ಬೆಂ. ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ನ ಕೋಟೆಯಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪುರಾತತ್ವ ಸರ್ವೇಕ್ಷಣಾ ಸಚಿವಾಲಯ ಹಾಗೂ ದೇವನಹಳ್ಳಿ ಪುರಸಭೆ ವತಿಯಿಂದ ಏರ್ಪಡಿಸಿದ್ದ 2025 ರ ‘ಸ್ವಚ್ಚತಾ ಹಿ ಸೇವಾ’ ಅಭಿಯಾನದ (Swachhta Hi Seva-2025 movement) ಭಾಗವಾಗಿ ಶ್ರಮಧಾನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ (DC) ಎ.ಬಿ ಬಸವರಾಜು (A.B. Basavaraju) ಭಾಗಿಯಾಗಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದರು.
ಕೋಟೆ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಿ ಬಳಿಕ ಮಾತನಾಡಿ ಸ್ವಚ್ಚತೆಯನ್ನು ಕಾಪಾಡುವುದು ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ. ಯಾವುದೇ ಅಭಿವೃದ್ಧಿ ಕೆಲಸವನ್ನು ತಳಹದಿಯಿಂದ ಮಾಡಿದರೆ ಅದು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಗುತ್ತದೆ. ಹಾಗೇ ಮೊದಲು ನಿಮ್ಮ ಮನೆಯ ಅಂಗಳ ಮತ್ತು ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಯನ್ನು ಮಾಡಿದರೆ ಒಳ್ಳೆಯದು. ಪ್ಲಾಸ್ಟಿಕ್ ಬಳಸುವುದನ್ನು ನಿಲ್ಲಿಸಿ, ಹಸಿರು ಮುಕ್ತ ಸಮಾಜ ನಿರ್ಮಾಣಕ್ಕೆ ನಾವು ಸಾಕ್ಷಿ ಆಗಬೇಕಿದೆ ಎಂದರು.
ಈ ಸಂದರ್ಭದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪುರಾತತ್ವ ಸರ್ವೇಕ್ಷಣಾ ಸಚಿವಾಲಯದ ಪ್ರಾದೇಶಿಕ ನಿರ್ದೇಶಕರಾದ ಡಾ.ಎನ್.ಕೆ ಪಾಠಕ್, ದೇವನಹಳ್ಳಿ ತಹಶೀಲ್ದಾರ್ ಅನಿಲ್.ಎಂ, ಪುರಸಭೆಯ ಮುಖ್ಯಾಧಿಕಾರಿ ಶಿವಮೂರ್ತಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.