ದೊಡ್ಡಬಳ್ಳಾಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಂಘದ (TAPMCS) ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರ ನೇತೃತ್ವದಲ್ಲಿ, ತಾಲೂಕು ಜೆಡಿಎಸ್ ಅಧ್ಯಕ್ಷ ಲಕ್ಷ್ಮೀಪತಯ್ಯ (Lakshmipathaya) ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಪೂರ್ವಭಾವಿ ಸಭೆಯನ್ನು ಇದೇ ತಿಂಗಳ 24ರ ಬುಧವಾರದಂದು ಕರೆ ನೀಡಲಾಗಿದೆ ಎಂದು ಜೆಡಿಎಸ್ ವಕ್ತಾರ ಕುಂಟನಹಳ್ಳಿ ಮಂಜುನಾಥ್ (Kuntanahlli Manjunath) ತಿಳಿಸಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ನವೆಂಬರ್ 2 ರಂದು ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಂಘ (TAPMCS) ಚುನಾವಣೆ ನಡೆಯಲಿದೆ.
ಈ ಕುರಿತಂತೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಕುರಿತು ಮಹತ್ವದ ಪೂರ್ವ ಭಾವಿಸಭೆಯನ್ನು ಸೆ.24 ರಂದು ಬೆಳಗ್ಗೆ 10.30ಕ್ಕೆ ನಗರದ ಒಕ್ಕಲಿಗರ ಸಮುದಾಯದ ಭವನದ ಸಮೀಪವಿರುವ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಸಭೆಗೆ ಜೆಡಿಎಸ್ ಪಕ್ಷದ ಪದಾಧಿಕಾರಿಗಳು, ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುವ ಆಕಾಂಕ್ಷಿಗಳು, ಸಲಹೆಗಾರರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆ ನೀಡುವಂತೆ ಕುಂಟನಹಳ್ಳಿ ಮಂಜುನಾಥ್ ಅವರು ಕೋರಿದ್ದಾರೆ.