಸರಕಾರವು ಸರಳೀಕೃತ ಜಿಎಸ್‍ಟಿ ಮೂಲಕ ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದೆ. ಇದರಿಂದ ರಾಜ್ಯ, ದೇಶದ ಜನರು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಅವರು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಅನೇಕ ಸವಾಲುಗಳು ಭಾರತದ ಮುಂದಿವೆ. ಇಂಥ ಸಂದರ್ಭದಲ್ಲಿ ಇಂಥ ಜಿಎಸ್‍ಟಿ ಸುಧಾರಣೆ ಘೋಷಿಸಿದ್ದು, ಇದಕ್ಕಾಗಿ ಈ ಶಿಬಿರದಲ್ಲಿ ಮೋದಿಜೀ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒಕ್ಕೊರಲ ಅಭಿನಂದನೆ ಸಲ್ಲಿಸಿದ್ದಾಗಿ ವಿವರಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಉಪಮುಖ್ಯಮಂತ್ರಿ ಮತ್ತು ಸಂಸದರಾದ ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಚಿವೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ, ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ರಾಜು ಗೌಡ ನಾಯಕ್ ಅವರು ಉಪಸ್ಥಿತರಿದ್ದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!