ದೊಡ್ಡಬಳ್ಳಾಪುರ; ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ನಡು ರಸ್ತೆಯಲ್ಲಿಯೇ ವ್ಯಕ್ತಿಯೋರ್ವನ ಭೀಕರವಾಗಿ ಹತ್ಯೆ (Murder) ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಮೃತನನ್ನು ಬುಲೆಟ್ ರಘು (38 ವರ್ಷ) ಎಂದು ಗುರುತಿಸಲಾಗಿದೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.