ಗೌರಿಬಿದನೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ- ಗೌರಿಬಿದನೂರು ನಡುವಿನ ತಿಪ್ಪಗಾನಹಳ್ಳಿ ಬಳಿ ಸಂಭವಿಸಿದೆ.
ಹಿಂದೂಪುರದಿಂದ ಗೌರಿಬಿದನೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದು, ಮತ್ತೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನಪ್ಪಿದ್ದಾರೆಂದು ಮೂಲಗಳು ತಿಳಿಸಿವೆ. ಅಲ್ಲದೆ ಇಬ್ಬರಿಗೆ ಗಂಭೀರ ಗಾಯ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತರ ಹಾಗೂ ಗಾಯಗೊಂಡವರ ಗುರುತು ಪತ್ತೆಯಾಗಿಲ್ಲವಾಗಿದ್ದು, ಬೆಂಗಳೂರು ಮೂಲದವರು ಎನ್ನಲಾಗುತ್ತಿದೆ.
ಮಂಚೇನಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.