ಈಶ ಗ್ರಾಮೋತ್ಸವ 2025; ಗ್ರ್ಯಾಂಡ್ ಫಿನಾಲೆಯಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ತಂಡ..!

Isha Gramotsava 2025; Heggadihalli team from Doddaballapur emerged as the runner-up in the grand finale..!

ಕೊಯಂಬತ್ತೂರು: ಈಶ ಗ್ರಾಮೋತ್ಸವದಲ್ಲಿ (Isha Gramotsava) ಆಯೋಜಿಸಲಾಗಿದ್ದ ಪುರುಷರ ವಾಲಿಬಾಲ್‌ನಲ್ಲಿ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿಯ ಬಿ.ರಂಜಿತ್ ನೇತೃತ್ವದ ತಂಡವು ರನ್ನರ್‌ಅಪ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕದ ಗ್ರಾಮೀಣ ಆಟಗಾರರ ಶಕ್ತಿ ಹಾಗೂ ಚೈತನ್ಯವನ್ನು ತೋರ್ಪಡಿಸಿದೆ.

Isha Gramotsava 2025; Heggadihalli team from Doddaballapur emerged as the runner-up in the grand finale..!
Isha Gramotsava 2025; Heggadihalli team from Doddaballapur emerged as the runner-up in the grand finale..!

ಮಹಿಳೆಯರ ಥ್ರೋಬಾಲ್‌ನಲ್ಲಿ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಡಗನ್ನೂರಿನಿಂದ ಬಂದ ತಂಡವು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ದೇವರಾಯಪುರಂನಿಂದ ಬಂದ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.

ಈಶ ಗ್ರಾಮೋತ್ಸವ 2025; ಗ್ರ್ಯಾಂಡ್ ಫಿನಾಲೆಯಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ತಂಡ..!

ವಿಜೇತರು ರೂ.5 ಲಕ್ಷ ಬಹುಮಾನ ಪಡೆದರೆ, ರನ್ನರ್-ಅಪ್ ತಂಡ ರೂ.3 ಲಕ್ಷ ಬಹುಮಾನ ಪಡೆಯುವ ಮೂಲಕ ಈಶ ಗ್ರಾಮೋತ್ಸವದ ಎರೆಡು ತಿಂಗಳುಗಳ ಸರಣಿ ಪಂದ್ಯಾವಳಿಗಳಿಗೆ ವಿಜೃಂಭಣೆಯಿಂದ ತೆರೆ ಎಳೆಯಲಾಯಿತು.

“ಇಷ್ಟೊಂದು ಭಾರೀ ಮಟ್ಟದ ಕಾರ್ಯಕ್ರಮವನ್ನು ಸದ್ಗುರುಗಳು ಹೇಗೆ ಆಯೋಜಿಸಿದ್ದಾರೆ ಎಂಬುದನ್ನು ತಿಳಿಯಲು ನಾನು ಈಶ ಗ್ರಾಮೋತ್ಸವಕ್ಕೆ ಬಂದಿದ್ದೇನೆ” ಎಂದು 2025ರ ಈಶ ಗ್ರಾಮೋತ್ಸವದ ಅಪಾರ ವ್ಯಾಪ್ತಿ ಮತ್ತು ಭವ್ಯತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತ, ಭಾರತದ ಕಾರ್ಮಿಕ ಹಾಗೂ ಉದ್ಯೋಗ ಸಚಿವರು ಹಾಗೂ ಯುವಜನಾಂಗ ಮತ್ತು ಕ್ರೀಡಾ ಸಚಿವರಾದ ಮನ್ಸುಖ್ ಮಂಡಾವಿಯಾ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಎರಡು ತಿಂಗಳ ಅವಧಿಯಲ್ಲಿ ನಡೆದ ಈಶ ಗ್ರಾಮೋತ್ಸವದ 2025ರ ಆವೃತ್ತಿಯು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ಆರು ರಾಜ್ಯಗಳಲ್ಲಿ ಮತ್ತು ಮೊದಲ ಬಾರಿಗೆ ಒಡಿಶಾದಲ್ಲಿ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಿತು.

ಈ ಬಾರಿಯ ಉತ್ಸವವು 183 ಸ್ಥಳಗಳು, 5,472 ತಂಡಗಳು, 12,000 ಕ್ಕೂ ಹೆಚ್ಚು ಮಹಿಳೆಯರನ್ನು ಒಳಗೊಂಡಂತೆ ಒಟ್ಟು 63,220 ಸ್ಪರ್ಧಿಗಳು, ಮತ್ತು 35,000ಕ್ಕೂ ಹೆಚ್ಚು ಹಳ್ಳಿಗಳ ಪ್ರಾತಿನಿಧ್ಯಕ್ಕೆ ಸಾಕ್ಷಿಯಾಯಿತು.

“2028ರ ವೇಳೆಗೆ ಈಶ ಗ್ರಾಮೋತ್ಸವವು ದೇಶದ 28 ರಾಜ್ಯಗಳಲ್ಲೂ ನಡೆಯಬೇಕಾಗಿದೆ, ಇದು ನನ್ನ ಬದ್ಧತೆ. ಇದು ಕೇವಲ ಕ್ರೀಡೆಯ ವಿಷಯವಲ್ಲದೆ, ಗ್ರಾಮೀಣ ಭಾರತದಲ್ಲಿ ವಿಭಿನ್ನ ಸ್ತರದ ಜೀವನವನ್ನು ಪುನರ್ಜ್ವಲಿಸುವುದು ಮತ್ತು ಮರುಜಾಗೃತಗೊಳಿಸುವುದೇ ಇದರ ಉದ್ದೇಶ” ಎಂದು ಸಭಿಕರನ್ನುದ್ದೇಶಿಸಿ ಸದ್ಗುರುಗಳು ಹೇಳಿದರು.

2004ರಲ್ಲಿ ಸದ್ಗುರುಗಳು ಚಾಲನೆ ನೀಡಿದ ಈಶ ಗ್ರಾಮೋತ್ಸವವು ಸಾಮಾಜಿಕ ಪರಿವರ್ತನೆಗೆ ಪ್ರಬಲ ಸಾಧನವಾಗಿದೆ, ಇದರಿಂದಾಗಿ ಗ್ರಾಮೀಣ ಜನರು ವ್ಯಸನಗಳಿಂದ ಮುಕ್ತರಾಗಲು, ಜಾತಿ ವಿಭಜನೆಗಳನ್ನು ಮೀರಿ ನಿಲ್ಲಲು, ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಭಾಗಗಳಲ್ಲಿ ಉತ್ಸಾಹಪೂರ್ಣ ಆಟದ ಮನೋಭಾವವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ. ತಂಡವನ್ನು ಗ್ರಾಮ ಪಂಚಾಯಿತಿಯ ಮಿತಿಯೊಳಗಿನ ಆಟಗಾರರೊಂದಿಗೆ ಮಾತ್ರ ರಚಿಸಬಹುದಾಗಿದ್ದು, ಇದು ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಸ್ಥಳೀಯ ಹೆಮ್ಮೆಯನ್ನು ಆಚರಿಸುತ್ತದೆ.

ವೃತ್ತಿಪರ ಆಟಗಾರರಿಗಲ್ಲದೆ, ಈಶ ಗ್ರಾಮೋತ್ಸವವು ಗ್ರಾಮೀಣ ಚೈತನ್ಯದ ಸಂಭ್ರಮಾಚರಣೆಯಾಗಿದೆ. ಇದು ರೈತರು, ದಿನಗೂಲಿ ಕಾರ್ಮಿಕರು ಮತ್ತು ಗೃಹಿಣಿಯರು ಸೇರಿದಂತೆ ಜನಸಾಮಾನ್ಯ ಗ್ರಾಮೀಣ ಜನರಿಗೆ ತಮ್ಮ ದೈನಂದಿನ ಕಾರ್ಯಗಳಿಂದ ಹೊರಬಂದು ಕ್ರೀಡೆಯ ಸಂಭ್ರಮ ಮತ್ತು ಐಕ್ಯತೆಯ ಶಕ್ತಿಯನ್ನು ಆನಂದಿಸಲು ಅವಕಾಶ ನೀಡುತ್ತದೆ.

ಈಶ ಗ್ರಾಮೋತ್ಸವವನ್ನು ಆಯೋಜಿಸುವ ಈಶ ಔಟ್‌ರೀಚ್ಅನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದಿಂದ ‘ನ್ಯಾಷನಲ್ ಸ್ಪೋರ್ಟ್ಸ್ ಪ್ರಮೋಷನ್ ಆರ್ಗನೈಸೇಷನ್’(NSPO) ಎಂದು ಗುರುತಿಸಲಾಗಿದೆ. 2018ರಲ್ಲಿ, ಈ ಉಪಕ್ರಮವು ಬೇರುಮಟ್ಟದ ಕ್ರೀಡೆಗಳಿಗೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರವನ್ನು ಪಡೆಯಿತು.

ರಾಜಕೀಯ

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ. ಲೋಕೇಶ್

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ.

ಬಹುತೇಕ ಖಾಸಗಿಯವರ ಪಾಲಾಗಲಿದ್ದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಉಳಿಸಿದ ಘನಕೀರ್ತಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರಿಗೆ ಸಲ್ಲುತ್ತದೆ ಎಂದು ಆಂಧ್ರ

[ccc_my_favorite_select_button post_id="120730"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]