GST tax reduction: BJP celebrates.. R. Ashoka challenges the state government

GST ತೆರಿಗೆ ಇಳಿಕೆ: ಬಿಜೆಪಿ ಸಂಭ್ರಮಾಚರಣೆ.. ರಾಜ್ಯ ಸರ್ಕಾರಕ್ಕೆ ಆರ್.ಅಶೋಕ ಸವಾಲು

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು (Cmsiddaramaiah) ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R.Ashoka) ಹೇಳಿದರು.

ಸೋಮವಾರ ಮಂಡ್ಯದ ಪೇಟೆಬೀದಿಯಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಜಿಎಸ್ ಟಿ ಉಳಿತಾಯ ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ.

ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಕಡಿಮೆ ಅಥವಾ ಹೆಚ್ಚು ಎಂದು ತೋರಿಸಬಹುದು. ಮುಸ್ಲಿಮರು ಹಾಗೂ ಕ್ರೈಸ್ತರಲ್ಲಿ ಅನೇಕ ಜಾತಿಗಳಿದ್ದು, ಅದನ್ನು ಬಹಿರಂಗ ಮಾಡುತ್ತಿಲ್ಲ. ಆದರೆ ಹಿಂದೂಗಳಲ್ಲಿ ತಾರತಮ್ಯ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ, ಮಹಿಳೆಯರಿಗೆ ಬುರ್ಕಾ ಧರಿಸಬೇಕು. ಹೀಗೆ ಎಲ್ಲ ಧರ್ಮಗಳಲ್ಲಿ ತಾರತಮ್ಯ ಇದೆ ಎಂದರು.

ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಅತ್ಯಧಿಕ, ನಂತರ ಒಕ್ಕಲಿಗರ ಸಂಖ್ಯೆ ಇದೆ. ಸಿಎಂ ಸಿದ್ದರಾಮಯ್ಯ ಈ ಪ್ರಮಾಣವನ್ನೇ ಬದಲಿಸಲು ಮುಂದಾಗಿದ್ದಾರೆ. ಒಕ್ಕಲಿಗ ಸಮುದಾಯವನ್ನೇ ಒಡೆಯುತ್ತಿದ್ದಾರೆ. ಹೊಸ ಜಾತಿಗಳನ್ನು ಹುಟ್ಟುಹಾಕಿದ್ದಾರೆ ಎಂದರು.

ಹದಿನೈದು ದಿನಗಳಲ್ಲಿ ಸಮೀಕ್ಷೆ ಮಾಡಲು ಆಗಲ್ಲ. ದಸರಾ ಇರುವುದರಿಂದ ಜನರು ಪ್ರವಾಸ ಮಾಡುತ್ತಾರೆ. ಆದ್ದರಿಂದ ಇದನ್ನು ಮುಂದೂಡಬೇಕು. ಅಲ್ಲದೆ ಕೇಂದ್ರ ಸರ್ಕಾರ ಈಗಾಗಲೇ ಗಣತಿಗೆ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರಕ್ಕೆ ಗಣತಿ ನಡೆಸುವ ಅಧಿಕಾರವಿಲ್ಲ ಎಂದರು‌.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಿಎಸ್ ಟಿ ಇಳಿಕೆ ಮಾಡಿ ಜನರಿಗೆ ಅನುಕೂಲ ಕಲ್ಪಿಸಿದೆ. ಬೆಣ್ಣೆ, ತುಪ್ಪ ಸೇರಿದಂತೆ ದಿನಬಳಕೆ ಸಾಮಗ್ರಿಗಳ ತೆರಿಗೆ 5% ಗೆ ಇಳಿದಿದೆ. ಯುಪಿಎ ಸರ್ಕಾರದಲ್ಲಿ ಸಿಮೆಂಟ್, ಟಿವಿ, ವಾಷಿಂಗ್ ಮಶಿನ್, ಪ್ರಿಡ್ಜ್ ಗೆ 30% ತೆರಿಗೆ ಇದ್ದು, ಈಗ 18% ಕ್ಕೆ ಬಂದಿದೆ. ರೆಸ್ಟೋರೆಂಟ್ ಗಳಿಗೆ 21% ಇದ್ದ ತೆರಿಗೆ 5% ಕ್ಕೆ ಬಂದಿದೆ. ರಸಗೊಬ್ಬರ ಯೂರಿಯಾಗೆ 18% ಇದ್ದು, ಅದೀಗ 5% ಕ್ಕೆ ಇಳಿದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ತೆರಿಗೆ ಭಾರ ಹೆಚ್ಚಿದ್ದು, ಅದನ್ನು ಮೋದಿ ಸರ್ಕಾರ ಕಡಿಮೆ ಮಾಡಿದೆ. ಇದು ಬಡವರಿಗೆ ಒಳ್ಳೆಯ ಸುದ್ದಿ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಇದರಲ್ಲೂ ತಪ್ಪು ಹುಡುಕುತ್ತಿದ್ದಾರೆ. ಜನರಿಗೆ ತೆರಿಗೆ ಇಳಿಸಿದರೆ ನಷ್ಟ ಹೇಗಾಗುತ್ತದೆ ಎಂದು ಅವರೇ ತಿಳಿಸಬೇಕು. ಈ ಸರ್ಕಾರ 25 ಸರಕು, ಸೇವೆಗಳ ದರ ಏರಿಕೆ ಮಾಡಿದೆ. ಹಾಲು, ನೀರು, ವಾಹನ ನೋಂದಣಿ, ಸ್ಟಾಂಪ್ ಡ್ಯೂಟಿ, ಹೀಗೆ ಗಬ್ಬರ್ ಸಿಂಗ್ ಟ್ಯಾಕ್ಸ್ ಹಾಕಲಾಗಿದೆ.

ಗ್ಯಾರಂಟಿಗಳಿಗೆ ಹಣ ಹೊಂದಿಸಲು 65,000 ಕೋಟಿ ರೂ. ಹೆಚ್ಚುವರಿ ತೆರಿಗೆ ಸುಲಿಗೆ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಹಣವೇ ಇಲ್ಲದೆ ಸಣ್ಣ ವರ್ತಕರ ಮೇಲೆ ಜಿಎಸ್ ಟಿ ಹೇರಲಾಗಿತ್ತು. ಆಗ ಇದನ್ನು ಕೇಂದ್ರ ಸರ್ಕಾರ ಮಾಡಿದ್ದು ಎಂದು ಸುಳ್ಳು ಆರೋಪ ಮಾಡಲಾಗಿತ್ತು. ಈ ಸರ್ಕಾರಕ್ಕೆ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿ ‌ತೆರಿಗೆಗಳನ್ನು ಇಳಿಸಬೇಕಿತ್ತು. ತೆರಿಗೆ ಇಳಿಕೆಯಲ್ಲಿ ಸ್ಪರ್ಧೆ ಬರಲಿ ಎಂದರು.

ಮಂಗಳೂರು ಜೀವನ ಗುಣಮಟ್ಟದಲ್ಲಿ, ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ. ಅದೇ ರೀತಿ ಮಂಡ್ಯ ಕೂಡ ಬೆಳೆಯಬೇಕು. ಮಂಡ್ಯದಲ್ಲಿ ಧರ್ಮ ಗಲಭೆಯನ್ನು ನಾವು ಮಾಡುತ್ತಿಲ್ಲ, ಕಾಂಗ್ರೆಸ್ ನಾಯಕರು ಹಾಗೂ ಮತಾಂಧರು ಮಾಡುತ್ತಿದ್ದಾರೆ. ಕೇರಳದ ಮತಾಂಧರು ಇಲ್ಲೂ ಪ್ರಭಾವ ಬೀರುತ್ತಿದ್ದಾರೆ. ಈದ್ ಮಿಲಾದ್ ಮೆರವಣಿಗೆಗೆ ಯಾರೂ ಕಲ್ಲು ತೂರಿಲ್ಲ ಆದರೆ ಗಣೇಶ ಮೆರವಣಿಗೆಗೆ ಮಾತ್ರ ಕಲ್ಲು ತೂರಾಟವಾಗುತ್ತಿದೆ. ಹಿಂದೂಗಳು ಎಲ್ಲೂ ಗಲಭೆ ಮಾಡಿಲ್ಲ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಹೆಚ್ಚಿದ್ದರಿಂದ ಕಂಪನಿಗಳು ಬಿಟ್ಟು ಹೋಗುತ್ತಿವೆ. ಅದಕ್ಕೂ ಅನುದಾನ ಇಲ್ಲ. ಮುಖ್ಯಮಂತ್ರಿ ಸಲಹೆಗಾರರು ಹಾಗೂ ಶಾಸಕರು ಅಭಿವೃದ್ಧಿಗೆ ಹಣ ಇಲ್ಲ ಎಂದಿದ್ದಾರೆ. ಗುಂಡಿ ಮುಚ್ಚಲು ಇನ್ನು ಟೆಂಡರ್ ಕರೆದರೆ ಕಾಮಗಾರಿ ಆರಂಭವಾಗುವುದು ತಡವಾಗಲಿದೆ ಎಂದರು‌.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!