ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಸಾಹಿತ್ಯ ಲೋಕದ ಮಹಾಪರ್ವ, ಚಿಂತಕ, ಕಾದಂಬರಿಕಾರ, ಪದ್ಮಭೂಷಣ ಎಸ್.ಎಲ್.ಬೈರಪ್ಪ (S.L. Bhyarappa) ಅವರ ಅಗಲಿಕೆಗೆ ಇಡೀ ನಾಡು ಕಂಬನಿ ಮಿಡಿದಿದೆ.
ಭೈರಪ್ಪ ಅವರ ಅಗಲಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ ಹಾಗೂ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆವತಿಯಿಂದ ಪ್ರತ್ಯೇಕವಾಗಿ ಶ್ರದ್ಧಾಂಜಲಿ ಸಲ್ಲಿಸಿವೆ.
ಈ ವೇಳೆ ಮಾತನಾಡಿದ ಮುಖಂಡರು, ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್. ಎಲ್. ಭೈರಪ್ಪ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಒಂದು ಅನರ್ಘ್ಯ ರತ್ನವನ್ನು ಕಳೆದುಕೊಂಡಿದೆ.
ತಮ್ಮ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸಿದ್ದ ಭೈರಪ್ಪನವರು, ಕನ್ನಡ ಮಾತ್ರವಲ್ಲದೆ ತಮ್ಮ ಅನುವಾದಿತ ಕೃತಿಗಳು ಮೂಲಕ ಭಾರತಾದ್ಯಂತ ಅನೇಕ ಭಾಷೆಗಳಲ್ಲಿ ಅಸಂಖ್ಯಾತ ಓದುಗ ಬಳಗವನ್ನು ಸಂಪಾದಿಸಿದ್ದರು.
ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಕುಟುಂಬಕ್ಕೆ, ಅಸಂಖ್ಯಾತ ಓದುಗ ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಹಮಾಮ್ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್ ಎಲ್ ಏನ್ ವೇಣು, ಉಪಾಧ್ಯಕ್ಷ ಜೋಗಳ್ಳಿ ಅಮ್ಮು, ಕಾರ್ಯದರ್ಶಿ ಕೆ.ಆರ್. ಮಂಜುನಾಥ್, ಮುಕ್ಕೇನಹಳ್ಳಿ ರವಿ, ನಗರಾಧ್ಯಕ್ಷ ಶ್ರೀನಗರ ಬಶೀರ್, ಕಾರ್ಯದರ್ಶಿ ಸಿರಾಜ್, ಸೂರಿ, ಮಂಜುನಾಥ್, ಹೇಮಂತ್, ಕೋಡಿಹಳ್ಳಿ ಶಾಖೆಯ ಅಧ್ಯಕ್ಷ ರವಿ, ಉಪಾಧ್ಯಕ್ಷ ಮುನೀಂದ್ರ, ಕಾರ್ಯದರ್ಶಿ ದಯಾನಂದ್, ಭರತ್, ಜೋಗಳ್ಳಿ ಶಾಖೆಯ ಮುನಿ ಕೃಷ್ಣಪ್ಪ ಉಪಸ್ಥಿತರಿದ್ದರು.

ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮುಖಂಡರಾದ ಪಿ ವಾಸು, ನರೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್, ತಾಯಿಗೌಡ, ಜಿಲ್ಲಾ ಮುಖಂಡರಾದ ನಾಗೇಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರೆಡ್ಡಿ, ತಾಲೂಕು ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್, ತಾಲೂಕು ಸಂಘಟನಾ ಕಾರ್ಯದರ್ಶಿ ಶಿವಣ್ಣ, ತಾಲೂಕು ವ್ಯಾಪಾರಿ ಸಂಘದ ಅಧ್ಯಕ್ಷರಾದ ಪ್ರಶಾಂತ್, ಮುಖಂಡರಾದ ಶಿವಣ್ಣ ಮತ್ತಿತರರಿದ್ದರು.