CM Siddaramaiah presents Social Justice Journalism Award

ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ.

ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.

ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ

ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು

ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ , ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಮಾನ ಅವಕಾಶಗಳ ಮಹತ್ವ ಬಗ್ಗೆ ಜನರಲ್ಲಿ ಅರಿವು

ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು.

ದಸರಾ- ಸಾಂಸ್ಕೃತಿಕ ನಾಡ ಹಬ್ಬ

ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ನಾವು ವೈರುಧ್ಯಗಳಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದ ದುರ್ಬಲ ವರ್ಗದವರ ಅಭಿವೃದ್ಧಿಯಾದರೆ ಮಾತ್ರ ನಿಜವಾದ ಅಭಿವೃದ್ಧಿ ಎಂದು ಹೇಳಿದ್ದರು.

ಸಮಸಮಾಜದ ಕನಸು ಕಂಡ ಪರ್ತಕರ್ತ

ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು ಎಂದು ವಿವರಿಸಿದರು.

ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು

ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು.

ಮಹಿಳೆಯರಿಗೂ ಸಮಾನತೆ

ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಹೇಗೆ ಬೇರು ಬಿಟ್ಟಿದೆ ಎಂದರೆ ಐದಾರು ವರ್ಷಗಳಲ್ಲಿ, ಹತ್ತಿಪ್ಪತ್ತು ವರ್ಷಗಳಲ್ಲಿ ಹೋಗುವಂತದ್ದಲ್ಲ. ಆದರೆ ಅಸಮಾನತೆಯ ಮಟ್ಟವನ್ನು ಕಡಿಮೆ ಮಾಡಿ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮಹಿಳೆಯರಿಗೂ ಸಮಾನತೆ ಬರಬೇಕು ಎನ್ನುವ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ , ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದರು.

ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ

ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು.

ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!