ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ವ್ಯಂಗ್ಯವಾಡಿದರು.
ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.
ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.
From markets to households, GST Bachat Utsav brings a festive buzz, ensuring lower costs and brighter smiles in every home! pic.twitter.com/hW9ebIw3Ri
— Narendra Modi (@narendramodi) September 22, 2025
GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.
ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.
ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದು: ಸಿಎಂ
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, “ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು” ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.
ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದರು.