Stop telling old stories and focus on the development of the state: B.Y. Vijayendra

ಹಳೆ ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹಳೆ ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರವು ಯಾವುದೇ ಆಯೋಗಗಳಿಗೆ ಕವಡೆ ಕಾಸಿನ ಕಿಮ್ಮತ್ತನ್ನೂ ನೀಡಿಲ್ಲ; ಕಾಂತರಾಜು ಆಯೋಗಕ್ಕೆ 150 ಕೋಟಿ, 160 ಕೋಟಿ ಖರ್ಚು ಮಾಡಿ, ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದಾಗಿದೆ. ಈಗ 500- 600 ಕೋಟಿ ಖರ್ಚು ಮಾಡಿ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. ನಾಗಮೋಹನ್ ದಾಸ್ ಅವರ ವಿಚಾರದಲ್ಲೂ ಅಷ್ಟೇ ಮಾಡಿದ್ದಾರೆ. ಕಾಂಗ್ರೆಸ್ಸಿನವರು ಬಿಜೆಪಿ ಹಿಂದಿನ ಸರಕಾರದ ಬಗ್ಗೆ ಅಪಪ್ರಚಾರ ಮಾಡಿ, ಅಧಿಕಾರಕ್ಕೆ ಬಂದಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ರಾಜ್ಯ ಸರಕಾರದಲ್ಲಿ ಗೊಂದಲ ಸೃಷ್ಟಿಯಾಗಿ ಜನರು ಅಭಿವೃದ್ಧಿ ಆಗುತ್ತಿಲ್ಲ ಎಂದು ಉಗಿಯಲು ಆರಂಭಿಸಿದಾಗ ಜಾತಿ ಗÀಣತಿಯಂಥ ಗೊಂದಲಗಳನ್ನು ಉಂಟು ಮಾಡುತ್ತಾರೆ. ಕಾಂತರಾಜು ವರದಿ ಕುರಿತು ಕ್ಯಾಬಿನೆಟ್ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ಎಷ್ಟು ಬಾರಿ ಹೇಳಿದ್ದಾರೆ? ಈ ಸರಕಾರಕ್ಕೆ ಗೊಂದಲ ಸೃಷ್ಟಿಸುವ ಮನಸ್ಸಿದೆ ಎಂದು ದೂರಿದರು.

ಜಾತಿ ವಿಷಬೀಜ ಬಿತ್ತಿ ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆಯೇ ವಿನಾ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಗೊಂದಲ ಸೃಷ್ಟಿಸುವುದನ್ನು ಬಿಟ್ಟರೆ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಟೀಕಿಸಿದರು.

ಬೆಂಗಳೂರು ಮಹಾನಗರ ಮಾತ್ರವಲ್ಲದೇ ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ರಸ್ತೆಗಳಲ್ಲಿರುವ ಗುಂಡಿಗಳಿಗೆ ಮುಕ್ತಿ ಕೊಡುವ ಕೆಲಸವನ್ನು ಮಾಡಲು ರಾಜ್ಯ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು. ಅಧಿಕಾರಿಗಳು ಹೋಗಿ ಎಷ್ಟು ರಸ್ತೆ ಗುಂಡಿಗಳಿವೆ ಎಂದು ಲೆಕ್ಕ ಹಾಕಿ ಬಂದಿದ್ದಾರೋ ಗೊತ್ತಿಲ್ಲ. ಹಲವಾರು ಬಾರಿ ಡೆಡ್‍ಲೈನ್ ಕೊಟ್ಟರೂ ಇವತ್ತಿಗೂ ಗುಂಡಿಗಳನ್ನು ಮುಚ್ಚಲು ಈ ಸರಕಾರದ ಕಡೆಯಿಂದ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಹಾಗಾಗಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಒಂದು ಗಂಟೆ ರಸ್ತೆ ತಡೆ ಮಾಡಿದೆ; ಗುಂಡಿಗಳನ್ನೂ ಮುಚ್ಚಿ ರಾಜ್ಯ ಸರಕಾರಕ್ಕೆ ಈ ರಾಜ್ಯದ ಪರಿಸ್ಥಿತಿ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಈಗಲಾದರೂ ರಾಜ್ಯ ಸರಕಾರ ಎಚ್ಚತ್ತುಕೊಂಡು, ಪುಗ್ಸಟ್ಟೆ ಭಾಷಣ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನ ಗೌರವ, ಮರ್ಯಾದೆ ತೆಗೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಅತಿ ಶೀಘ್ರವೇ ಗುಂಡಿಗಳನ್ನು ಮುಚ್ಚಿ ಬೆಂಗಳೂರಿನ ಗೌರವ ಉಳಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!