ದೊಡ್ಡಬಳ್ಳಾಪುರ: ಹೊಸಕೋಟೆ – ದಾಬಸ್ ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಶುಕ್ರವಾರ ಕೊಡಿಗೇಹಳ್ಳಿ ಸಮೀಪ ಲಾರಿ ಹಾಗೂ ಟ್ಯಾಂಕರ್ ನಡುವೆ ಅಪಘಾತ (Accident) ನಡೆದಿದೆ.
ಘಟನೆಯಲ್ಲಿ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂದೆ ಸಾಗುತ್ತಿದ್ದ ಕಂಟೇನರ್ ಸಾಗಿಸುವ ಲಾರಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದೆ ವೇಗ ವಾಗಿ ಬರುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.