ದೊಡ್ಡಬಳ್ಳಾಪುರ: 17 ವರ್ಷದ ಪ್ರಥಮ ಪಿಯುಸಿ (PUC) ವಿದ್ಯಾರ್ಥಿಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಕಲ್ಲುಕುಂಟೆ (Kallukunte) ಕೆರೆಯಲ್ಲಿ ನಡೆದಿದೆ.
ಮೃತನನ್ನು ಕೊಲ್ಕತ್ತಾ ಮೂಲಕ ಸೃಂಜಯ್ ಸಿಂಗ್ (17 ವರ್ಷ) ಎಂದು ಗುರುತಿಸಲಾಗಿದೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲುಕುಂಟೆ ಸಮೀಪದ ಕ್ರಿಯೇಟಿವ್ ಸ್ಕೂಲ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿ ಎನ್ನಲಾಗಿದೆ.
ನಿನ್ನೆ ಕಾಲೇಜಿನ ಹಲವು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಾಡಲು ತೆರಳಿದ್ದರು, ಇಂದು ಸೃಂಜಯ್ ಸಿಂಗ್ ಶವ ಪತ್ತೆಯಾಗಿರಬಹುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇನ್ನೂ ಮೃತ ಬಾಲಕನ ತಂದೆ ಮತ್ತು ತಾಯಿ ಇಬ್ಬರು ಕೊಲ್ಕತ್ತಾ ಮೂಲದವರಾಗಿದ್ದು, ಕ್ರಿಯೇಟಿವ್ ಸ್ಕೂಲ್‌ನಲ್ಲಿಯೇ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಾಲಕ ಸಾವಿಗೆ ಹಲವು ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.