ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ರಾಜಾಜಿನಗರ ರಾಜಾಜಿನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ (S. Suresh Kumar) ಅವರಿಗೆ ಮಾತೃಯೋಗವಾಗಿದೆ.
ಇಂದು ಬೆಳಿಗ್ಗೆ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು ಎಂದು ಬರೆದಿದ್ದಾರೆ.