ಕನ್ನಡ ಓದುಗರ ಸಂಖ್ಯೆಯನ್ನು ಹೆಚ್ಚಿಸಿದವರು ಎಸ್.ಎಲ್.ಭೈರಪ್ಪ: ರಾಜಘಟ್ಟ ರವಿ

S.L. Bhairappa was the one who increased the number of Kannada readers: Rajaghatta Ravi

ದೊಡ್ಡಬಳ್ಳಾಪುರ: ಕನ್ನಡ ಓದುಗರ ಸಂಖ್ಯೆಯನ್ನು ಕಾದಂಬರಿಗಳ ಮೂಲಕ ಹೆಚ್ಚಿಸಿದವರು ಎಸ್.ಎಲ್.ಭೈರಪ್ಪ (S.L Bhyarappa) ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ (Rajghatta Ravi) ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನುಡಿನಮನ‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಎಸ್.ಎಲ್.ಭೈರಪ್ಪ ಅವರು ತಮ್ಮ ಪ್ರತಿಯೊಂದೂ ಕಾದಂಬರಿ ಬರೆಯುವುದಕ್ಕೆ ನಡೆಸುತ್ತಿದ್ದ ಪೂರ್ವ ತಯಾರಿ, ವ್ಯಾಪಕ ಅಧ್ಯಯನ, ಸಂಚಾರ ಗಮನಾರ್ಹವಾದುದು. ಸುದೀರ್ಘ ಕಾಲ ಭೈರಪ್ಪನವರ ಕಾದಂಬರಿಗಳು ಓದುಗರ ಮನಸ್ಸನ್ನು ಆಕರ್ಷಣೆಗೊಳಿಸಿವೆ. ಭೈರಪ್ಪ ಅವರ ಕಾದಂಬರಿಗಳು ಭಾರತದ ವಿವಿಧ ಭಾಷೆಗಳಿಗೆ ಅನುವಾದವಾಗಿವೆ. ವಂಶವೃಕ್ಷ, ಸಾಕ್ಷಿ ಮತ್ತು ಪರ್ವ ಕೃತಿಗಳು ಇಂಗ್ಲಿಷ್‌ಗೆ ಭಾಷಾಂತರಗೊಂಡಿವೆ ಎಂದರು.

ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಸಾಹಿತಿಗಳಿಗೆ ಓದುಗರೇ ಪ್ರಶಸ್ತಿ ಮತ್ತು ಪುರಸ್ಕಾರಗಳು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಚಿಂತನೆಗಳನ್ನು ಎಸ್.ಎಲ್.ಭೈರಪ್ಪ ಅವರು ತಮ್ಮ ಸಾಹಿತ್ಯದ ಮೂಲಕ‌ ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಗೊಳಿದರು. ಬದುಕು ಮತ್ತು ಅನುಭವಗಳಿಗೆ ಸೃಜನಾತ್ಮಕವಾಗಿ ಅಭಿವ್ಯಕ್ತಪಡಿಸಲು ಕಾದಂಬರಿ ಪ್ರಕಾರವನ್ನು ಮಾಧ್ಯಮವಾಗಿಸಿಕೊಂಡರು. ಯಾವ ಸಾಹಿತ್ಯ ಪಂಥಗಳ ಗುಂಪಿಗೂ ಒಳಗಾಗದೆ ತಮ್ಮದೇ ವ್ಯಕ್ತಿತ್ವದ ಛಾಪು ಮೂಡಿಸಿದರು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಎಸ್.ಎಲ್. ಭೈರಪ್ಪ ಅವರ ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೇ, ಮತದಾನ, ನಾಯಿನೆರಳು ಕಾದಂಬರಿಗಳು ಚಲನಚಿತ್ರಗಳಾಗಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಗಳಿಗೆ ಪುರಸ್ಕೃತವಾಗಿವೆ. ಗೃಹಭಂಗ’ ದೂರದರ್ಶನದಲ್ಲಿ ಧಾರಾವಾಹಿಯಾಗಿ ಮೂಡಿಬಂದಿದೆ. ಅಪಾರ ಓದುಗ ಮತ್ತು ಅಭಿಮಾನ ಬಳಗವನ್ನು ಹೊಂದಿದ್ದ ಎಸ್.ಎಲ್.ಭೈರಪ್ಪ ಅವರು ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ಎಸ್.ಎಲ್.ಭೈರಪ್ಪ ಅವರ ಸಾಹಿತ್ಯ ಸಾಧನೆಯನ್ನು ಪುರಸ್ಕರಿಸಿ ಪದ್ಮಶ್ರೀ ಪ್ರಶಸ್ತಿ, ‘ಸರಸ್ವತಿ ಸನ್ಮಾನ್ ಮುಂತಾದ ಹಲವಾರು ‌ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಎಸ್.ಎಲ್. ಭೈರಪ್ಪನವರು ಚಿಂತನಶೀಲತೆ ಮತ್ತು ಅನನ್ಯ ಅಧ್ಯಯನಶೀಲತೆ ಯುವ ಮತ್ತು ಉದಯೋನ್ಮುಖ ಬರಹಗಾರರಿಗೆ ಸದಾ ದಾರಿದೀಪವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಜಿಲ್ಲಾ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಾಪ ತೂಬಗೆರೆ ಹೋಬಳಿ ಘಟಕದ ಅಧ್ಯಕ್ಷ ಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದ ಮೇಲ್ವಿಚಾರಕ ಎ.ಅಣ್ಣಯ್ಯ, ಇಸ್ತೂರು ಕೋದಂಡರಾಮ ಭಜನಾ ಮಂಡಳಿಯು ಕಾರ್ಯದರ್ಶಿ ರಂಗಸ್ವಾಮಯ್ಯ, ಶಿಕ್ಷಕ ಕೋದಂಡರಾಮ್, ಕಲಾವಿದರಾದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]