Success is only possible through continuous effort.

ಗುಡ್ಮಾರ್ನಿಂಗ್ ನ್ಯೂಸ್: ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ

ದೊಡ್ಡಬಳ್ಳಾಪುರ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಮ್ಮ ವೈಯಕ್ತಿಕ ಸುಖದ ತ್ಯಾಗ, ದೃಢ ಸಂಕಲ್ಪ ಹಾಗೂ ಕಠಿಣ ಪರಿಶ್ರಮ ಇದ್ದರೆ ಯಾರು ಬೇಕಾದರೂ ಯಶಸ್ಸು (Success) ಸಾಧಿಸಬಹುದು. ಅದಕ್ಕಾಗಿ ಮಾನಸಿಕವಾಗಿ ಪಕ್ವವಾಗಿರಬೇಕು ಎಂದು ಪ್ರಾಧ್ಯಾಪಕ ಮತ್ತು ಖ್ಯಾತ ತರಬೇತುದಾರ ಸತೀಶ್ ಜೋಗ ಅಭಿಪ್ರಾಯಪಟ್ಟರು.

ನಗರದಲ್ಲಿ ಪ್ರಥಮವಾಗಿ ಪ್ರಾರಂಭಗೊಂಡಿರುವ ಸೌಭಾಗ್ಯ ಸೇವಾ ಟ್ರಸ್ಟ್‌ನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಬೆಳದಿಂಗಳು ಸ್ಟಡಿ ಸರ್ಕಲ್ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ದೃಢ ಮನಸ್ಸಿನಿಂದ ಸಾಧನೆ ಮಾಡುವವರಿಗೆ ಅಸಾಧ್ಯವಾದುದ್ದು ಯಾವುದೂ ಇಲ್ಲ, ಸಾಧಿಸುವ ಛಲವಿರಬೇಕಷ್ಟೆ .ಸೋತರೆ ಕುಗ್ಗದೆ ಮತ್ತೆ ಪ್ರಯತ್ನ ಮಾಡಿದರೆ ಸೋಲೂ ಗೆಲುವಾಗಿ ಪರಿವರ್ತನೆಗೊಳ್ಳುತ್ತದೆ. ಯಾವ ವಿಷಯವನ್ನು ಎಷ್ಟು ಓದಬೇಕು ಎನ್ನುವುದು ಎಷ್ಟು ಮುಖ್ಯವೋ, ಯಾವ ವಿಷಯವನ್ನು ಓದಬಾರದು ಎಂಬುದರ ಅರಿವು ಅಗತ್ಯ. ಸ್ಪರ್ಧಾರ್ಥಿಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾದ ಸಮಯ ನಿರ್ವಹಣೆಯ ತಂತ್ರವನ್ನು ರೂಪಿಸಿಕೊಂಡರೆ, ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ.

ಸಕಾರಾತ್ಮಕ ಮನೋಭಾವದಿಂದ ಹೋರಾಡಿದರೆ ಬದುಕಿನ ಪ್ರತಿಯೊಂದು ಹಂತದಲ್ಲೂ ಸಾಧನೆ ಸಾಧ್ಯ ಅದಕ್ಕಾಗಿ ಸೂಕ್ತ ತರಬೇತಿ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಿರ್ಣ ರಾಗಲು ಅಗತ್ಯವಾಗಿರುವ ಹತ್ತಾರು ಸರಳ ತಂತ್ರಗಳು, ಮತ್ತು ಓದುವ ವಿಧಾನಗಳ ಬಗ್ಗೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ವಿಶ್ವನಾಥ್ ಮಾತನಾಡಿ, ವಿದ್ಯಾರ್ಥಿಗಳು ದೊಡ್ಡ ಗುರಿಯನ್ನು ಹೊಂದಿಕೊಂಡು ಅದನ್ನು ಸಾಧಿಸುವತ್ತ ಪರಿಶ್ರಮ ಪಡಬೇಕು. ಗುರಿ ದೊಡ್ಡದಾದಷ್ಟೂ ಶಿಸ್ತು, ಸಮಯ ನಿರ್ವಹಣೆ, ನಿತ್ಯದ ಅಧ್ಯಯನ ಅಭ್ಯಾಸವೂ ಗಟ್ಟಿಯಾಗಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕೇವಲ eನದಿಂದ ಮಾತ್ರವಲ್ಲ, ಆತ್ಮವಿಶ್ವಾಸ ಮತ್ತು ಮನೋಬಲದಿಂದಲೂ ಬರುತ್ತದೆ ಎಂದರು.

ತರಬೇತುದಾರರಾದ ನೆಲಮಂಗಲದ ಗೋವಿಂದರಾಜು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ರೀತಿ, ಇಂದಿನ ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ರೀತಿಯನ್ನು ವಿವರವಾಗಿ ತಿಳಿಸಿದರು. ಓದಿನ ಜೊತೆಗೆ ವ್ಯಕ್ತಿತ್ವ ವಿಕಾಸ, ಸಂವಹನ ಕೌಶಲ ಹಾಗೂ ಸಾಮಾನ್ಯ eನಕ್ಕೆ ಸಮಾನ ಆದ್ಯತೆ ನೀಡಿದರೆ, ವಿದ್ಯಾರ್ಥಿಗಳು ಬೇಗ ಗುರಿ ಮುಟ್ಟಬಹುದು ಎಂದರು.

ಬೆಳದಿಂಗಳು ಸ್ಟಡಿ ಸರ್ಕಲ್ ಕಾರ್‍ಯಕ್ರಮ ಸಂಯೋಜಕ ಮಾಳವ ನಾರಾಯಣ್ ಮಾತನಾಡಿ, ಶೀಘ್ರದಲ್ಲಿಯೇ ಕೆಪಿಎಸ್‌ಇ ಯಿಂದ ಪಿ.ಸಿ, ಪಿಎಸ್‌ಐ, ಎಸ್‌ಡಿಎ, ಎಫ್‌ಡಿಎ ಉಪನ್ಯಾಸಕ ಸೇರಿದಂತೆ ಹಲವು ಹುದ್ದೆಗಳಿಗೆ ಅಧಿಸೂಚನೆ ಹೊರ ಬೀಳಲಿವೆ. ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಯನ್ನು ಪಡೆಯಲು ಕ್ರಮಬದ್ಧ ತರಬೇತಿ ಪಡೆಯುವುದು ಅತ್ಯಂತ ಅವಶ್ಯಕ. ಈ ಹಿನ್ನೆಲೆಯಲ್ಲಿ ಬೆಳದಿಂಗಳು ಸ್ಟಡಿ ಸರ್ಕಲ್ನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅಕ್ಟೋಬರ್ 1ರಿಂದ ಮೊದಲ ಬ್ಯಾಚ್ ತರಗತಿಗಳು ಆರಂಭಗೊಳ್ಳಲಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶಿವಕುಮಾರ್, ಗೋವಿಂದ ರಾಜು, ಬೆಳದಿಂಗಳು ಸೌಭಾಗ್ಯ ಸೇವಾ ಟ್ರಸ್ಟ್‌ನ ಜಿ.ರಾಜಗೋಪಾಲ, ಡಾ.ಪರಮೇಶ್ವರ್, ರಾಜೇಂದ್ರ, ಮಾರ್ಗರೆಟ್ ಶರ್ಲಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!