District Collector A.B. Basavaraju launched the socio-educational survey

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ: ಮಹತ್ವದ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ (Socio-educational survey) ಜಿಲ್ಲಾಧಿಕಾರಿ ಎ.ಬಿ ಬಸವರಾಜು (A.B. Basavaraju) ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಆಧಾರ್ ಕಾರ್ಡ್ ಕಡ್ಡಾಯ

ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ ಗೆ ಒಟಿಪಿ ಬರುತ್ತದೆ. ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ ಎಂದರು. ಗಣತೀದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.

ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಹಾಯವಾಣಿ ಸಂಪರ್ಕಿಸಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999,
ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಸಮೀಕ್ಷೆಯ ಕುರಿತು ಏನಾದರೂ ಸಂದೇಹಗಳಿದ್ದಲ್ಲಿ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮುನಿಕೃಷ್ಣ, ಉಪಾಧ್ಯಕ್ಷರಾದ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!