India has become a strong country under Prime Minister Modi's rule: Basavaraj Bommai

ಪ್ರಧಾನಿ ಮೋದಿಯವರ ಆಡಳಿತದಿಂದ ಭಾರತ ಸಶಕ್ತ ದೇಶವಾಗಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಎಲ್ಲ ರಂಗದಲ್ಲಿ ಕೆಲಸ ಮಾಡಿರುವುದರಿಂದ ಸಶಕ್ತ ಭಾರತ ಅಗಿದೆ. ಅವರ ಕೈ ಬಲ ಪಡಿಸಬೇಕು. ಪ್ರಧಾನಿಯಾಗಿ ಅವರು ಒಂದು ದಶಕ ಪೂರೈಸಿದ್ದಾರೆ. ಇನ್ನೊಂದು ದಶಕ ಪೂರೈಸಿದರೆ ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಶ್ರೀ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷ ಹಾವೇರಿ ಗ್ರಾಮೀಣ ಮಂಡಳದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಏರ್ಪಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೀವನ ಆಧಾರಿತ ಪೋಟೋ ಹಾಗೂ ಬ್ಯಾನರಗಳ ಪ್ರದರ್ಶನವನ್ನು ಉದ್ಘಾಟಿಸಿ, ವೀಕ್ಷಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಅಪರೂಪಕ್ಕೆ ಒಬ್ಬ ದೇಶಭಕ್ತ ಸಿಕ್ಕಿದ್ದಾರೆ.

ಒಬ್ಬ ದಿಟ್ಟ ನಿಲುವಿನ ನಾಯಕ ದೇಶವನ್ನು ಬಲಿಷ್ಠವಾಗಿ ಕಟ್ಟುವ ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ಇಚ್ಚಾಶಕ್ತಿಯಿಂದ ಅದಕ್ಕೆ ಬೇಕಾದ ಕಾರ್ಯಕ್ರಮ ಹಾಕಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತ ಪ್ರಪಂಚದಲ್ಲಿ ಬಲಿಷ್ಠ ಆಗಿದ್ದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕಾರಣ ಆಗಿದೆ ಎಂದು ಹೇಳಿದರು.

ಚಾರಿತ್ರ್ಯವಂತ ವ್ಯಕ್ತಿತ್ವ

ಮೋದಿಯವರು ಬಾಲ್ಯದಿಂದ ಚಾರಿತ್ರ್ಯವಂತ ವ್ಯಕ್ತಿತ್ವ, ಆರ್ ಎಸ್ ಎಸ್ ಸ್ವಯಂ ಸೇವಕರಾಗಿ ಶಿಸ್ತು ಪಡೆದುಕೊಂಡು ಅದನ್ನು ಪ್ರಧಾನಿಯಾಗಿಯೂ ಉಳಿಸಿಕೊಂಡು ಬಂದಿದ್ದಾರೆ‌ ಸ್ವಾಮಿ ವಿವೇಕಾನಂದರ ವಿಚಾಧಾರೆಯಿಂದ ಪ್ರಭಾವಿತರಾಗಿ ಅದರಂತೆ ನಡೆದುಕೊಂಡಿದ್ದಾರೆ.

ಮೋದಿಯವರು ಪ್ರಧಾನಿ ಆಗದಿದ್ದರೆ ಏನಾಗುತ್ತಿತ್ತು. ಮೋದಿ ಪ್ರಧಾನಿ ಆಗುವ ಮೊದಲು ಬೆಂಗಳೂರು, ಮುಂಬೈನಲ್ಲಿ ತಿಂಗಳಿಗೊಮ್ಮೆ ಬಾಂಬ್ ಬ್ಕಾಸ್ಟ್ ಆಗುತ್ತಿದ್ದವು, ಜಮ್ಮು ಕಾಶ್ಮೀರ ಭಯೋತ್ಪಾದನೆ ರಾಜ್ಯವಾಗಿತ್ತು. ಪೊಲಿಸರು ರಸ್ತೆ ಮೇಲೆ ಓಡಾಡುವಂತಿರಲಿಲ್ಲ. ಮೋದಿ ಬಂದ ಮೇಲೆ ಪಾಕಿಸ್ತಾನಿಯರು ಒಳ ನುಸುಳುವುದು ನಿಂತಿದೆ‌. ಇದು ಮೋದಿಯವರ ದೊಡ್ಡ ಸಾಧನೆ.

ಮೊನ್ನೆ ಪೆಹಲ್ಗಾಮ್ ದಾಳಿಯಾದ ಮೇಲೆ ನೂರಾರು ಭಯೋತ್ಪಾದಕರನ್ನು ನಾಶ ಮಾಡಿ ಪಾಕಿಸ್ತಾನಕ್ಕೆ ದಿಟ್ಟ ಉತ್ತರ ಕೊಟ್ಟ ನಾಯಕ ನರೇಂದ್ರ ಮೋದಿ. ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶದಲ್ಲಿ ಶೇ 12% ಹಣ ದುಬ್ಬರ ಇತ್ತು. ಎಲ್ಲ ವಸ್ತುಗಳ ಬೆಲೆ ಏರಿತ್ತು. ಪೆಟ್ರೊಲ್ ಡಿಸೇಲ್, ಹಾಲು ಬ್ರೆಡ್ಡು ಎಲ್ಲದರ ಬೆಲೆ ಹೆಚ್ಚಳ ಆಗಿತ್ತು. ಅದನ್ನು ನಿಯಂತ್ರಿಸಲು ಜಿಎಸ್ ಟಿ ತಂದು ಕ್ರಮ ಕೈಗೊಂಡರು.

ದೇಶದಲ್ಲಿ 25 ಕೋಟಿ ಬಡವರನ್ನು ಮೇಲೆ ಎತ್ತುವ ಕೆಲಸ ಮಾಡಿದ್ದಾರೆ‌. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಮಾಡಿದ್ದಾರೆ. ಈಗಾಗಲೇ ಮೂರೂವರೆ ಲಕ್ಷ ಕೋಟಿ ಗಿಂತ ಹೆಚ್ಚು ಹಣ ರೈತರಿಗೆ ಕೊಟ್ಟಿದ್ದಾರೆ. ಕರ್ನಾಟದಲ್ಲಿ ಸುಮಾರು 64 ಲಕ್ಷ ರೈತರಿಗೆ ಹಣ ಜಮೆ ಆಗುತ್ತಿದೆ. ರೈತರಿಗೆ 5 ಲಕ್ಷದವರೆಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವ ವ್ಯವಸ್ಥೆ ಮಾಡಿದ್ದಾರೆ. ಬೆಳೆ ನಷ್ಟವಾದಾಗ ಬೆಂಬಲ ಬೆಲೆ ಕೊಡುವ ಕೆಲಸ ಮಾಡಿದ್ದಾರೆ. ಜನರ ಆರೋಗ್ಯಕ್ಕಾಗಿ ಆಯುಷ್ಮಾನ ಭಾರತ ಯೋಜನೆ ತಂದು ಪ್ರತಿಯೊಬ್ಬರೂ ಆರೋಗ್ಯವಂತಾಗರಬೆಕು ಎಂದು ಮಾಡಿದ್ದಾರೆ. ಕರ್ನಾಟಕದಲ್ಲಿ 2 ಕೋಟಿ ಜನ ಇದರ ಲಾಭ ಪಡೆಯುತ್ತಿದ್ದಾರೆ‌. ಕರ್ನಾಟಕದಲ್ಲಿ ನಾಲ್ಕು ಕೋಟಿ ಮನೆ ನಿರ್ಮಿಸಿದ್ದಾರೆ‌. ಜಲಜೀವನ್ ಮಿಷನ್ ಮೂಲಕ ಪ್ರತಿ ಮನೆಗೂ ನೀರು ಬರುವಂತೆ ಮಾಡಿದ್ದಾರೆ. ಹೆಣ್ಣು ಮಕ್ಕಳ ಅರೊಗ್ಯ ಹಾಳಾಗಬಾರದು ಎಂದು ಹಳ್ಳಿಗಳಿಗೂ ಅಡುಗೆ ಅನಿಲ ಕೊಟ್ಟಿದ್ದಾರೆ‌.

ಪ್ರತಿ ಮನೆಗೆ ಸೋಲಾರ್ ವಿದ್ಯುತ್ ನೀಡುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆಗೆ ಶೌಚಾಲಯ, ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ 80 ಕೋಟಿ ಜನರಿಗೆ ಕೊಡುತ್ತಿದ್ದಾರೆ‌. ಅನ್ನಭಾಗ್ಯ ಅಕ್ಕಿ ರಾಜ್ಯ ಸರ್ಕಾರದ ಅಕ್ಕಿಯಲ್ಲ‌ ಹೆಸರು ಮಾತ್ರ ರಾಜ್ಯ ಸರ್ಕಾರದ್ದು, ಅಕ್ಕಿ ಕೇಂದ್ರ ಸರ್ಕಾರದ್ದು ಎಂದು ಹೇಳಿದರು.

ನುಡಿದಂತೆ ನಡೆದ ಮೋದಿ

ಮೊನ್ನೆ ಜಿಎಸ್ ಟಿ ಕಡಿಮೆ ಮಾಡುವ ಮುಖಾಂತರ ಗೊಬ್ಬರದ ಧಾರಣೆ ಯಂತ್ರೋಪಕರ, ಟ್ರ್ಯಾಕ್ಟರ್, ರೈತರಿಗೆ ಬೇಕಾಗುವ ಎಲ್ಲ ವಸ್ತುಗಳ ಬೆಲೆ ಕಡಿಮೆ ಆಗುತ್ತವೆ. ಗೋಧಿ, ಅಕ್ಕಿ, ಮೊಸರು, ಹಾಲು, ದಿನನಿತ್ಯ ಬಳಸುವ ವಸ್ತುಗಳ ಧಾರಣೆ ಕಡಿಮೆಯಾಗುತ್ತದೆ. ನುಡಿದಂತೆ ನಡೆದಿರುವುದು ಪ್ರಧಾನಮಂತ್ರಿ ಮೋದಿಯವರು. ಹಲವಾರು ವಸ್ತುಗಳಿಗೆ ಶೂನ್ಯ ತೆರಿಗೆ ಮಾಡಿದ್ದಾರೆ. ಇನ್ನು ಕೆಲವು ವಸ್ತುಗಳಿಗೆ ಶೇ 5% ತೆರಿಗೆ ಮಾಡಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ ತೆರಿಗೆ ಸ್ಲ್ಯಾಬ್ 12, 18, 28 ಇತ್ತು. ಮೋದಿಯವರು ಬಡವರ ಪರವಾಗಿ ರೈತರು, ಹೆಣ್ಣುಮಕ್ಕಳ ಪರವಾಗಿ ಎಲ್ಲ ರಂಗದಲ್ಲಿ ಕೆಲಸ ಮಾಡಿರುವುದುರಿಂದ ಸಶಕ್ತ ಭಾರತ ಅಗಿದೆ. ಅವರ ಕೈ ಬಲ ಪಡಿಸಬೇಕು. ಅವರು ಪ್ರಧಾನಿಯಾಗಿ ಒಂದು ದಶಕ ಪೂರೈಸಿದ್ದಾರೆ. ಇನ್ನೊಂದು ದಶಕ ಪೂರೈಸಿದರೆ ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗುತ್ತದೆ. ಅದಕ್ಕೆ ಎಲ್ಲರೂ ಸಹಾಯ, ಸಹಕಾರ ಮಾಡಬೇಕು. ಪ್ರಧಾನಮಂತ್ರಿ ಮೋದಿಯವರ ಹುಟ್ಟು ಹಬ್ಬ ಅರ್ಥಪೂರ್ಣವಾಗಿ ಆಗಬೇಕು. ಅದನ್ನು ಎಲ್ಲರೂ ಸೇರಿ ಮಾಡೋಣ. ಅದೇ ನಾವು ನರೇಂದ್ರ ಮೋದಿಯವರಿಗೆ ಸಲ್ಲಿಸುವ ಗೌರವ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಹಾವೇರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಗುತ್ತಲ ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!